ಬೆಂಗಳೂರು: ರಾಜಾಜಿನಗರದ ಡಾ. ರಾಜ್‌ಕುಮಾರ್ ರಸ್ತೆಯಲ್ಲಿದ್ದ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ ಮಾಜಿ ಯೋಧ ಕುಮಾರ್ ಮೃತಪಟ್ಟಿದ್ದನ್ನು ಖಂಡಿಸಿ ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವೇಳೆ ಎಎಪಿ ಪಕ್ಷದ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿ ಕಾರ್ಯಕಾರಣಿ: ಶಾಸಕ ಮಹೇಶ್ ಗೆಲುವಿನ ನಗೆಗೆ ಸಚಿವ ಸೋಮಣ್ಣ ಟಾಂಗ್!
ಪ್ರತಿಭಟನೆ ವೇಳೆ ಮಾತನಾಡಿದ ಎಎಪಿ ಬೆಂಗಳೂರು ವಕ್ತಾರ ಉಷಾ ಮೋಹನ್, ಬೆಂಗಳೂರಿನಲ್ಲಿ ರಸ್ತೆಗುಂಡಿಯಿಂದಾಗಿ ಅಪಘಾತವಾಗುವುದು ಸಾಮಾನ್ಯವಾಗಿಬಿಟ್ಟಿದೆ. ತಿಂಗಳಿಗೆ ಕನಿಷ್ಠ ಮೂರ್ನಾಲ್ಕು ಮಂದಿಯಾದರೂ ಜೀವ ಕಳೆದುಕೊಳ್ಳುತ್ತಿದ್ದಾರೆ. ಅಪಘಾತ ನಡೆದು ಯೋಧ ಕುಮಾರ್ ಜೀವ ಕಳೆದುಕೊಂಡ ಸ್ಥಳಕ್ಕೆ ಮುಖ್ಯಮಂತ್ರಿ ಆಗಮಿಸಬೇಕು. ಮೃತರ ಕುಟುಂಬಕ್ಕೆ ಶೀಘ್ರ ಪರಿಹಾರ ವಿತರಿಸಬೇಕು. ರಸ್ತೆ ಗುಂಡಿಗೆ ಕಾರಣರಾದ ಅಧಿಕಾರಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: Jana Sankalpa Yatre : ಕಾಂಗ್ರೆಸ್ ಆಡಳಿತವನ್ನು ಜನ ಒಪ್ಪಲಿಲ್ಲ - ಸಿಎಂ ಬೊಮ್ಮಾಯಿ
ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಎಎಪಿ ಮುಖಂಡರಾದ ಸುಮನ್ ಪ್ರಶಾಂತ್ ಮಾತನಾಡಿ, ಜೀರೋ ಟ್ರಾಫಿಕ್‌ನಲ್ಲಿ ತಿರುಗಾಡುವ ಮುಖ್ಯಮಂತ್ರಿಯವರಿಗೆ ಹಾಗೂ ಸದಾ ಕಾರಿನಲ್ಲೇ ತಿರುಗಾಡುವ ಸಚಿವರುಗಳು ಹಾಗೂ ಶಾಸಕರುಗಳಿಗೆ ಬೈಕ್ ಸವಾರರ ಕಷ್ಟ ಅರ್ಥವಾಗುತ್ತಿಲ್ಲ. ಕೇಳಿದಷ್ಟು ಕಮಿಷನ್ ಕೊಡಲು ಗುತ್ತಿಗೆದಾರರು ಒಪ್ಪದ ಕಾರಣಕ್ಕೆ ರಸ್ತೆ ಕಾಮಗಾರಿಗೆ ಹಣ ಬಿಡುಗಡೆ ಮಾಡಲೂ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಸಚಿವರು ಹಾಗೂ ಶಾಸಕರ ಹಣದ ದಾಹದ ಅಮೂಲ್ಯ ವ್ಯಕ್ತಿಗಳನ್ನು ದೇಶ ಕಳೆದುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.