SM Krishna passes away: ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲರು ಹಾಗೂ ಮಾಜಿ ವಿದೇಶಾಂಗ ಸಚಿವರಾಗಿದ್ದ ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಕರ್ನಾಟಕದ ಮುತ್ಸದ್ದಿ ರಾಜಕಾರಣಿಯಾಗಿದ್ದ ಎಸ್.ಎಂ.ಕೃಷ್ಣ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2.30ರ ಸುಮಾರಿಗೆ ನಿಧನರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು.
ಇದನ್ನೂ ಓದಿ: SM Krishna: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ
ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆ ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ ಕಚೇರಿ ಸೇರಿ ರಜೆ ಘೋಷಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಬಗ್ಗೆ ಸದನದಲ್ಲಿ ಸಿಎಂ ಸಿದ್ದರಾಮಯ್ಯನವರು ಪ್ರಕಟಿಸಲಿದ್ದಾರೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ರಾಜ್ಯ ಸರ್ಕಾರವು ಸಹ ಸಂತಾಪ ಸೂಚಿಸಿದೆ. ನಾಳೆ ರಜೆ ಘೋಷಿಸಿ ಅಧಿಸೂಚನೆ ಹೊರಡಿಸಿರುವ ಸರ್ಕಾರ, ನಾಳೆ (ಡಿಸೆಂಬರ್ 11) ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಡ್ಯ ಜಿಲ್ಲೆಯಲ್ಲಿ ಎಸ್.ಎಂ.ಕೃಷ್ಣರ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಡಿಸೆಂಬರ್ 10ರಿಂದ ಡಿ.12ರವರೆಗೆ ಮೂರು ದಿನಗಳ ಕಾಲ ಶೋಕಾಚರಣೆ ನಡೆಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜನವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಲಾಗಿದೆ.
ಇದನ್ನೂ ಓದಿ: ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್ ಎಮ್ ಕೃಷ್ಣ ಇನ್ನಿಲ್ಲ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.