ರಾಜ್ಯದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಮಕ್ಕಳ ವಿಶೇಷ ಬಜೆಟ್

ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಒಟ್ಟಾರೆ ಆಯವ್ಯಯದಲ್ಲಿ 36,340 ಕೋಟಿ ರೂ.ಗಳ 279 ಕಾರ್ಯಕ್ರಮಗಳ ಪ್ರಸ್ತಾಪ.

Written by - Yashaswini V | Last Updated : Mar 5, 2020, 01:35 PM IST
ರಾಜ್ಯದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಮಕ್ಕಳ ವಿಶೇಷ ಬಜೆಟ್ title=

ಬೆಂಗಳೂರು: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬ ನಾಣ್ನುಡಿಯಂತೆ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯದ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಮಕ್ಕಳಿಗಾಗಿ ವಿಶೇಷ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 2020-21ನೇ ಸಾಲಿನ ಆಯವ್ಯಯದಲ್ಲಿ 36,340 ಕೋಟಿ ರೂ.ಗಳ 279 ಕಾರ್ಯಕ್ರಮಗಳ ಪ್ರಸ್ತಾಪ ಮಾಡಿದ್ದಾರೆ.

ಈ ಆಯವ್ಯಯದಲ್ಲಿ ರಾಜ್ಯದಲ್ಲಿ 18 ವರ್ಷದ ಕೆಳಗಿರುವ ಎಲ್ಲಾ ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆ ಅಡಕ. 2020-21ನೇ ಸಾಲಿನ ಆಯವ್ಯಯದಲ್ಲಿ 36,340 ಕೋಟಿ ರೂ.ಗಳ 279 ಕಾರ್ಯಕ್ರಮಗಳ ಪ್ರಸ್ತಾಪ ಮಾಡಲಾಗಿದ್ದು, ಇದು ಒಟ್ಟಾರೆ ಆಯವ್ಯಯ ಗಾತ್ರದ 15.28ರಷ್ಟು.

ಇದಲ್ಲದೆ ಬಜೆಟ್ನಲ್ಲಿ ಹಿಂದಿನ ಜನಪ್ರಿಯ ಯೋಜನೆಗಳಾದ ಭಾಗ್ಯ ಜ್ಯೋತಿ,  ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ ಮುಂದುವರೆಸುವುದಾಗಿ ತಿಳಿಸಿದ್ದಾರೆ. ಆರು ವರ್ಷದೊಳಗಿನ ಮಕ್ಕಳಲ್ಲಿ ಜನ್ಮಜಾತ ಕಿವುಡುತನ ಪತ್ತೆ ಹಚ್ಚಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆ ನಡೆಸಿ, ಶ್ರವಣಯಂತ್ರ ಒದಗಿಸಿ ಗುಣಪಡಿಸುವ ಯೋಜನೆಗೆ 28 ಕೋಟಿ ರೂ. ಅನುದಾನ. ನೀಡಿದ್ದಾರೆ.

ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳಿಗೆ 25% ಮೀಸಲಾತಿ ಸೌಲಭ್ಯ ಒದಗಿಸಿರುವ ಸಿಎಂ, ವಸತಿ ಶಾಲೆಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. 

“ಸಂಭ್ರಮ ಶನಿವಾರ” ಆಚರಣೆ- ಪ್ರತಿ ತಿಂಗಳಲ್ಲಿ ಎರಡು ಶನಿವಾರ ಬ್ಯಾಗ್ ರಹಿತ ದಿನ ಆಚರಣೆ ಘೋಷಿಸಿದ್ದಾರೆ.

SSLC ಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ. ಪ್ರತೀ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ಪ್ರಶಸ್ತಿ ಘೋಷಿಸಲಾಗಿದ್ದು,  ಪದವಿ ಪೂರ್ವ ವಿದ್ಯಾರ್ಥಿಗಳಿಗೆ ‘ವಿಜ್ಞಾನ ಪ್ರತಿಭಾ ಶೋಧನೆ’ ಕಾರ್ಯಕ್ರಮ ಪ್ರಾರಂಭ. ಆಯ್ಕೆಯಾದ 500 ವಿದ್ಯಾರ್ಥಿಗಳಿಗೆ ಎರಡು ವರ್ಷ ಶಿಕ್ಷಣ, ಒಂದು ಸಾವಿರ ರೂ. ಮಾಸಿಕ ಶಿಷ್ಯವೇತನ ಪ್ರಕಟಿಸಿದ್ದಾರೆ.

Trending News