ಸಿಇಟಿ ಪರೀಕ್ಷೆ ದಿನವೇ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಪ್ರಮಾಣ ವಚನ: ವಿದ್ಯಾರ್ಥಿಗಳಿಗೆ ಟ್ರಾಫಿಕ್‌ ಸಮಸ್ಯೆ ಭೀತಿ

CM-DCM swearing Ceremony: ಮೇ 20ರಂದು ಮೊದಲ ದಿನ ಗಣಿತ ಮತ್ತು ಜೀವಶಾಸ್ತ್ರದ ಪರೀಕ್ಷೆ ಇದ್ದು, ಬೆಳಗ್ಗೆ 10.30ಕ್ಕೆ ಸಿಟಿಇ ಪರೀಕ್ಷೆಗಳು ಆರಂಭವಾಗಲಿವೆ. ಇದೇ ದಿನ ಮಧ್ಯಾಹ್ನ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಬೆಳಗ್ಗೆಯಿಂದಲೇ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆಗಳಿಂದ ಪಕ್ಷದ ಕಾರ್ಯಕರ್ತರು, ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ತುಮಕೂರು ರಸ್ತೆ, ಮೈಸೂರು ರಸ್ತೆ, ಬಳ್ಳಾರಿ ರಸ್ತೆ ಸೇರಿದಂತೆ ನಗರದ ಬಹುತೇಕ ಎಲ್ಲ ಭಾಗಗಳ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸುಗಮ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇದೆ. 

Written by - Yashaswini V | Last Updated : May 19, 2023, 10:42 AM IST
  • ಈ ವರ್ಷ 2,61,610 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
  • ಒಟ್ಟು 592 ಕೇಂದ್ರಗಳಲ್ಲಿ 121 ಕೇಂದ್ರಗಳು ಬೆಂಗಳೂರಿನಲ್ಲಿವೆ
  • ರಾಜ್ಯದ ಉಳಿದ ಭಾಗದಲ್ಲಿ 471 ಕೇಂದ್ರಗಳಿವೆ
ಸಿಇಟಿ ಪರೀಕ್ಷೆ ದಿನವೇ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಪ್ರಮಾಣ ವಚನ: ವಿದ್ಯಾರ್ಥಿಗಳಿಗೆ ಟ್ರಾಫಿಕ್‌ ಸಮಸ್ಯೆ ಭೀತಿ title=

CET Exam: Siddaramaiah-DK Shivakumar swearing Ceremony: ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪರೀಕ್ಷೆಯ ದಿನದಂದು ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮೇ 20 ರ ಶನಿವಾರದಂದು ಸಂಭವನೀಯ ಸಂಚಾರ ದಟ್ಟಣೆಯ ಬಗ್ಗೆ KCET 2023 ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಸಿಇಟಿ ಪರೀಕ್ಷೆ ದಿನವೇ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಪ್ರಮಾಣ ವಚನ: ವಿದ್ಯಾರ್ಥಿಗಳಿಗೆ ಟ್ರಾಫಿಕ್‌ ಸಮಸ್ಯೆ ಭೀತಿ: -
ಮೇ 20ರ ಶನಿವಾರದಂದು ಕೆಸಿಇಟಿ-2023 ಪರೀಕ್ಷೆಯ ಮೊದಲ ದಿನ. ಕಂಠೀರವ ಕ್ರೀಡಾಂಗಣದಲ್ಲಿ ಅದೇ ದಿನ ಮಧ್ಯಾಹ್ನ 12.30ಕ್ಕೆ ಅದ್ಧೂರಿಯಾಗಿ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯುತ್ತಿದ್ದು,  ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸಂಚಾರ ದಟ್ಟಣೆಯಿಂದ ತಮ್ಮ ಪರೀಕ್ಷೆಗೆ ಅಡ್ಡಿ  ಉಂಟಾಗಬಹುದೆಂಬ ಆತಂಕದಲ್ಲಿದ್ದಾರೆ.

ಸಿಇಟಿ ಪರೀಕ್ಷೆ ದಿನವೇ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಹೀಗಾಗಿ ನಗರದ ಬಹುತೇಕ ಎಲ್ಲ ಭಾಗಗಳ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸುಗಮ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇದ್ದು, ಇದರಿಂದ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ (CBD) ಪ್ರದೇಶಗಳಲ್ಲಿ ಪರೀಕ್ಷಾ ಕೇಂದ್ರಗಳಿರುವ ವಿದ್ಯಾರ್ಥಿಗಳು ಚಿಂತಿತರಾಗಿದ್ದಾರೆ. 

ಇದನ್ನೂ ಓದಿ- 75ನೇ ವಯಸ್ಸಿನಲ್ಲೂ ಸಿದ್ದರಾಮಯ್ಯರಿಗೆ ʼಕರುನಾಡಿನ ಅಧಿಪತ್ಯʼ ಸಿಕ್ಕಿದ್ದು ಹೇಗೆ..! ʼಸಿದ್ದು ಸಿಎಂ ರಹಸ್ಯʼ ಇಲ್ಲಿದೆ ನೋಡಿ.

ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಮೇ 20 ಮತ್ತು 21ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ಮತ್ತೊಂದೆಡೆ ನಾಳೆ ಶನಿವಾರ ಮಧ್ಯಾಹ್ನ 12.30ಕ್ಕೆ ಬೆಂಗಳೂರಿನಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಏರ್ಪಡಿಸಿರುವುದರಿಂದ ಪರೀಕ್ಷಾರ್ಥಿಗಳಿಗೆ ಟ್ರಾಫಿಕ್‌ ಸಮಸ್ಯೆ ಭೀತಿ ಶುರುವಾಗಿದೆ.

ಮೇ 20ರಂದು ಮೊದಲ ದಿನ ಗಣಿತ ಮತ್ತು ಜೀವಶಾಸ್ತ್ರದ ಪರೀಕ್ಷೆ ಇದ್ದು, ಬೆಳಗ್ಗೆ 10.30ಕ್ಕೆ ಸಿಟಿಇ ಪರೀಕ್ಷೆಗಳು ಆರಂಭವಾಗಲಿವೆ. ಇದೇ ದಿನ ಮಧ್ಯಾಹ್ನ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಬೆಳಗ್ಗೆಯಿಂದಲೇ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆಗಳಿಂದ ಪಕ್ಷದ ಕಾರ್ಯಕರ್ತರು, ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ತುಮಕೂರು ರಸ್ತೆ, ಮೈಸೂರು ರಸ್ತೆ, ಬಳ್ಳಾರಿ ರಸ್ತೆ ಸೇರಿದಂತೆ ನಗರದ ಬಹುತೇಕ ಎಲ್ಲ ಭಾಗಗಳ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸುಗಮ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇದೆ. 

ಈ ಬಾರಿಯ ಸಿಇಟಿಗೆ 2.61 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ರಾಜ್ಯಾದ್ಯಂತ 562 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಪೈಕಿ ಬೆಂಗಳೂರಿನಲ್ಲೇ 121 ಕೇಂದ್ರಗಳಿದ್ದು ನಗರದ ಹೃದಯ ಭಾಗದ ವಿವಿಧ ಕಾಲೇಜುಗಳನ್ನು ಪರೀಕ್ಷಾ ಕೇಂದ್ರಗಳಾಗಿ ಗುರುತಿಸಲಾಗಿದೆ. ಸುಮಾರು 85 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೆಂಗಳೂರಿನಲ್ಲೇ ಪರೀಕ್ಷೆ ಬರೆಯಲಿದ್ದಾರೆ. ಪ್ರಮಾಣ ವಚನ ಸಮಾರಂಭ ನಡೆಯಲಿರುವ ಕಂಠೀರವ ಕ್ರೀಡಾಂಗಣದ ಸುತ್ತಮುತ್ತಲ ಕೆಲ ಕಾಲೇಜುಗಳನ್ನು ಪರೀಕ್ಷಾ ಕೇಂದ್ರಗಳಾಗಿ ಗುರುತಿಸಲಾಗಿದೆ. ಹಾಗಾಗಿ ಈ ವಿದ್ಯಾರ್ಥಿಗಳು ಭಾರೀ ಸಂಚಾರ ದಟ್ಟಣೆ ಸಮಸ್ಯೆಯಿಂದ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಸಾಧ್ಯವಾಗದಿರಬಹುದು ಎಂದು ಆತಂಕಕ್ಕೀಡಾಗಿದ್ದಾರೆ.

ಇದನ್ನೂ ಓದಿ- ಲಿಂಗಾಯತ ಶಾಸಕರಿಗೆ ಸೂಕ್ತ ಸ್ಥಾನಮಾನ ನೀಡದಿದ್ದರೆ ಎಂಪಿ ಚುನಾವಣೆಯಲ್ಲಿ ತಕ್ಕ ಪಾಠ- ಶಿವನಾಂದ ಜಮಾಧಾರ

ಈ ಮಧ್ಯೆ, ಪ್ರಮಾಣ ವಚನ ಸಮಾರಂಭದಿಂದ ಸಿಇಟಿ ವಿದ್ಯಾರ್ಥಿಗಳಿಗೆ ಸಂಚಾರ ದಟ್ಟಣೆಯ ಸಮಸ್ಯೆಯಾಗಲಿದೆಯಾ ಎಂಬ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಬೆಂಗಳೂರು ನಗರ ಸಂಚಾರ ಪೊಲೀಸರಿಗೆ ಪತ್ರ ಬರೆದು ಸಲಹೆ ಕೇಳಿದೆ. ಸಮಾರಂಭಕ್ಕೆ ಎಷ್ಟು ಜನ ಬರಬಹುದು. ಯಾವ್ಯಾವ ಭಾಗದಲ್ಲಿ ಸಮಸ್ಯೆ ಆಗಬಹುದು ಎಂಬ ಮಾಹಿತಿಯನ್ನು ಪೊಲೀಸರು ನೀಡಿದರೆ ಇದನ್ನು ಸರ್ಕಾರದ ಗಮನಕ್ಕೆ ತಂದು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ಯಾವ ಕ್ರಮ ಕೈಗೊಳ್ಳಬೇಕೆಂದು ನಿರ್ಧರಿಸಲು ಸಾಧ್ಯವಾಗುತ್ತದೆ. ಈ ಬಗ್ಗೆ ಪೊಲೀಸರು ಇಂದು ಸಂಜೆಯೊಳಗೆ ಮಾಹಿತಿ ನೀಡುವ ಸಾಧ್ಯತೆ ಇದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಟ್ರಾಫಿಕ್ ಪೊಲೀಸರೊಂದಿಗೆ ಸಂಪರ್ಕದಲ್ಲಿದೆ ಮತ್ತು ಸಂಚಾರ ಸಲಹೆಯನ್ನು ಮೇ 19 ಶುಕ್ರವಾರ ಬಿಡುಗಡೆ ಮಾಡಲಾಗುವುದು. ಸಿಬಿಡಿ ಪ್ರದೇಶದಲ್ಲಿ ಹೆಚ್ಚಿನ ರಸ್ತೆ ತಡೆಗಳಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳುತ್ತಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News