ಬೆಂಗಳೂರು: ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಪೂರ್ವದಲ್ಲಿ ನೀಡಿದ್ದ ಐದು ಪ್ರಮುಖ ಗ್ಯಾರಂಟಿಗಳಿಗೆ ಅನುಮೋದನೆ ನೀಡಿದೆ.
ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ತನ್ನ ಐದು ಪ್ರಮುಖ ಗ್ಯಾರಂಟಿಗಳ ಭಾಗವಾಗಿ ಗೃಹ ಲಕ್ಷ್ಮಿ, ಅನ್ನಭಾಗ್ಯ,ಯುವನಿಧಿ, ಗೃಹ ಜ್ಯೋತಿ ಯೋಜನೆಗಳ ಜೊತೆಗೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ನೀಡುವ ಕುರಿತಾಗಿ ಆಶ್ವಾಸನೆ ನೀಡಿತ್ತು.ಈಗ ಎಲ್ಲ ಐದು ಯೋಜನೆಗಳಿಗೆ ತಾತ್ವಿಕ ಅನುಮೋದನೆಯನ್ನು ನೀಡಿದೆ.
ಇದನ್ನೂ ಓದಿ: ಕಾಂಗ್ರೆಸ್ ಪಂಚ ಗ್ಯಾರಂಟಿ: ರಸ್ತೆಯಲ್ಲಿ ಹೋಗುವವರಿಗೆಲ್ಲ ಗ್ಯಾರಂಟಿ ಕೊಡಲ್ಲ- ಡಿಸಿಎಂ ಡಿಕೆಶಿ
ಚುನಾವಣಾ ಪೂರ್ವದಲ್ಲಿ ನಾವು ನಾಡಿನ ಜನರಿಗೆ 5 ಪ್ರಮುಖ ಗ್ಯಾರೆಂಟಿಗಳನ್ನು ನೀಡಿದ್ದೆವು, ಜನತೆ ನಮ್ಮ ಮೇಲೆ ನಂಬಿಕೆಯಿಟ್ಟು ಪಕ್ಷಕ್ಕೆ ಪೂರ್ಣ ಬಹುಮತ ನೀಡಿದ್ದರಿಂದ ಇಂದು ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ನಮ್ಮ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿಯೇ ಐದೂ ಗ್ಯಾರೆಂಟಿಗಳಿಗೆ ಅನುಮೋದನೆ ನೀಡುವ ವಚನ ನೀಡಿದ್ದೆ,… pic.twitter.com/uAcblJsLjl
— Siddaramaiah (@siddaramaiah) May 20, 2023
ಈಗ ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ "ಚುನಾವಣಾ ಪೂರ್ವದಲ್ಲಿ ನಾವು ನಾಡಿನ ಜನರಿಗೆ 5 ಪ್ರಮುಖ ಗ್ಯಾರೆಂಟಿಗಳನ್ನು ನೀಡಿದ್ದೆವು, ಜನತೆ ನಮ್ಮ ಮೇಲೆ ನಂಬಿಕೆಯಿಟ್ಟು ಪಕ್ಷಕ್ಕೆ ಪೂರ್ಣ ಬಹುಮತ ನೀಡಿದ್ದರಿಂದ ಇಂದು ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ನಮ್ಮ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿಯೇ ಐದೂ ಗ್ಯಾರೆಂಟಿಗಳಿಗೆ ಅನುಮೋದನೆ ನೀಡುವ ವಚನ ನೀಡಿದ್ದೆ, ಇಂದು ಕೊಟ್ಟ ಮಾತಿನಂತೆ ಪ್ರಥಮ ಸಂಪುಟ ಸಭೆಯಲ್ಲೇ ನಮ್ಮ ಎಲ್ಲಾ ಗ್ಯಾರೆಂಟಿಗಳಿಗೆ ತಾತ್ವಿಕ ಅನುಮೋದನೆ ನೀಡಿ ಮತ್ತೊಮ್ಮೆ ನುಡಿದಂತೆ ನಡೆದಿದ್ದೇವೆ.ಸಮಸ್ತ ಕನ್ನಡಿಗರ ಪ್ರೀತಿ, ನಂಬಿಕೆಗೆ ನಾನು ಆಭಾರಿ.ಸದೃಢ, ಸಮೃದ್ಧ, ಸೌಹಾರ್ದ ಕರ್ನಾಟಕದ ಮರುನಿರ್ಮಾಣಕ್ಕಾಗಿ ನಾವೆಲ್ಲರೂ ಜೊತೆಗೂಡಿ ಶ್ರಮಿಸೋಣ" ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ನಮ್ಮದು ನುಡಿದಂತೆ ನಡೆಯುವ ಸರ್ಕಾರ, ಕೊಟ್ಟ ಭರವಸೆ ಈಡೇರಿಸುತ್ತೇವೆ: ಸಿದ್ದರಾಮಯ್ಯ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.