ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡಲ್ಲ‌: ವಿಪಕ್ಷ ನಾಯಕ ಸಿದ್ದರಾಮಯ್ಯ

ನನಗೆ ಈಗಾಗಲೇ ನಾಲ್ಕೈದು ಕ್ಷೇತ್ರದಿಂದ ನಿಲ್ಲಲ್ಲು ಹೇಳುತ್ತಿದ್ದಾರೆ. ಆದ್ರೆ‌ ನಾನು ಈವರೆಗೂ ಎಲ್ಲಿ ನಿಲ್ಲಬೇಕು ಎಂದು ತೀರ್ಮಾನ ಮಾಡಿಲ್ಲ. ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡಲ್ಲ‌ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

Written by - Zee Kannada News Desk | Last Updated : Mar 13, 2022, 03:31 PM IST
  • ನನಗೆ ಈಗಾಗಲೇ ನಾಲ್ಕೈದು ಕ್ಷೇತ್ರದಿಂದ ನಿಲ್ಲಲ್ಲು ಹೇಳುತ್ತಿದ್ದಾರೆ
  • ಆದ್ರೆ‌ ನಾನು ಈವರೆಗೂ ಎಲ್ಲಿ ನಿಲ್ಲಬೇಕು ಎಂದು ತೀರ್ಮಾನ ಮಾಡಿಲ್ಲ
  • ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡಲ್ಲ‌
  • ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ
ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡಲ್ಲ‌: ವಿಪಕ್ಷ ನಾಯಕ ಸಿದ್ದರಾಮಯ್ಯ  title=
ಸಿದ್ದರಾಮಯ್ಯ

ಮಂಡ್ಯ: ನಾನು ಚಾಮುಂಡೇಶ್ವರಿ (Chamundeshwari) ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡಲ್ಲ‌ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
 
ಮಂಡ್ಯದ ಮದ್ದೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ನನಗೆ ಈಗಾಗಲೇ ನಾಲ್ಕೈದು ಕ್ಷೇತ್ರದಿಂದ ನಿಲ್ಲಲ್ಲು ಹೇಳುತ್ತಿದ್ದಾರೆ. ಆದ್ರೆ‌ ನಾನು ಈವರೆಗೂ ಎಲ್ಲಿ ನಿಲ್ಲಬೇಕು ಎಂದು ತೀರ್ಮಾನ ಮಾಡಿಲ್ಲ. ಈ ಬಗ್ಗೆ ಯೋಚನೆ ಮಾಡಿ ತೀರ್ಮಾನ ತೀರ್ಮಾನ ಮಾಡುತ್ತೇನೆ. ಆದ್ರೆ ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡಲ್ಲ ಎಂದಿದ್ದಾರೆ.

ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ರಾಸಾಯನಿಕ ದಾಳಿ ಕುರಿತು ನ್ಯಾಟೋ ಮುಖ್ಯಸ್ಥರು ಹೇಳಿದ್ದೇನು?

ಬಿಜೆಪಿ-ಜೆಡಿಎಸ್ ಹೊಂದಾಣಿಕೆ ರಾಜಕಾರಣ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಜೊತೆ ಮೈತ್ರಿ ಆದ್ರು ಮಾಡ್ಕೊಳ್ಳಿ. ಅಂಡ್ರಸ್ಟ್ಯಾಂಡಿಗಾದ್ರು ಮಾಡ್ಕೊಳ್ಳಿ. ಮ್ಯಾಚ್ ಫಿಕ್ಸಿಂಗ್ ಆದ್ರು ಮಾಡ್ಕೊಳ್ಳಿ. ನಾವು ಈ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ಮುಂದೆ‌‌ ಕಾಂಗ್ರೆಸ್ (Congress) ಅಧಿಕಾರಕ್ಕೆ ತರುವುದೆ ನಮ್ಮ ಗುರಿ. ನಾನು‌ ಕಾಂಗ್ರೆಸ್ ನಲ್ಲಿ ನೆಮ್ಮದಿಯಾಗಿದ್ದೇನೆ ಎಂದು ತಿಳಿಸಿದ್ದಾರೆ. 

ಜಿಟಿಡಿ ಕಾಂಗ್ರೆಸ್ ಸೇರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಜಿ.ಟಿ.ದೇವೆಗೌಡರು (GT Devegowda) ನನ್ನ ಜೊತೆ ಮಾತನಾಡಿದ್ದಾರೆ. ಅವರು ಮತ್ತು ಅವರ ಮಗನಿಗೆ ಟಿಕೆಟ್ ಕೇಳಿದ್ದಾರೆ. ನಾನು ಇನ್ನು ಈ ಬಗ್ಗೆ ಹೈಕಮಾಂಡ್ ಜೊತೆ ಮಾತನಾಡಿಲ್ಲ‌‌ ಎಂದಿದ್ದಾರೆ.

ಸಿಎಂ ಇಬ್ರಾಹಿಂ (CM Ibrahim) ಕಾಂಗ್ರೆಸ್ ತೊರೆದ ವಿಚಾರವಾಗಿ ಹೇಳಿದ ಅವರು, ಒಲ್ಲದ ಗಂಡನಿಗೆ ಮೊಸರಿನಲ್ಲೂ ಕಲ್ಲು ಅಂತಾರಲ್ಲ ಆ ರೀತಿ ಇಬ್ರಾಹಿಂ ಆರೋಪ ಮಾಡಿದ್ದಾರೆ. ಪಕ್ಷ ಬಿಡ್ತಾ ಇರೋದ್ರಿಂದ ಆರೋಪ ಮಾಡ್ತಿದ್ದಾರೆ. ಕಾಂಗ್ರೆಸ್ ಪಕ್ಷ ಇಬ್ರಾಹಿಂಗೆ ಎಲ್ಲವನ್ನು ಕೊಟ್ಟಿದೆ. ಮನುಷ್ಯನಿಗೆ ಆಸೆ ಇರಬೇಕು ಆದರೆ ದುರಾಸೆ ಇರಬಾರದು. ಹಾಲಿ ಶಾಸಕ ಸಂಗಮೇಶ್ ಗೆ ಟಿಕೆಟ್ ತಪ್ಪಿಸಿ ಭದ್ರಾವತಿಯಲ್ಲಿ ಇಬ್ರಾಹಿಂ ಟಿಕೆಟ್ ಕೊಟ್ಟಿದ್ದೆವು. ಅಲ್ಲಿಯು ಆತ ಸೋತ. ಅದಾದ‌ ಮೇಲೆ ಎಂಎಲ್ ಸಿ ಮಾಡಿದ್ವಿ. ಎಂಎಲ್‌ಸಿ ಯನ್ನು ರಿನಿವಲ್ ಮಾಡಿದ್ವಿ. ಆದ್ರು ಕೂಡ ಪಕ್ಷ ಬಿಟ್ಟೋಗಿದ್ದಾನೆ. ನಾನು ಪಕ್ಷ ಬಿಡಬೇಡ ಅಂತ ಪೋನ್ ಮಾಡಿ ಹೇಳಿದ್ವಿ. ರಾಜಕಾರಣದಲ್ಲಿ ಆಸೆಗಳಿರಬೇಕು ಆದ್ರೆ ದುರಾಸೆ ಇರಬಾರದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಭವಿಷ್ಯ ಇನ್ನಷ್ಟು ಘೋರವಾಗಿರಲಿದೆ: ಸುರ್ಜೇವಾಲಾ ಹೇಳಿಕೆಗೆ ಬಿಜೆಪಿ ತಿರುಗೇಟು

ನನ್ನ ಪ್ರಕಾರ ಅವಧಿಗೂ ಮುನ್ನ ಚುನಾವಣೆ ಬರಲ್ಲ. ಈ ಬಗ್ಗೆ ಬಿಜೆಪಿ (BJP) ನಾಯಕರು ಹೇಳಿದ್ದಾರೆ. ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಸಿ.ಟಿ.ರವಿ ಸೇರಿದಂತೆ ಹಲವರು ಹೇಳಿದ್ದಾರೆ. ಅವಧಿಗೂ ಮುನ್ನ ಯಾಕೆ ಚುನಾವಣೆ ಮಾಡ್ತಾರೆ. ಏಪ್ರಿಲ್ ನಲ್ಲಿ ಚುನಾವಣೆ ಇರೋದು. ಇದೆಲ್ಲ ಊಹಾಪೋಹಗಳು. ಅವಧಿಗು ಮುನ್ನ ಚುನಾವಣೆ ಬಂದ್ರೆ ನಾವು ಸಿದ್ದರಿದ್ದೇವೆ. ಜನರು ನಮ್ಮ ಪರವಾಗಿದ್ದಾರೆ ಎಂದು ಹೇಳಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News