SSLC Exam:ಮಾರ್ಚ್ 28 ರಿಂದ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ ಆರಂಭ

ಕೋವಿಡ್-19ರ ಕಾರಣ ಎಸ್.ಎಸ್.ಎಲ್.ಸಿ. ಪರೀಕ್ಷೆ (SSLC) ಬರೆಯುವ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು, ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಿರಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು. 

Written by - Zee Kannada News Desk | Last Updated : Mar 21, 2022, 06:36 PM IST
  • ಮಾರ್ಚ್ 28 ರಿಂದ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ ಆರಂಭ
  • 2022ರ ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆ
SSLC Exam:ಮಾರ್ಚ್ 28 ರಿಂದ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ ಆರಂಭ  title=
ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆ

ಬೆಂಗಳೂರು: 2022ರ ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಎಸ್.ಎಸ್.ಎಲ್.ಸಿ. (SSLC Exam) ಮುಖ್ಯ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕಾರ್ಯವು ಅತ್ಯಂತ ಶಾಂತಿಯುತವಾಗಿ, ಸುವ್ಯವಸ್ಥಿತವಾಗಿ, ಪಾರದರ್ಶಕವಾಗಿ ಮತ್ತು ಕಾನೂನು ಭದ್ರತೆಯಲ್ಲಿ ನಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ, ಕೋವಿಡ್ (Corona) ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಗಮವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ‘ಮುಂದೊಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟ್ರಧ್ವಜವಾದೀತು’

ಬೆಂ. ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ‌ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್-19ರ ಕಾರಣ ಎಸ್.ಎಸ್.ಎಲ್.ಸಿ. ಪರೀಕ್ಷೆ (SSLC) ಬರೆಯುವ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು, ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಿರಬೇಕು ಎಂದು ತಿಳಿಸಿದರು. 

ಪ್ರತಿ ವಿಷಯಗಳ ಪರೀಕ್ಷೆಗಳಿಗೂ 2 ರಿಂದ 3 ದಿನಗಳ ಅಂತರವಿದ್ದು, ಪರೀಕ್ಷಾ ವೇಳಾಪಟ್ಟಿಯೂ (SSLC Time Table) ವಿದ್ಯಾರ್ಥಿ ಸ್ನೇಹಿಯಾಗಿದೆ ಎಂದರಲ್ಲದೆ, ಪ್ರತಿದಿನ ಬೆಳಿಗ್ಗೆ 10.15 ಗಂಟೆಗೆ ಮೊದಲ ಬೆಲ್ ಆಗಲಿದ್ದು, ವಿದ್ಯಾರ್ಥಿಗಳು 10.45 ಗಂಟೆಯ ಒಳಗೆ ಪರಿಕ್ಷಾ ಕೇಂದ್ರಕ್ಕೆ ಬರಲು ಅವಕಾಶವಿದ್ದು, ಪರೀಕ್ಷಾ ಕೇಂದ್ರಕ್ಕೆ ಸಿಬ್ಬಂದಿಗಳಾಗಲೀ, ವಿದ್ಯಾರ್ಥಿಗಳಾಗಲೀ ಮೊಬೈಲ್, ಕ್ಯಾಮರ, ಡಿಜಿಟಲ್ ಗಡಿಯಾರವನ್ನು ತರುವಂತಿಲ್ಲ ಎಂದು ಹೇಳಿದರು.

ಪ್ರತಿ ಕೊಠಡಿಗೆ 20 ವಿದ್ಯಾರ್ಥಿಗಳಂತೆ ಕೊಠಡಿ ನಿಗದಿಗೊಳಿಸಲು ಸೂಚಿಸಿದರಲ್ಲದೆ, ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ (Examination Centre) ಉತ್ತಮ ಆಸನ ವ್ಯವಸ್ಥೆ, ಶುಭ್ರ ಶೌಚಾಲಯ, ಸಿಸಿ ಕ್ಯಾಮರ, ಗಾಳಿ ಬೆಳಕಿನಿಂದ ಕೂಡಿದ ಕೊಠಡಿಗಳು ಇತ್ಯಾದಿ ಮೂಲಭೂತ ಸೌಲಭ್ಯಗಳು ಇರುವ ಕುರಿತು ಭೇಟಿ ನೀಡಿ, ಖಚಿತಪಡಿಸಿಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದರು.

ಇದನ್ನೂ ಓದಿ: Shamanur Shivashankarappa : 'ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ನಾನೇ ಮುಖ್ಯಮಂತ್ರಿ'

ಜಿಲ್ಲೆಯಲ್ಲಿ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗೆ 13,872 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಈ ಪೈಕಿ 534 ವಿದ್ಯಾರ್ಥಿಗಳು ಖಾಸಗಿ ಅಭ್ಯರ್ಥಿಗಳಾಗಿದ್ದಾರೆ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ 58 ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಪೈಕಿ ದೇವನಹಳ್ಳಿಯಲ್ಲಿ 2 ಪರೀಕ್ಷಾ ಕೇಂದ್ರಗಳನ್ನು ಖಾಸಗಿ ಅಭ್ಯರ್ಥಿಗಳಿಗಾಗಿ ತೆರೆಯಲಾಗಿದೆ ಎಂದರು.

ದೂರದ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಅಡ್ಮಿಷನ್ ಟಿಕೆಟ್ ತೋರಿಸಿ ಉಚಿತ ಪ್ರಯಾಣ ಮಾಡಲು ಅವಕಾಶ ನೀಡುವಂತೆ ಮತ್ತು ರೆಗ್ಯುಲರ್ ಮಾರ್ಗ ಇಲ್ಲದ ಕಡೆಗಳಲ್ಲಿ ಮಕ್ಕಳಿಗಾಗಿಯೇ ಪರೀಕ್ಷಾ ವಿಶೇಷ ಬಸ್‌ಗಳನ್ನು ಒದಗಿಸುವಂತೆ ದೊಡ್ಡಬಳ್ಳಾಪುರ ಮತ್ತು ಇತರ ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ ಅವರಿಗೆ ಸೂಚಿಸಿದರು.

ಎಸ್.ಎಸ್.ಎಲ್.ಸಿ. ಪರೀಕ್ಷಾ ಕಾರ್ಯನಿರತರೆಲ್ಲರೂ ಕಡ್ಡಾಯವಾಗಿ ಮಂಡಳಿಯಿಂದ ನೀಡಿರುವ ಗುರುತಿನ ಚೀಟಿಯನ್ನು ಧರಿಸಬೇಕು ಹಾಗೂ ಅನಧಿಕೃತ ವ್ಯಕ್ತಿಗಳು ಒಳಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷೆ ಕುರಿತಂತೆ ಸುಳ್ಳು ಸುದ್ದಿಗೆ ಆಸ್ಪದ ನೀಡದಂತೆ ಎಚ್ಚರಿಕೆ ವಹಿಸಲು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿಕೃಷ್ಣಪ್ಪ, ಶಿಕ್ಷಣಾಧಿಕಾರಿ ಹನುಮಂತಪ್ಪ, ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಂಬಂಧಿಸಿದ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News