ಮಾದಪ್ಪನ ಬೆಟ್ಟದಲ್ಲಿ 30 ದಿನದಲ್ಲಿ 2 ಕೋಟಿ ಸಂಗ್ರಹ: 19 ವಿದೇಶಿ ಕರೆನ್ಸಿ ಪತ್ತೆ

Male Mahadeshwara Hills: ಅಮಾವಾಸ್ಯೆ , ಹೊಸವರ್ಷ ಸರ್ಕಾರಿ ರಜಾ ದಿನ, ಶಬರಿಮಲೆ, ಓಂ ಶಕ್ತಿ ಯಾತ್ರಾರ್ಥಿಗಳು ಹಾಗೂ ರಾಜ್ಯ ಸರ್ಕಾರದ  ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ   ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಭರಪೂರ ಆದಾಯ.   

Written by - Yashaswini V | Last Updated : Jan 24, 2025, 12:39 PM IST
  • ಹನೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಭರಪೂರ ಆದಾಯ
  • 30 ದಿನಗಳ ಅವಧಿಯಲ್ಲಿ 2.29 ಕೋಟಿ ರೂ. ಸಂಗ್ರಹ
  • ಅಮಾವಾಸ್ಯೆ , ಹೊಸವರ್ಷ ಶಬರಿಮಲೆ, ಓಂ ಶಕ್ತಿ ಯಾತ್ರಾರ್ಥಿಗಳ ಭೇಟಿ ಹಿನ್ನೆಲೆ ಹೆಚ್ಚು ಆದಾಯ
ಮಾದಪ್ಪನ ಬೆಟ್ಟದಲ್ಲಿ 30 ದಿನದಲ್ಲಿ 2 ಕೋಟಿ ಸಂಗ್ರಹ: 19 ವಿದೇಶಿ ಕರೆನ್ಸಿ ಪತ್ತೆ title=

Male Mahadeshwara Hills Hundi Collection: ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ  ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ  2.29 ಕೋಟಿ ರೂ. ಸಂಗ್ರಹವಾಗಿದೆ. 

ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. 
ಎಣಿಕೆ ಕಾರ್ಯವು ಗುರುವಾರ ರಾತ್ರಿ  8ಗಂಟೆ ವೇಳೆಗೆ ಮುಕ್ತಾಯವಾಯಿತು.

ಇದನ್ನೂ ಓದಿ- 1.38 ಕೋಟಿ ರೂ. ಮೌಲ್ಯದ 4 ಕ್ವಿಂಟಾಲ್ ಅಕ್ರಮ ಗಾಂಜಾ ನಾಶ

ಅಮಾವಾಸ್ಯೆ , ಹೊಸವರ್ಷ ಸರ್ಕಾರಿ ರಜಾ ದಿನ, ಶಬರಿಮಲೆ, ಓಂ ಶಕ್ತಿ ಯಾತ್ರಾರ್ಥಿಗಳು ಹಾಗೂ ರಾಜ್ಯ ಸರ್ಕಾರದ  ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ   ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ  2,29,67,216 ನಗದು 18 ಗ್ರಾಂ ಚಿನ್ನ ಹಾಗೂ 1,200 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ. 

ಇದನ್ನೂ ಓದಿ- ಹಸು ಸಗಣಿಗೆ ಭಾರೀ ಬೇಡಿಕೆ..! ಒಂದು ಕೆಜಿಗೆ 30 ರಿಂದ 50 ರೂ.

ಇದಲ್ಲದೆ  ಇ ಹುಂಡಿಯಿಂದ 4,21,505 ವಿದೇಶಿ 19 ನೋಟುಗಳು  ಇದಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 17 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ ಎಂದು ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News