ರಾಜ್ಯ ಬಿಜೆಪಿಯ ಮಾಧ್ಯಮ ವಕ್ತಾರ ಚಂದ್ರಶೇಖರ್ ನಿಧನ

ಸೋಮವಾರ ಕೆ.ಆರ್.ಮಾರ್ಕೆಟ್ ಬಳಿ ಬಿಎಂಟಿಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದಾಗ ಚಂದ್ರಶೇಖರ್ ಅವರಿಗೆ ಹೃದಯಾಘಾತವಾಗಿತ್ತು.

Written by - Zee Kannada News Desk | Last Updated : Jun 27, 2022, 07:46 PM IST
  • ರಾಜ್ಯ ಬಿಜೆಪಿಯ ಮಾಧ್ಯಮ ವಕ್ತಾರ ಚಂದ್ರಶೇಖರ್ ನಿಧನರಾಗಿದ್ದಾರೆ
  • ಹಠಾತ್ ಹೃದಯಾಘಾತದಿಂದ ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಕೊನೆಯುಸಿರು
  • ಜಾಗತಿಕ ಮತ್ತು ರಾಷ್ಟ್ರೀಯ ವಿಷಯಗಳ ಕುರಿತು ಪಾಂಡಿತ್ಯ ಹೊಂದಿದ್ದ ಚಂದ್ರಶೇಖರ್
ರಾಜ್ಯ ಬಿಜೆಪಿಯ ಮಾಧ್ಯಮ ವಕ್ತಾರ ಚಂದ್ರಶೇಖರ್ ನಿಧನ title=
ಬಿಜೆಪಿಯ ಮಾಧ್ಯಮ ವಕ್ತಾರ ಚಂದ್ರಶೇಖರ್ ನಿಧನ

ಬೆಂಗಳೂರು: ರಾಜ್ಯ ಬಿಜೆಪಿಯ ಮಾಧ್ಯಮ ವಕ್ತಾರ ಚಂದ್ರಶೇಖರ್ ನಿಧನರಾಗಿದ್ದಾರೆ. ಹಠಾತ್ ಹೃದಯಾಘಾತದಿಂದ ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಅವರು ಇಹಲೋಕ ತ್ಯಜಿಸಿದ್ದಾರೆ.  

ಸೋಮವಾರ ಕೆ.ಆರ್.ಮಾರ್ಕೆಟ್ ಬಳಿ ಬಿಎಂಟಿಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದಾಗ ಚಂದ್ರಶೇಖರ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಯಿತಾದರೂ ಪ್ರಯೋಜನವಾಗಲಿಲ್ಲ.

ಇದನ್ನೂ ಓದಿ: ಸಂಚಾರ ನಿಯಮ ಉಲ್ಲಂಘನೆ: ಅನಾವಶ್ಯಕವಾಗಿ ವಾಹನ ತಡೆಯದಂತೆ ಡಿಜಿ & ಐಜಿಪಿ ಸೂಚನೆ

ಜಾಗತಿಕ ಮತ್ತು ರಾಷ್ಟ್ರೀಯ ವಿಷಯಗಳ ಕುರಿತು ಪಾಂಡಿತ್ಯ ಹೊಂದಿದ್ದ ಚಂದ್ರಶೇಖರ್ ಅವರು ಮಾಧ್ಯಮ ವಕ್ತಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಸದ್ಯ ಅವರ ಪಾರ್ಥಿವ ಶರೀರವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಮೇಲೆ ದಾಳಿ ನಡೆಸಲು IT, ED & CBIಗಳಿಗೆ ಭಯವೇ?: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News