ಬೆಂಗಳೂರು: ಮಾಜಿ ಸಚಿವ ಈಶ್ವರಪ್ಪ ರಾಜೀನಾಮೆ ನೀಡುವ ಮುನ್ನ ಅನೇಕ ಟೆಂಡರ್‌ಗಳಿಗೆ ಮಂಜೂರಾತಿ ನೀಡುವ ಮೂಲಕ 40% ಕಮಿಷನ್ ಪಡೆದಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ತರಾತುರಿಯಲ್ಲಿ 5,500 ಕೋಟಿ ಟೆಂಡರ್‌ಗಳಿಗೆ 8 ದಿನಗಳಲ್ಲಿ ಮಂಜೂರಾತಿ ನೀಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ ಆರೋಪಿಸಿದರು.
ಇದನ್ನೂ ಓದಿ:ಕರ್ನಾಟಕದಲ್ಲಿ ಎನ್ಸಿಪಿ ಬಲಪಡಿಸಲು ನಿರ್ಧಾರ: ಬೆಂಗಳೂರಿನಲ್ಲಿಂದು ಪವಾರ್ ಶಕ್ತಿ ಪ್ರದರ್ಶನ
ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ, ಈಶ್ವರಪ್ಪ ರಾಜೀನಾಮೆಗೂ ಮುನ್ನ ಭಾರೀ ಪ್ರಮಾಣದ ಕಮೀಷನ್ ಅಕ್ರಮ ವ್ಯವಹಾರ ನಡೆದಿರುವ ಸಾಧ್ಯತೆಯಿದೆ. ಕೆಟಿಪಿಐ ಆಕ್ಟ್ ಪ್ರಕಾರ ಟೆಂಡರ್ ಪ್ರಕ್ರಿಯೆ ಕನಿಷ್ಟ 30 ದಿನಗಳವರೆಗೆ ಇರಬೇಕಿದೆ. ಆದರೆ ಇಲ್ಲಿ ಏ. 21ಕ್ಕೆ ಟೆಂಡರ್ ಮುಗಿಯುವಂತೆ ಮಾಡಲಾಗಿದೆ ಎಂದು ಆರೋಪಿಸಿದರು.
ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವು ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಾಕ್ಷ್ಯಧಾರ ನಾಶಪಡಿಸಿರುವ ಗುಮಾನಿ ವ್ಯಕ್ತವಾಗಿದೆ. ಅಲ್ಲದೆ. ಶೇ.40 ರಷ್ಟು ಕಮೀಷನ್ ಬೇಡಿಕೆ ಆರೋಪ ಸಂಬಂಧ ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸಬೇಕೆಂದು ಎಸಿಬಿಗೆ ದೂರು ನೀಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:'ಕಾಂಗ್ರೆಸ್ಸಿನವರ ಬೀರುಗಳಲ್ಲಿ ಭ್ರಷ್ಟಾಚಾರದ ಅಸ್ಥಿಪಂಜರ ಎಷ್ಟಿದೆ ಎಂದು ಲೆಕ್ಕಹಾಕಲಿ'
ಆರೋಪ ಕೇಳಿ ಬಂದ ತಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದೆ ಏ.15ರ ರಾತ್ರಿಯ ವರೆಗೂ ಸಮಯ ತೆಗೆದುಕೊಂಡಿದ್ದರು. ಈ ಅವಧಿಯಲ್ಲಿ ತಮ್ಮ ಪ್ರಭಾವ ಬಳಸಿ ಸಂತೋಷ್ ಸಾವಿಗೆ ಸಂಬಂಧಿಸಿದ ಸಾಕ್ಷ್ಯನಾಶ ಮಾಡಿದ್ದಾರೆ. ಅಲ್ಲದೆ ಸಂತೋಷ್ ಕುಟುಂಬಸ್ಥರು ನೀಡಿದ ದೂರಿನಲ್ಲಿ ಶೇ.40 ರಷ್ಟು ಕಮೀಷನ್ ಕೇಳಿದ್ದರು. ಆದರೆ ಎಫ್ಐಆರ್ ನಲ್ಲಿ ಮೂಲ ಆರೋಪದ ಬಗ್ಗೆ ಉಲ್ಲೇಖವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.