ಸೌಮ್ಯರೆಡ್ಡಿ ನಮ್ಮ ಮನೆ ಮಗಳು, ಅವರನ್ನು 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್

Lok Sabha Elections 2024: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರ ನಾಮಪತ್ರ ಸಲ್ಲಿಕೆಗೂ ಮುಂಚಿತವಾಗಿ ಜಯನಗರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತಬೇಟೆಯಾಡಿದರು.

Written by - Prashobh Devanahalli | Last Updated : Apr 1, 2024, 03:06 PM IST
  • ಯಾವ ಮೋದಿ ಅಲೆಯೂ ಇಲ್ಲ, ಬಿಜೆಪಿ ಅಲೆಯೂ ಇಲ್ಲ.
  • ಇರುವುದು ಒಂದೇ ಗಾಳಿ, ಅದು ಕಾಂಗ್ರೆಸ್, ಗ್ಯಾರಂಟಿ ಗಾಳಿ
  • ಜಯನಗರದಲ್ಲಿ ಸೌಮ್ಯ ರೆಡ್ಡಿ ಪರ ಡಿಸಿಎಂ ಡಿ.ಕೆ. ಶಿವಕುಮಾರ್ ಮತಬೇಟೆ
ಸೌಮ್ಯರೆಡ್ಡಿ ನಮ್ಮ ಮನೆ ಮಗಳು, ಅವರನ್ನು 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್ title=

ಬೆಂಗಳೂರು: ಸೌಮ್ಯ ರೆಡ್ಡಿ ನಮ್ಮ ಮನೆ ಮಗಳು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕನಿಷ್ಠ 1 ಲಕ್ಷ ಮತಗಳ ಅಂತರದಲ್ಲಿ ಅವರನ್ನು ಗೆಲ್ಲಿಸಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮತದಾರರಲ್ಲಿ ಮನವಿ ಮಾಡಿದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರ ನಾಮಪತ್ರ ಸಲ್ಲಿಕೆಗೂ ಮುಂಚಿತವಾಗಿ ಜಯನಗರದಲ್ಲಿ ನಡೆದ ಮೆರವಣಿಗೆ ವೇಳೆ ಮಾತನಾಡಿದರು.

ಐಶ್ವರ್ಯ ಬೇರೆಯಲ್ಲ, ಸೌಮ್ಯ ರೆಡ್ಡಿ ಬೇರೆಯಲ್ಲ. ಸೌಮ್ಯ ನನ್ನ ಮನೆ ಮಗಳು, ಅತ್ಯಂತ ಕ್ರಿಯಾಶೀಲ ಹೆಣ್ಣುಮಗಳು. ಬೊಮ್ಮನಹಳ್ಳಿ, ಬಸವನಗುಡಿ ಸೇರಿದಂತೆ ಈ ಕ್ಷೇತ್ರದ ಎಲ್ಲಾ ಕಡೆಯೂ ಹೆಚ್ಚು ಮತಗಳು ಸೌಮ್ಯ ಅವರಿಗೆ ಬರುತ್ತವೆ. ಇಡೀ ರಾಜ್ಯದಲ್ಲಿ ಯಾವ ಮೋದಿ ಅಲೆಯೂ ಇಲ್ಲ, ಬಿಜೆಪಿ ಅಲೆಯೂ ಇಲ್ಲ. ಇರುವುದು ಒಂದೇ ಗಾಳಿ, ಅದು ಕಾಂಗ್ರೆಸ್, ಗ್ಯಾರಂಟಿ ಗಾಳಿ ಎಂದರು.

ನಾನು ಮತ್ತು ಸಿದ್ದರಾಮಯ್ಯ ಅವರು ಗ್ಯಾರಂಟಿ ಚೆಕ್ಕಿಗೆ ಸಹಿ ಹಾಕಿ, ಅನುಷ್ಠಾನಕ್ಕೆ ತಂದಿದ್ದೇವೆ. ಕಾಂಗ್ರೆಸ್ ಜನರ ಸಹಕಾರದಿಂದ 136 ಸ್ಥಾನಗಳನ್ನು ಗೆದ್ದು, ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ದೇಶದ ಯಾವ ರಾಜ್ಯಗಳು ಮಾಡದ ಕೆಲಸವನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಮಾಡಿದೆ. ಕಾಂಗ್ರೆಸ್ ಜನರ ಭಾವನೆ ಮೇಲೆ ರಾಜಕಾರಣ ಮಾಡುವುದಿಲ್ಲ, ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತದೆ. ಜನರ ಕಲ್ಯಾಣಕ್ಕೆ ಎಂದು 52 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿದ್ದೇವೆ. ಆದರೆ ಕೇಂದ್ರ ಸರ್ಕಾರ ಕರ್ನಾಟಕದ ಪಾಲಿನ ಹಣ ಕೊಡಲಿಲ್ಲ. ಇದರಿಂದ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗಿದೆ ಎಂದರು.

ಇದನ್ನೂ ಓದಿ : ತಡೆರಹಿತ ವಿದ್ಯುತ್‌ ಪೂರೈಕೆಗೆ 'ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್ ವಾಹನಗಳ' ನಿಯೋಜನೆ: ಜಾರ್ಜ್‌

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಂಟ, ರೆಡ್ಡಿ, ಸೇರಿ ಒಟ್ಟು ಎಂಟು ಮಂದಿ ಒಕ್ಕಲಿಗರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಒಕ್ಕಲಿಗರನ್ನು ಸಿಎಂ ಮಾಡಲಿಲ್ಲವಲ್ಲ ಎನ್ನುವ ಟೀಕೆಗೆ ನಾವು ಈ ರೀತಿ ಉತ್ತರಿಸಿದ್ದೇವೆ. ಇದರ ಜತೆಗೆ ಆರು ಮಹಿಳೆಯರಿಗೆ ಟಿಕೆಟ್ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸೌಮ್ಯ ರೆಡ್ಡಿ ಸೋತಿಲ್ಲ, ಅಧಿಕಾರಿಗಳಿಂದ ಅವರು ಸೋಲಬೇಕಾಯಿತು. ಒತ್ತಡಕ್ಕೆ ಒಳಗಾಗಿ ನಾವು ಸೌಮ್ಯರೆಡ್ಡಿ ಅವರನ್ನು ಸೋಲಿಸಬೇಕಾಯಿತು ಎಂದು ಅಕ್ರಮದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ರಾಮಲಿಂಗಾರೆಡ್ಡಿ ಅವರ ಬಳಿ ಬಂದು ಕ್ಷಮಾಪಣೆ ಕೇಳಿದರು ಎನ್ನುವ ಸಂಗತಿ ತಿಳಿಯಿತು ಎಂದರು.

ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ʼವಿಷʼ ಹೇಳಿಕೆ ನೀಡಿದ್ದೇನೆ. ಕುಂಬಳಕಾಯಿ ಕಳ್ಳ ಎಂದರೆ ಸುಮಲತಾ ಅವರು ಏಕೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು? ನಾನು ಸುಮಲತಾ ಅವರ ಸುದ್ದಿಗೆ ಹೋಗಿಲ್ಲ, ಅವರ ಸುದ್ದಿ ನನಗೆ ಅವಶ್ಯಕತೆ ಇಲ್ಲ. ಅಂಬರೀಷ್ ಅವರಿಗೆ ಕಾಂಗ್ರೆಸ್ ಪಕ್ಷ ಏನು ಮಾಡಿದೆ ಎನ್ನುವುದು ಇಡೀ ದೇಶಕ್ಕೆ ಗೊತ್ತಿದೆ. ಅವರು ಕೊನೆಯುಸಿರು ಬಿಡುವ ವೇಳೆಯಲ್ಲಿ ಏನು ಹೇಳಿದರು ಎಂಬುದು ಗೊತ್ತಿದೆ. ನಾವು ಈಗ ಆ ವಿಚಾರಗಳನ್ನು ಮಾತನಾಡುವುದಿಲ್ಲ ಎಂದರು.

ಇದನ್ನೂ ಓದಿ: ವಿಂಟೇಜ್ ಕಾರು-ಬೈಕ್’ಗಳ ರ್ಯಾಲಿ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ

ನಾನು ಸುಮಲತಾ ಅವರ ವಿಚಾರಕ್ಕೆ ಇಂದು ಹೋಗಲ್ಲ, ನಾಳೆಯೂ ಹೋಗಲ್ಲ. ನನಗೆ ಅದರ ಅವಶ್ಯಕತೆಯೂ ಇಲ್ಲ. ಅವರ ಬಗ್ಗೆ ನಾನೇಕೆ ತಲೆ ಕೆಡಿಸಿಕೊಳ್ಳಬೇಕು. ಪಕ್ಷದ ಸಿದ್ದಾಂತದ ಬಗ್ಗೆ ಮಾತನಾಡಲಿ, ಉತ್ತರ ಕೊಡುತ್ತೇನೆ. ಅವರು ಪಕ್ಷದ ಸಿದ್ಧಾಂತದಿಂದ ಹೊರಗೆ ಬರಲಿ, ಆನಂತರ ಮಾತನಾಡುವʼ ಎಂದರು.

ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತಗೊಂಡಿದ್ದು ದೇಣಿಗೆ ಸಂಗ್ರಹಕ್ಕೆ ರಾಹುಲ್ ಗಾಂಧಿ ಕರೆ ನೀಡಿದ್ದಾರೆ ಎಂದಾಗ “ಚುನಾವಣೆ ನಡೆಸಬೇಕು. ನಿಮಗೆ (ಮಾಧ್ಯಮಗಳಿಗೆ) ಜಾಹೀರಾತು ನೀಡಬೇಕು. ದೇಣಿಗೆ ಸಂಗ್ರಹ ಮಾಡಲೇ ಬೇಕು, ವಿಧಿಯಿಲ್ಲವಲ್ಲ” ಎಂದು ಹೇಳಿದರು. ನಿಮಗೂ ಐಟಿ ನೋಟಿಸ್ ಬಂದಿದೆ ಎಂದು ಕೇಳಿದಾಗ “ಇದಕ್ಕೆ ಆನಂತರ ಉತ್ತರಿಸುತ್ತೇನೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News