"ಸಿದ್ದರಾಮಯ್ಯ ಶಿಶುಪಾಲನಂತೆ ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದಾರೆ!!"

ನನ್ನ ಪ್ರಶ್ನೆ ಇಷ್ಟೇ, ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ!? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ. ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ.., ಹೇಗೆ? ಎಂದು ಸಿಎಂ ಅವರ ಕಾಲೆಳೆದಿದ್ದಾರೆ.

Written by - Prashobh Devanahalli | Edited by - Manjunath N | Last Updated : Aug 26, 2024, 08:23 PM IST
  • ನನ್ನ ಪ್ರಶ್ನೆ ಇಷ್ಟೇ, ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ!? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ.
  • ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ..ಹೇಗೆ?
"ಸಿದ್ದರಾಮಯ್ಯ ಶಿಶುಪಾಲನಂತೆ ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದಾರೆ!!" title=

ಬೆಂಗಳೂರು: ವೈಟ್ನರ್ ಬಳಿದಿದ್ದ ದಾಖಲೆಗಳಿಗೆ ಟಾರ್ಚ್ ಹಾಕಿ ತೋರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಶಿಶುಪಾಲನ ಹಾಗೆ ತಪ್ಪಿನ ತಪ್ಪು ಮಾಡುತ್ತಿದ್ದೀರಿ ಚಾಟಿ ಬೀಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ ಎಂದು ಕಟುವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ- ಬಂಜರು ಭೂಮಿಯಲ್ಲಿ 'ಚಿನ್ನ' ಬೆಳೆದ್ರಾ ಮುಖೇಶ್ ಅಂಬಾನಿ! ಇಲ್ಲಿದೆ ರೋಚಕ ಸ್ಟೋರಿ

ಇದು ಮೂಲ ದಾಖಲೆ, ಮೂಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು? ನಿಮಗೆ ಈ ಮೂಲ‌ ದಾಖಲೆ ತಂದು ಕೊಟ್ಟ ಮಹಾಶಯರು ಯಾರು? ಇಷ್ಟಕ್ಕೂ ಈ ಮೂಲ ದಾಖಲೆ ಮೂಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ? ಈ ಮೂಲ ದಾಖಲೆಗೆ ಟಾರ್ಚ್ ಹಾಕಿದವರು ಯಾರು? ನೀವಾ..? ಅಥವಾ ಇನ್ನಾರಾದರೂ ಇದ್ದಾರಾ? ಎಂದು ಪ್ರಶ್ನಿಸಿದ್ದಾರೆ ಅವರು.

ನನ್ನ ಪ್ರಶ್ನೆ ಇಷ್ಟೇ, ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ!? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ. ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ.., ಹೇಗೆ? ಎಂದು ಸಿಎಂ ಅವರ ಕಾಲೆಳೆದಿದ್ದಾರೆ ಸಚಿವರು.

ಇದನ್ನೂ ಓದಿ- ಅಂಬಾನಿ-ಅದಾನಿಗೆ ಟಕ್ಕರ್ ನೀಡಲು ಮುಂದಾದ ಟಾಟಾ: ಈ ಕ್ಷೇತ್ರದಲ್ಲಿ ಭಾರೀ ಹೂಡಿಕೆಗೆ ಸಜ್ಜು!

ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ.. ಶಿಶುಪಾಲನ ಹಾಗೆ!! ಮಾಡಿದ ತಪ್ಪು ಮುಚ್ಚಿಕೊಳ್ಳಲು ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದೀರಿ ಎಂದು ಕಟುವಾಗಿ ಟೀಕಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News