H Vishwanath : ಸಿದ್ದರಾಮಯ್ಯಗೆ ಅವಕಾಶ ಸಿಕ್ಕಿದೆ, ಡಿಕೆಶಿಗೆ ಸಿಎಂ ಅವಕಾಶ ಸಿಗಬೇಕು : ಹೆಚ್.ವಿಶ್ವನಾಥ್

ಡಿಕೆ ಶಿವಕುಮಾರ್ ಅದೇ ಪಕ್ಷದಲ್ಲಿ ಇದ್ದವರು ಅವರಿಗೆ ಅವಕಾಶ ಸಿಗಬೇಕು ಎಂದು ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ.

Last Updated : Jun 25, 2021, 12:50 PM IST
  • ಸಿದ್ದರಾಮಯ್ಯ ಅವರು ಬೇರೆ ಪಕ್ಷದಿಂದ ಬಂದವರು. ಅವರಿಗೆ ಸಿಎಂ ಅವಕಾಶ ಕೊಟ್ಟಾಗಿದೆ
  • ಡಿಕೆ ಶಿವಕುಮಾರ್ ಅದೇ ಪಕ್ಷದಲ್ಲಿ ಇದ್ದವರು ಅವರಿಗೆ ಅವಕಾಶ ಸಿಗಬೇಕು
  • ಒಬ್ಬ ಮಾಜಿ ಮುಖ್ಯಮಂತ್ರಿಯಾದವರು ಕ್ಷೇತ್ರ ಹುಡುಕಾಟದಲ್ಲಿದ್ದಾರೆ
H Vishwanath : ಸಿದ್ದರಾಮಯ್ಯಗೆ ಅವಕಾಶ ಸಿಕ್ಕಿದೆ, ಡಿಕೆಶಿಗೆ ಸಿಎಂ ಅವಕಾಶ ಸಿಗಬೇಕು : ಹೆಚ್.ವಿಶ್ವನಾಥ್ title=

ಬೆಂಗಳೂರು : ಸಿದ್ದರಾಮಯ್ಯ ಅವರು ಬೇರೆ ಪಕ್ಷದಿಂದ ಬಂದವರು. ಅವರಿಗೆ ಸಿಎಂ ಅವಕಾಶ ಕೊಟ್ಟಾಗಿದೆ. ಡಿಕೆ ಶಿವಕುಮಾರ್ ಅದೇ ಪಕ್ಷದಲ್ಲಿ ಇದ್ದವರು ಅವರಿಗೆ ಅವಕಾಶ ಸಿಗಬೇಕು ಎಂದು ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್. ವಿಶ್ವನಾಥ್(H Vishwanath), ಸಿದ್ದರಾಮಯ್ಯಗೆ ಕ್ಷೇತ್ರವೇ ಇಲ್ಲ. ಒಬ್ಬ ಮಾಜಿ ಮುಖ್ಯಮಂತ್ರಿಯಾದವರು ಕ್ಷೇತ್ರ ಹುಡುಕಾಟದಲ್ಲಿದ್ದಾರೆ. ಇಂಥ ಪರಿಸ್ಥಿತಿ ಬರಬಾರದು.. ಶಿಷ್ಯಂದಿರು ಎಲ್ಲವನ್ನೂ ಮಾತನಾಡುತ್ತಾರೆ. ಶಿಷ್ಯಂದಿರು 150 ಸೀಟು ಬರುತ್ತದೆ ಎಂದು ಹೇಳುತ್ತಾರೆ. ಆದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಯಾಕೆ 70 ಕ್ಕೆ ಬಂದು ನಿಂತಿರಿ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ : 1 to 10th Standard Students : ರಾಜ್ಯ ಸರ್ಕಾರದಿಂದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ!

ಸಿಎಂ ಸ್ಥಾನ ಉಂಡು ಬಿಸಾಡುವುದಲ್ಲ. ಅದನ್ನು ಸ್ವಚ್ಛವಾಗಿಟ್ಟು ಮುಂದೆ ಬರುವವರಿಗೆ ಅವಕಾಶ ಕೊಡಬೇಕು.ಒಂದು ಸಲ ಸಿದ್ದರಾಮಯ್ಯ(Siddaramaiah)ಗೆ ಅವಕಾಶ ಸಿಕ್ಕಿದೆ. ಈಗ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ. ಮಲ್ಲಿಕಾರ್ಜುನ ಖರ್ಗೆ ಇದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : Heavy Rainfall : ರಾಜ್ಯದಲ್ಲಿ ಜೂ. 28ರವರೆಗೂ ಭಾರೀ ಮಳೆ..!

  ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News