ಬಿಜೆಪಿ ಸರ್ಕಾರಕ್ಕೆ ಇಂಥಾ ದೈನೇಸಿ ಸ್ಥಿತಿ ಬರಬಾರದಿತ್ತು: ಸಿದ್ದರಾಮಯ್ಯ

ವೇದಿಕೆ ಮೇಲೆ ನಿಂತು ಧಮ್, ತಾಕತ್ ಎಂದು ಬೊಬ್ಬಿರಿಯುವವರು ವಿದ್ಯಾರ್ಥಿಗಳ ನೆರವಿನ‌ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿ ತಮ್ಮ ತಾಕತ್ ತೋರಿಸಲಿ ಎಂದು ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

Written by - Puttaraj K Alur | Last Updated : Oct 21, 2022, 04:20 PM IST
  • ಶಾಲಾಭಿವೃದ್ಧಿಗೆ ವಿದ್ಯಾರ್ಥಿಗಳ ಪೋಷಕರಿಂದ ದೇಣಿಗೆ ರೂಪದಲ್ಲಿ ಮಾಸಿಕ 100 ರೂ. ಹಣ ಸಂಗ್ರಹ ವಿಚಾರ
  • ಕಮಿಷನ್ ಹೆಸರಲ್ಲಿ ರಾಜ್ಯದ ಖಜಾನೆ ಲೂಟಿ ಆಯಿತು, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ..!
  • ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಬಿಜೆಪಿ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ ಎಂದ ಸಿದ್ದರಾಮಯ್ಯ
ಬಿಜೆಪಿ ಸರ್ಕಾರಕ್ಕೆ ಇಂಥಾ ದೈನೇಸಿ ಸ್ಥಿತಿ ಬರಬಾರದಿತ್ತು: ಸಿದ್ದರಾಮಯ್ಯ   title=
ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ‘ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಬಿಜೆಪಿ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ. ಕಮಿಷನ್ ಹೆಸರಲ್ಲಿ ರಾಜ್ಯದ ಖಜಾನೆ ಲೂಟಿ ಆಯಿತು, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ..! ಬಿಜೆಪಿ ಸರ್ಕಾರಕ್ಕೆ ಇಂಥಾ ದೈನೇಸಿ ಸ್ಥಿತಿ ಬರಬಾರದಿತ್ತು’ ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಶಾಲಾಭಿವೃದ್ಧಿ ಹಾಗೂ ಶೈಕ್ಷಣಿಕ ಅಭಿವೃದ್ಧಿ ವೆಚ್ಚಕ್ಕಾಗಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಪೋಷಕರಿಂದ ದಾನ, ದೇಣಿಗೆ ರೂಪದಲ್ಲಿ ಎಸ್‌ಡಿಎಂಸಿಗಳ ಮೂಲಕ ಮಾಸಿಕ ತಲಾ 100 ರೂ. ಹಣ ಸಂಗ್ರಹಕ್ಕೆ ಅವಕಾಶ ನೀಡಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಇದೇ ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಲಿಂಗಕಾಮಿ ವಿದ್ಯಾರ್ಥಿನಿಯರ ನಡುವೆ ಫೈಟ್; ಬ್ಲೇಡ್​ನಿಂದ ಕತ್ತು ಕೊಯ್ದ ಗೆಳತಿ..!

‘ವಿದ್ಯಾರ್ಥಿಗಳಿಗೆ ಹಾಲು,‌ ಬಿಸಿ ಊಟ, ಸಮವಸ್ತ್ರ-ಶೂ, ವಿದ್ಯಾಸಿರಿ, ಹಾಸ್ಟೆಲ್ ಸೌಲಭ್ಯಗಳನ್ನು ನೀಡಿದ್ದು ನಾವು. ಅವರಿಂದ ಒಂದೊಂದನ್ನೇ ಕಿತ್ತುಕೊಳ್ಳುತ್ತಿರುವ ಬಿಜೆಪಿ ಸರ್ಕಾರ ಈಗ ಅವರಿಂದ ದುಡ್ಡು‌ಕಿತ್ತುಕೊಳ್ಳಲು ಹೊರಟಿದೆ. ವೇದಿಕೆ ಮೇಲೆ ನಿಂತು ಧಮ್, ತಾಕತ್ ಎಂದು ಬೊಬ್ಬಿರಿಯುವವರು ವಿದ್ಯಾರ್ಥಿಗಳ ನೆರವಿನ‌ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿ ತಮ್ಮ ತಾಕತ್ ತೋರಿಸಲಿ’ ಎಂದು ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

‘ನಮ್ಮ ಸರ್ಕಾರ ವಿದ್ಯಾಸಿರಿ, ಅರಿವು,‌ ಶೂ ಭಾಗ್ಯ ವಿದೇಶಿ ವ್ಯಾಸಂಗಕ್ಕೆ ಆರ್ಥಿಕ ನೆರವು, ಶೈಕ್ಷಣಿಕ ಸಾಲ ಯೋಜನೆ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕು ನೀಡಿದರೆ, ಈಗಿನ ಬಿಜೆಪಿ ಸರ್ಕಾರ ಓದುವ ಮಕ್ಕಳಿಗೆ ತ್ರಿಶೂಲ ದೀಕ್ಷೆ ನೀಡಿ ಅವರ ಬದುಕನ್ನು ಕತ್ತಲಿಗೆ ದೂಡುತ್ತಿದೆ’ ಅಂತಾ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮಂಡ್ಯದ ಬೆಣ್ಣೆ ಇಡ್ಲಿ ಖ್ಯಾತಿಯ ದರಸಗುಪ್ಪೆ ಹೋಟೇಲ್ ಶಿವಪ್ಪ ನಿಧನ

ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಪೋಷಕರಿಂದ ಹಣ ಸಂಗ್ರಹಿಸುವಂತೆ ಹೊರಡಿಸಿರುವ ಆದೇಶವನ್ನು ಈ ಕೂಡಲೇ ಹಿಂಪಡೆಯಬೇಕು ಮತ್ತು ಅನುದಾನ ಕೊರತೆಯಿಂದ ಸ್ಥಗಿತಗೊಂಡಿರುವ ಎಲ್ಲಾ ಶೈಕ್ಷಣಿಕ ಯೋಜನೆಗಳಿಗೆ ಪುನರ್ ಚಾಲನೆ ನೀಡಬೇಕು’ ಎಂದು ಬಿಜೆಪಿ ಸರ್ಕಾರಕ್ಕೆ ಸಿದ್ದರಾಮಯ್ಯನವರು ಒತ್ತಾಯಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News