PM Modi in Bengaluru: ಪ್ರಧಾನಿ ಮೋದಿಗೆ ವ್ಯಂಗ್ಯವಾಗಿ ಪ್ರಶ್ನಿಸಿ ಸ್ವಾಗತ ಕೋರಿದ ಸಿದ್ದರಾಮಯ್ಯ

ಬಿಜೆಪಿ ಏಕೆ ಕೆಂಪೇಗೌಡರ ದಕ್ಷ ಆಡಳಿತ ಮತ್ತು ಸಮಾಜ ಸೇವೆಯ ಮೌಲ್ಯಗಳನ್ನು ಅನುಸರಿಸುತ್ತಿಲ್ಲ?ವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ.

Written by - Puttaraj K Alur | Last Updated : Nov 11, 2022, 01:38 PM IST
  • ಬಿಜೆಪಿ ಸರ್ಕಾರಗಳು ನಾಡಪ್ರಭು ಕೆಂಪೇಗೌಡರ ಮೌಲ್ಯಗಳ ನಿಜವಾದ ಅನುಯಾಯಿಗಳೇ?
  • ಬಿಜೆಪಿ ಏಕೆ ಕೆಂಪೇಗೌಡರ ದಕ್ಷ ಆಡಳಿತ ಮತ್ತು ಸಮಾಜ ಸೇವೆಯ ಮೌಲ್ಯಗಳನ್ನು ಅನುಸರಿಸುತ್ತಿಲ್ಲ?
  • ಬಿಜೆಪಿಯಿಂದ ಬೆಂಗಳೂರು 40% ಕಮಿಷನ್, ಗುಂಡಿಗಳು ಮತ್ತು ಪ್ರವಾಹಗಳಿಗೆ ಕುಖ್ಯಾತಿಯಾಗಿದೆ
PM Modi in Bengaluru: ಪ್ರಧಾನಿ ಮೋದಿಗೆ ವ್ಯಂಗ್ಯವಾಗಿ ಪ್ರಶ್ನಿಸಿ ಸ್ವಾಗತ ಕೋರಿದ ಸಿದ್ದರಾಮಯ್ಯ  title=
ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆಗಳಿಸಲು ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ವ್ಯಂಗ್ಯವಾಗಿ ಪ್ರಶ್ನಿಸಿ ಸ್ವಾಗತ ಕೊರಿದ್ದಾರೆ.

ಈ ಬಗ್ಗೆ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ನಾಡಪ್ರಭು ಕೆಂಪೇಗೌಡರ ಪ್ರತಿಮೆ ಉದ್ಘಾಟಿಸಲು ಬೆಂಗಳೂರಿಗೆ ಆಗಮಿಸುತ್ತಿರುವ ನರೇಂದ್ರ ಮೋದಿಯವರಿಗೆ ಸ್ವಾಗತ. ಆದರೆ ಕೇಂದ್ರ ಬಿಜೆಪಿ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ನಾಡಪ್ರಭು ಕೆಂಪೇಗೌಡರು ಮತ್ತು ಅವರ ಮೌಲ್ಯಗಳ ನಿಜವಾದ ಅನುಯಾಯಿಗಳೇ?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ‘ನಮೋ’: ರೈಲು ಸೇವೆಯಲ್ಲಿ ವ್ಯತ್ಯಯ, ಟ್ರಾಫಿಕ್ ಜಾಮ್, ಕೆಲ ರಸ್ತೆಗಳು ಬಂದ್!

‘ನಮ್ಮ ಕಾಂಗ್ರೆಸ್ ಪಕ್ಷ ನಾಡಪ್ರಭು ಕೆಂಪೇಗೌಡರ ಮೌಲ್ಯಗಳ ನೈಜ ಅನುಯಾಯಿ. ಅವರ ಗೌರವಾರ್ಥ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಟ್ಟಿದ್ದೇವೆ.  ಬೆಂಗಳೂರಿನ ಮುಖ್ಯ ಮೆಟ್ರೋ ನಿಲ್ದಾಣಕ್ಕೂ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಪ್ರತಿ ವರ್ಷ ಕೆಂಪೇಗೌಡ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವ ವೈಭವೋಪೇತ ಸಂಪ್ರದಾಯಕ್ಕೆ ಚಾಲನೆ ನೀಡಿದ್ದು ಕಾಂಗ್ರೆಸ್. ಬೆಂಗಳೂರಿನ ಸಂಸ್ಥಾಪಕರಿಗೆ ಸಂಬಂಧಿಸಿದ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸಲು ನಾಡಪ್ರಭು ಕೆಂಪೇಗೌಡ ಪ್ರಾಧಿಕಾರವನ್ನು ಸ್ಥಾಪಿಸಿದ್ದೇವೆ’ ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: PM Modi in Bengaluru: ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

‘ಆದರೆ ಬಿಜೆಪಿ ಏಕೆ ಕೆಂಪೇಗೌಡರ ದಕ್ಷ ಆಡಳಿತ ಮತ್ತು ಸಮಾಜ ಸೇವೆಯ ಮೌಲ್ಯಗಳನ್ನು ಅನುಸರಿಸುತ್ತಿಲ್ಲ? ನಾಡಪ್ರಭು ನಿರ್ಮಿಸಿದ ಈ ಕನಸಿನ ನಗರ ಒಂದು ಕಾಲದಲ್ಲಿ ವಿಶ್ವದಾದ್ಯಂತ ಪ್ರಗತಿ ಮತ್ತು ಸೌಂದರ್ಯಕ್ಕೆ ಹೆಸರುವಾಸಿಯಾಗಿತ್ತು. ಬಿಜೆಪಿಯಿಂದ ಬೆಂಗಳೂರು 40% ಕಮಿಷನ್, ಗುಂಡಿಗಳು ಮತ್ತು ಪ್ರವಾಹಗಳಿಗೆ ಕುಖ್ಯಾತಿಯಾಗಿದೆ’ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News