ಇಂದಿನಿಂದ ಸೆ.28ರವರೆಗೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯೂ ಬೆಳಗ್ಗೆ 10.15 ರಿಂದ ಆರಂಭಗೊಳ್ಳಲಿದ್ದು, 1.15 ರವರೆಗೆ ನಡೆಯಲಿದೆ. 

Last Updated : Sep 21, 2020, 09:10 AM IST
  • ರಾಜ್ಯದಲ್ಲಿ ಇಂದಿನಿಂದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ಆರಂಭ
  • ರಾಜ್ಯಾದ್ಯಂತ 772 ಕೇಂದ್ರಗಳಲ್ಲಿ ಪೂರಕ ಪರೀಕ್ಷೆ ನಡೆಯಲಿದೆ.
  • ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿರ್ಭಂಧಿತ ಪ್ರದೇಶ ಎಂದು ಘೋಷಿಸಲಾಗಿದೆ.
ಇಂದಿನಿಂದ ಸೆ.28ರವರೆಗೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ title=

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಎಸ್‍ಎಸ್‍ಎಲ್‍ಸಿ (SSLC) ಪೂರಕ ಪರೀಕ್ಷೆ ಆರಂಭವಾಗಲಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಮತ್ತು ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿರ್ಭಂಧಿತ ಪ್ರದೇಶ ಎಂದು ಘೋಷಿಸಲಾಗಿದೆ.

ಕೊರೊನಾವೈರಸ್ (Coronavirus) ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗೆ ಮುಖ್ಯ ಪರೀಕ್ಷೆಗೆ ಕೈಗೊಂಡಿರುವ ರೀತಿಯಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದು ಕೊಳ್ಳಲಾಗುತ್ತಿದೆ. ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯೂ ಬೆಳಗ್ಗೆ 10:15 ರಿಂದ 1:15ರವರೆಗೆ ನಡೆಯಲಿದೆ. 

COVID-19 ಸಮಯದಲ್ಲಿ ಪರೀಕ್ಷೆಗಳನ್ನು ನಡೆಸಲು ಕೇಂದ್ರದ ಹೊಸ ಮಾರ್ಗಸೂಚಿ ಬಿಡುಗಡೆ

ಜೂನ್/ಜುಲೈನಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಅನಾರೋಗ್ಯದಿಂದ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳು ಈಗ ಪರೀಕ್ಷೆ ತೆಗೆದುಕೊಂಡಿದ್ದು ರಾಜ್ಯಾದ್ಯಂತ 772 ಕೇಂದ್ರಗಳಲ್ಲಿ ಪೂರಕ ಪರೀಕ್ಷೆ ನಡೆಯಲಿದೆ. ಈ ಪೂರಕ ಪರೀಕ್ಷೆಗೆ ಒಟ್ಟು 2.13 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ.

ಗುಜರಾತ್: 'ಗಾಂಧೀಜಿ ಹೇಗೆ ಆತ್ಮಹತ್ಯೆ ಮಾಡಿಕೊಂಡರು?' 9 ನೇ ತರಗತಿ ಪರೀಕ್ಷೆಯಲ್ಲಿ ಆಘಾತಕಾರಿ ಪ್ರಶ್ನೆ!

ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಕೆಳಗಿನಂತಿದೆ...

ಸೆ.21 ಗಣಿತ, ಸಮಾಜಶಾಸ್ತ್ರ

ಸೆ.22 ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)

ಸೆ.23 ಸಮಾಜಶಾಸ್ತ್ರ

ಸೆ.24 ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)

ಸೆ. 25 ತೃತೀಯ ಭಾಷೆ ( ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು)

ಸೆ. 26 ಎಲಿಮೆಂಟ್ಸ್ ಆಫ್ ಮೆಕಾನಿಕಲ್, ಎಲಿಮೆಂಟ್ಸ್ ಆಫ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್, ಗ್ರಾಫಿಕ್ಸ್, ಅರ್ಥಶಾಸ್ತ್ರ

ಸೆ. 28 ವಿಜ್ಞಾನ, ರಾಜ್ಯಶಾಸ್ತ್ರ, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ

Trending News