SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ, ವಿದ್ಯಾರ್ಥಿನಿ ಸಾವು

SSLC Exam: ಪರೀಕ್ಷೆ  ಬರೆಯುವ ಸಂದರ್ಭದಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು.

Written by - Zee Kannada News Desk | Last Updated : Mar 28, 2022, 02:41 PM IST
  • ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು.
  • ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ.
  • ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿರುವ ದುರ್ಘಟನೆ.
SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ, ವಿದ್ಯಾರ್ಥಿನಿ ಸಾವು title=
SSLC Student died by heart attack

SSLC Exam: ಎಸ್‌ಎಸ್‌ಎಲ್‌ಸಿ  ಪರೀಕ್ಷೆ ಬರೆಯುವ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಆಘಾತಕಾರಿ ಘಟನೆ ಮೈಸೂರು ಜಿಲ್ಲೆಯ ಟಿ .ನರಸೀಪುರ ತಾಲೂಕಿನಲ್ಲಿ  ನಡೆದಿದೆ.

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ   ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಎಂಬ ವಿದ್ಯಾರ್ಥಿನಿ (Student) ಈ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. 

ಇದನ್ನೂ ಓದಿ- SSLC Exam: ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ; ಶಿಕ್ಷಣ ಇಲಾಖೆಯಿಂದ ಸಕಲ ಸಿದ್ಧತೆ

ಮಾದಾಪುರ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಅನುಶ್ರೀ, ಇಂದು ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಎಸ್‌ಎಸ್‌ಎಲ್‌ಸಿ  ಪರೀಕ್ಷೆ  (SSLC Exam)  ಬರೆಯುತ್ತಿದ್ದರು. ಈ ವೇಳೆ ಕುಸಿದು ಬಿದ್ದ ವಿದ್ಯಾರ್ಥಿನಿಯನ್ನು ಸಿಬ್ಬಂದಿಗಳು ಕೂಡಲೇ ಟಿ. ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ- CET Exam: ಜೂನ್ ತಿಂಗಳಲ್ಲಿ ಸಿಇಟಿ ಪರೀಕ್ಷೆ

ಮಗಳು ತನ್ನ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಎಸ್‌ಎಸ್‌ಎಲ್‌ಸಿ  ಪರೀಕ್ಷೆ ಬರೆಯಲು ಹೋಗಿದ್ದಾಳೆ. ಚೆನ್ನಾಗಿ ಪರೀಕ್ಷೆ ಬರೆದು ಹಿಂದಿರುಗುತ್ತಾಳೆ ಎಂದು ಕಾಯುತ್ತಿದ್ದ ಪೋಷಕರಿಗೆ ಮಗಳ ಈ ಸುದ್ದಿ ತಿಳಿದು ಸಿಡಿಲು ಬಡಿದಂತಾಗಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News