ಟಿಕೆಟ್ ಗಾಗಿ ಓಡಾಡುತ್ತಿರುವ ವಿಜಯೇಂದ್ರ ಆಪ್ತನಿಗೆ ಸಂಸದ ಪ್ರಸಾದ್ ಠಕ್ಕರ್!! 

ಹಾಲಿ ಶಾಸಕರಿಗೆ ಟಿಕೆಟ್: ಸಂಸದರು ಇದೇ ವೇಳೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿ, ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಕೊಡಲಾಗುತ್ತದೆ ಎನ್ನುವ ಮೂಲಕ ಕೊಳ್ಳೇಗಾಲದಲ್ಲಿ ಶಾಸಕ ಎನ್.ಮಹೇಶ್ ಹಾಗೂ ಗುಂಡ್ಲುಪೇಟೆಗೆ ಸಿ.ಎಸ್.ನಿರಂಜನ ಕುಮಾರ್ ಹೆಸರು ಫೈನಲ್ ಆಗಿರುವ ಬಗ್ಗೆ ಪರೋಕ್ಷವಾಗಿ ಸುಳಿವು ಕೊಟ್ಟರು.

Written by - Zee Kannada News Desk | Last Updated : Feb 23, 2023, 09:27 PM IST
  • ನಾವು ಯಾರನ್ನೂ ಕಳುಹಿಸಿಲ್ಲ, ತಮಗೂ ಅದಕ್ಕೂ ಸಂಬಂಧವಿಲ್ಲ ಎಂದಿದ್ದಾರೆ
  • ಯಡಿಯೂರಪ್ಪ ಹಾಗೂ ವಿಜಯೇಂದ್ರ ಹೆಸರು ದುರ್ಬಳಕೆ ಆಗುತ್ತಿದೆ ಎಂದು ಕಿಡಿಕಾರಿದ್ದಾರೆ
  • ಟಿಕೆಟ್ ಆಕಾಂಕ್ಷಿಗಳ ಹಗ್ಗಜಗ್ಗಾಟ, ಬೇರೆ ಪಕ್ಷಗಳೊಂದಿಗೆ ಸಂಪರ್ಕ, ಓಡಾಟ ಜೋರಾಗಿದೆ
ಟಿಕೆಟ್ ಗಾಗಿ ಓಡಾಡುತ್ತಿರುವ ವಿಜಯೇಂದ್ರ ಆಪ್ತನಿಗೆ ಸಂಸದ ಪ್ರಸಾದ್ ಠಕ್ಕರ್!!  title=

ಚಾಮರಾಜನಗರ: ಮುಂಬರುವ ಚುನಾವಣೆಯಲ್ಲಿ ಸ್ಥಳೀಯರಿಗೆ, ಸಮರ್ಥ ಅಭ್ಯರ್ಥಿಗೆ ಟಿಕೆಟ್ ಕೊಡಲಾಗುತ್ತದೆ ಎಂದು ಸಂಸದ ವಿ‌.ಶ್ರೀನಿವಾಸಪ್ರಸಾದ್ ಹೇಳುವ ಮೂಲಕ ವಿಜಯೇಂದ್ರ ಆಪ್ತ, ಕೆಆರ್ ಐಡಿಎಲ್ ಅಧ್ಯಕ್ಷ ರುದ್ರೇಶ್ ಗೆ ಠಕ್ಕರ್ ಕೊಟ್ಟರು.

ಚಾಮರಾಜನಗರದಲ್ಲಿ ನಡೆದ ಶಕ್ತಿಕೇಂದ್ರ ಪ್ರಮುಖರ ಸಭೆಯಲ್ಲಿ ಭಾಗಿಯಾಗಿ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಚಾಮರಾಜನಕ್ಕೆ ಬಂದು ಯಾರಾದರೂ ಓಡಾಡಲಿ, ಪ್ರಜಾಪ್ರಭುತ್ವದಲ್ಲಿ ಅದನ್ನು ತಡೆಯಲಾಗಲ್ಲ, ಬಿ.ಎಲ್.ಸಂತೋಷ್ ಸ್ಪಷ್ಟವಾಗಿ ತಿಳಿಸಿದ್ದು ನಮ್ಮ ಅಭಿಪ್ರಾಯಕ್ಕೆ ಮನ್ನಣೆ ಕೊಟ್ಟಿದ್ದು ಸ್ಥಳೀಯರಿಗೆ ಟಿಕೆಟ್ ಸಿಗಲಿದೆ ಕಾದು ನೋಡಿ, 100% ಸ್ಥಳೀಯರಿಗೆ ಟಿಕೆಟ್ ಎಂದು ಹೇಳಿದರು.

ಹಾಲಿ ಶಾಸಕರಿಗೆ ಟಿಕೆಟ್: ಸಂಸದರು ಇದೇ ವೇಳೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿ, ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಕೊಡಲಾಗುತ್ತದೆ ಎನ್ನುವ ಮೂಲಕ ಕೊಳ್ಳೇಗಾಲದಲ್ಲಿ ಶಾಸಕ ಎನ್.ಮಹೇಶ್ ಹಾಗೂ ಗುಂಡ್ಲುಪೇಟೆಗೆ ಸಿ.ಎಸ್.ನಿರಂಜನ ಕುಮಾರ್ ಹೆಸರು ಫೈನಲ್ ಆಗಿರುವ ಬಗ್ಗೆ ಪರೋಕ್ಷವಾಗಿ ಸುಳಿವು ಕೊಟ್ಟರು.

ಇದನ್ನೂ ಓದಿ: ಕಾರ್ಪೇಂಟರ್ ಅಡ್ಡಗಟ್ಟಿ ಕತ್ತು ಕೊಯ್ದು ಬರ್ಬರ ಹತ್ಯೆ

ಪಲಾಯನವಾದಿ ಸಿದ್ದು- ಆಶಾವಾದಿ ಕಾಂಗ್ರೆಸ್: ಸರ್ವೇ ಪ್ರಕಾರ ಕಾಂಗ್ರೆಸ್ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಸರ್ಕಾರದಲ್ಲಿದ್ದವರು ಸೋತು 141 ಸ್ಥಾನ ಎಂದು ಹೇಳುತ್ತಿರುವುದು ಕಾಂಗ್ರೆಸ್ ನ ಆಶಾವಾದಿತನ, ಕ್ಷೇತ್ರದಿಂದ ಕ್ಷೇತ್ರಕ್ಕೆ ಪಲಾಯನ ಮಾಡುತ್ತಿರುವ ಸಿದ್ದರಾಮಯ್ಯ ಹಾಗೂ ಅವರ ಪಕ್ಷದವರು 141 ಗೆಲ್ಲುತ್ತದೆ ಎಂದು ಹೇಳಿದರೇ ನಾವು ಸರ್ಕಾರದಲ್ಲಿರುವವರು ಎಷ್ಟು ಧೈರ್ಯದಿಂದ, ಆತ್ಮವಿಶ್ವಾಸದಿಂದ ಹೇಳಬಹುದು....,ನಮಗೆ ಸ್ಪಷ್ಟ ಬಹುಮತ ಸಿಗಲಿದೆ, ಬಿಜೆಪಿ ಸರ್ಕಾರ ಬರಲಿದೆ ಎಂದು ಹೇಳಿದರು.

ಕಾಡಾ ಅಧ್ಯಕ್ಷರ ಆಕ್ರೋಶ: ಇನ್ನು, ಕಾಡಾ ಅಧ್ಯಕ್ಷ ಹಾಗೂ ಚಾಮರಾಜನಗರ ಬಿಜೆಪಿ ಟಿಕೆಟ್ ಆಕಾಂಕ್ಷಿ ನಿಜಗುಣರಾಜು ಸುದ್ದಿಗಾರರೊಂದಿಗೆ ಮಾತನಾಡಿ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಸ್ಥಳೀಯರಿಗೆ ಟಿಕೆಟ್ ಎಂದು ಹೇಳಿದ್ದಾರೆ, ಕಾಸು ಇದ್ದವರು ಬಂದು ಇಲ್ಲಿ ನಾಟಕ ಮಾಡಿಸಬಹುದು, ಹಣ ಕೊಡಬಹುದು ಎಂದು ರುದ್ರೇಶ್ ವಿರುದ್ಧ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ಬಾಡೂಟದ ಬಳಿಕ ದೇವಸ್ಥಾನಕ್ಕೆ ತೆರಳಿದ ಸಿ ಟಿ ರವಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ವಿಜಯೇಂದ್ರ ಹಾಗೂ ಯಡಿಯೂರಪ್ಪ ಅವರಿಗೆ ರುದ್ರೇಶ್ ಓಡಾಡುತ್ತಿರುವ ಬಗ್ಗೆ ಗಮನಕ್ಕೆ ತಂದ ವೇಳೆ ನಾವು ಯಾರನ್ನೂ ಕಳುಹಿಸಿಲ್ಲ, ತಮಗೂ ಅದಕ್ಕೂ ಸಂಬಂಧವಿಲ್ಲ ಎಂದಿದ್ದಾರೆ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಹೆಸರು ದುರ್ಬಳಕೆ ಆಗುತ್ತಿದೆ ಎಂದು ಕಿಡಿಕಾರಿದ್ದಾರೆ. 

ಮನೆ ಮಾಡಿರುವ ರುದ್ರೇಶ್: ವಿಜಯೇಂದ್ರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ರುದ್ರೇಶ್ ಕಳೆದ 6-7 ತಿಂಗಳುಗಳಿಂದ ಚಾಮರಾಜನಗರದಲ್ಲಿ ಓಡಾಡುತ್ತಿದ್ದು ತಾವು ಕೂಡ ಟಿಕೆಟ್ ಆಕಾಂಕ್ಷಿ ಎಂದು ಸ್ಪಷ್ಟಪಡಿಸಿದ್ದಾರೆ. ಚಾಮರಾಜನಗರದಲ್ಲಿ ಸುಸಜ್ಜಿತ, ಮನೆ ಹಾಗೂ ಕಚೇರಿಯನ್ನು ತೆರೆದು ತಮ್ಮದೇ ಅನುಯಾಯಿಗಳ ಮೂಲಕ ಓಡಾಡುತ್ತಿದ್ದಾರೆ. 

ಒಟ್ಟಿನಲ್ಲಿ ಚುನಾವಣಾ ಸಮಯ ಹತ್ತಿರವಾಗುತ್ತಿದ್ದು ಟಿಕೆಟ್ ಆಕಾಂಕ್ಷಿಗಳ ಹಗ್ಗಜಗ್ಗಾಟ, ಬೇರೆ ಪಕ್ಷಗಳೊಂದಿಗೆ ಸಂಪರ್ಕ, ಓಡಾಟ ಜೋರಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News