ಬೆಂಗಳೂರು: ರಾಜ್ಯ ಬಜೆಟ್ ಮಾರ್ಚ್ ಮೊದಲ ವಾರ ಮಂಡಿಸುವ ಹಿನ್ನೆಲೆಯಲ್ಲಿ ಫೆಬ್ರವರಿ 9 ರಿಂದ ಬಜೆಟ್ ಪೂರ್ವಭಾವಿ ಸರಣಿ ಸಭೆಗಳನ್ನು ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ತೀರ್ಮಾನಿಸಿದ್ದಾರೆ . ಈ ಸಂಬಂಧ ವಿವಿಧ ಇಲಾಖೆಗಳಿಗೆ ಸೂಚನೆಯನ್ನ ವೇಳಾಪಟ್ಟಿಯಂತೆ ಪೂರ್ವಭಾವಿ ಸಭೆಗೆ ಹಾಜರಾಗುವಂತೆ ಸಿಎಂ ಸೂಚನೆ ನೀಡಿದ್ದಾರೆ.
ಇಂದು ಡೆಲ್ಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಮದ್ಯಾಹ್ನ 1 ಕ್ಕೆ ಕೇಂದ್ರ ಸಚಿವರು ಹಾಗೂ ಕರ್ನಾಟಕದ ಸಂಸದರ ಜತೆ ಚರ್ಚೆ ನಡೆಸಲಿದ್ದಾರೆ. ಬಿಜೆಟ್ ಪೂರ್ವಭಾವಿ ಸಭೆ ಮುಖ್ಯಮಂತ್ರಿಗಳ ದೆಹಲಿ ಪ್ರವಾಸದ ಬಳಿಕವೇ ನಡೆಯಲಿದೆ. ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಜೊತೆ ಸಭೆ ನಡೆಸಿ ರಾಜ್ಯಕ್ಕೆ ಬರಬೇಕಾಗುವ ಜಿ ಎಸ್ ಟಿ ಪರಿಹಾರ, ಬಜೆಟ್ ನಲ್ಲಿ ರಾಜ್ಯಕ್ಕೆ ಅನುಧಾನ ಹಾಗೂ ಪ್ರಸ್ತುತ ಬಜೆಟ್ ನಲ್ಲಿ ರಾಜ್ಯಗಳಿಗೆ ಕೇಂದ್ರ 1 ಲಕ್ಷ ಕೋಟಿ ಬಡ್ಡಿ ರಹಿತ ಸಾಲದಲ್ಲಿ ರಾಜ್ಯಕ್ಕೆ ಎಷ್ಟು ಸಿಗಲಿದೆ ಎಂಬ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಫೆಬ್ರವರಿ 8 ರಂದು, ಕರ್ನಾಟಕ ಹಾಗೂ ನೆರೆ ರಾಜ್ಯಗಳ ಮದ್ಯೆ ಇರುವ ಜಲವಿವಾದದ ಬಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಕಾನೂನು ತಜ್ಞರ ಜೊತೆ ಸಭೆ ನಡೆಸಲಿದ್ದಾರೆ. ನಂತರ ಮತ್ತೆ ಕೇಂದ್ರ ಸಚಿವರೊಂದಿಗೆ ಮಾತುಕತೆ ಬಳಿಕ ಸಿಎಂ ಬೆಂಗಳೂರಿಗೆ ಮರಳಲಿದ್ದಾರೆ.
ಇದನ್ನೂ ಓದಿ- ಹಿಜಾಬ್ ನಿಷೇಧದಿಂದ ಹೆಣ್ಣುಮಕ್ಕಳು ಶಿಕ್ಷಣ ಪಡೆಯಲು ಕಷ್ಟ ಪಡಬೇಕಾಗುತ್ತದೆ: ಮಾಜಿ ಸಿಎಂ ಕುಮಾರಸ್ವಾಮಿ
ಇನ್ನು ಎರಡು ದಿನಗಳಲ್ಲಿ ದೆಹಲಿ ಪ್ರವಾಸ (Delhi Tour) ಅಂದುಕೊಂಡಂತೆ ನಡೆದರೆ ಫೆ. 9 ರಿಂದ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ.
ಫೆ. 9 (ಬುಧವಾರ) ಬೆಳಿಗ್ಗೆ 11 ರಿಂದ 12: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಭೆ. ಬಳಿಕ ಕೃಷಿ, ಕಾರ್ಮಿಕ, ಸಹಕಾರ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ, ತೋಟಗಾರಿಕೆ, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಭೆ.
ಫೆ. 10 (ಗುರುವಾರ): ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಮತ್ತು ಗ್ರಾಹಕರ ವ್ಯವಹಾರಗಳು, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ, ಪ್ರವಾಸೋದ್ಯಮ, ಸಾರಿಗೆ, ಪರಿಶಿಷ್ಠ ಪಂಗಡಗಳ ಅಭಿವೃದ್ದಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಆಡಳಿತ ಸುಧಾರಣೆ ಇಲಾಖೆಗಳ ಸಭೆ.
ಫೆ. 11 (ಶುಕ್ರವಾರ): ಇಂಧನ, ಕನ್ನಡ ಮತ್ತು ಸಂಸ್ಕೃತಿ, ಗೃಹ, ಜಲ ಸಂಪನ್ಮೂಲ, ಕಂದಾಯ, ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲನೆ, ಲೋಕೋಪಯೋಗಿ, ಕೈಮಗ್ಗ ಮತ್ತು ಜವಳಿ, ಸಕ್ಕರೆ ಇಲಾಖೆಯ ಸಭೆ.
ಇದನ್ನೂ ಓದಿ- 12 ಪೊಲೀಸ್ ತರಬೇತಿ ಶಾಲೆಗಳನ್ನು ಮಹಿಳಾ ಆತ್ಮರಕ್ಷಣಾ ತರಬೇತಿಗೆ ಬಳಕೆ: ಸಿಎಂ ಬೊಮ್ಮಾಯಿ
ಇನ್ನು ಶನಿವಾರ ಹಾಗೂ ಭಾನುವಾರ ಸರ್ಕಾರಿ ರಜೆಯ ದಿನಗಳಾಗಿದ್ದು ಸೋಮವಾರ ಜಂಟಿ ಅಧಿವೇಶನದ ನಂತರ ಉಳಿದ ಸಭೆಯನ್ನ ಆಯೋಜಿಸಲು ಯೋಜಿಸಲಾಗುತ್ತಿದೆ.
ಫೆ. 14 (ಸೋಮವಾರ): ಸಚಿವ ಸಂಪುಟ ಸಭೆಯ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಣ್ಣ ಕೈಗಾರಿಕೆ ಪೌರಾಡಳಿತ, ನಗರಾಭಿವೃದ್ದಿ ಇಲಾಖೆಗಳ ಸಭೆ .
ಫೆ. 15 (ಮಂಗಳವಾರ): ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ, ಸಕಾಲ, ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶುಸಂಗೋಪಣೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ, ಮುಜರಾಯಿ, ಹಜ್ ಮತ್ತು ವಕ್ಫ್, ಅಲ್ಪಸಂಖ್ಯಾತ ಕಲ್ಯಾಣ, ಕಾನೂನು, ನ್ಯಾಯ, ಮಾನವಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಇಲಾಖೆಗಳ ಸಭೆ.
ಫೆ. 16 (ಬುಧವಾರ): ವಸತಿ, ಮೂಲಸೌಕರ್ಯ ಅಭಿವೃದ್ದಿ, ನಗರಾಭಿವೃದ್ಧಿ, ಆರೋಗ್ಯ ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಸಭೆ.
ಫೆ. 17 (ಗುರುವಾರ) : ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳ ಜೊತೆ ಸಿಎಂ ಸಭೆ. ಬಳಿಕ ವಿವಿಧ ಸಂಘಟನೆಗಳು ಹಾಗೂ ತೆರಿಗೆ ಸಂಗ್ರಹಣಾ ಇಲಾಖೆಗಳ ಪರಿಶೀಲನಾ ಸಭೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ನಡೆಸಲಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.