ಆಸ್ಪತ್ರೆಯಿಂದ ಮಠಕ್ಕೆ ಸಿದ್ದಗಂಗಾ ಶ್ರೀ ಶಿಫ್ಟ್

ಸ್ವಾಮೀಜಿ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಂಡಿಲ್ಲ. ಆದರೆ, ಅವರು ಮಠದಲ್ಲಿಯೇ ಉಳಿಯುವ ಇಂಗಿತ ವ್ಯಕ್ತಪಡಿಸಿದ್ದರಿಂದ ಅವರನ್ನು ಮಠಕ್ಕೆ ಶಿಫ್ಟ್ ಮಾಡಲಾಗಿದೆ ಎಂದು ವೈದ್ಯರು ಹೇಳಿದ್ದಾರೆ. 

Last Updated : Jan 16, 2019, 09:32 AM IST
ಆಸ್ಪತ್ರೆಯಿಂದ ಮಠಕ್ಕೆ ಸಿದ್ದಗಂಗಾ ಶ್ರೀ ಶಿಫ್ಟ್ title=

ತುಮಕೂರು: ನಗರದ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಮಠಕ್ಕೆ ಸ್ಥಳಾಂತರಿಸಲಾಗಿದೆ.

ಬುಧವಾರ ಮುಂಜಾನೆ 3.50 ರಲ್ಲಿ ಸಿದ್ದಗಂಗಾ ಆಸ್ಪತ್ರೆಯಿಂದ ಆಂಬುಲೆನ್ಸ್​ನಲ್ಲಿ ಶ್ರೀಗಳನ್ನು ವೈದ್ಯರು ಮಠಕ್ಕೆ ಸ್ಥಳಾಂತರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಾ.ಪರಮೇಶ್ ಅವರು, ಸ್ವಾಮೀಜಿ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಂಡಿಲ್ಲ. ಆದರೆ, ಅವರು ಮಠದಲ್ಲಿಯೇ ಉಳಿಯುವ ಇಂಗಿತ ವ್ಯಕ್ತಪಡಿಸಿದ್ದರಿಂದ ಅವರನ್ನು ಮಠಕ್ಕೆ ಶಿಫ್ಟ್ ಮಾಡಲಾಗಿದೆ ಎಂದು ಹೇಳಿದ್ದಾರೆ. 

ಈ ಹಿಂದೆ ಪಿತ್ತನಾಳದಲ್ಲಿ ಉಂಟಾಗುತ್ತಿದ್ದ ಸೋಂಕಿನ ಶಸ್ತ್ರಚಿಕಿತ್ಸೆಗಾಗಿ ಡಿ.7 ರಂದು ಶ್ರೀಗಳನ್ನು ಚೆನ್ನೈನ ರೇಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಅವರನ್ನು ಮಠಕ್ಕೆ ಕರೆತಂದು ಶೀಗಳ ಕೊಠಡಿಯಲ್ಲಿಯೇ ಎಲ್ಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಕೆಲ ದಿನಗಳ ಹಿಂದೆ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

Trending News