ಹೊಸ ದಿಕ್ಸೂಚಿ ಇಲ್ಲದೇ ಕವಲು ದಾರಿಯಲ್ಲಿ ರಾಜ್ಯ ಸರ್ಕಾರ: ಬಸವರಾಜ ಬೊಮ್ಮಾಯಿ

Basavaraja Bommai Slams Congress government: ಗೃಹ ಜ್ಯೋತಿ ಯೋಜನೆಯಡಿ 200 ಯುನಿಟ್ ವಿದ್ಯುತ್ ಉಚಿತ ಕೊಡುವುದಾಗಿ ಹೇಳಿ, ಈಗ ವಾರ್ಷಿಕ ಬಳಕೆಯ ಸರಾಸರಿ ಮೇಲೆ ಶೇ.10ರಷ್ಟು ಹೆಚ್ಚಿಗೆ ನೀಡುವುದಾಗಿ‌ ಹೇಳುತ್ತಿದ್ದೀರಿ ಎಂದು ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Prashobh Devanahalli | Edited by - Puttaraj K Alur | Last Updated : Jul 10, 2023, 08:04 PM IST
  • ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ನುಡಿದಂತೆ ನಡೆಯದ ಕಾಂಗ್ರೆಸ್ ಸರ್ಕಾರ
  • ಹೊಸ ದಿಕ್ಸೂಚಿ ಇಲ್ಲದೇ ಕವಲು ದಾರಿಯಲ್ಲಿರುವ ಸಿದ್ದರಾಮಯ್ಯರ ಸರ್ಕಾರ
  • ‘ಅನ್ನಭಾಗ್ಯ’ ಯೋಜನೆ ವಿಚಾರವಾಗಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ
ಹೊಸ ದಿಕ್ಸೂಚಿ ಇಲ್ಲದೇ ಕವಲು ದಾರಿಯಲ್ಲಿ ರಾಜ್ಯ ಸರ್ಕಾರ: ಬಸವರಾಜ ಬೊಮ್ಮಾಯಿ title=
ಕಾಂಗ್ರೆಸ್ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ನುಡಿದಂತೆ ನಡೆಯದ ಕಾಂಗ್ರೆಸ್ ಸರ್ಕಾರ ಹೊಸ ದಿಕ್ಸೂಚಿ ಇಲ್ಲದೇ ಕವಲು ದಾರಿಯಲ್ಲಿದೆ. ಒಂದೇ ತಿಂಗಳಲ್ಲಿ ಅಪಖ್ಯಾತಿಗೆ ಒಳಗಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಪಂಚ ಗ್ಯಾರಂಟಿ ಜಾರಿಗೊಳಿಸುವಲ್ಲಿ ಗೊಂದಲವಿದೆ. ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲವೆಂದು ಆರೋಪ ಮಾಡಿದ್ದೀರಿ, ಎಫ್‌ಸಿ‌ಐ ಅಧಿಕಾರಿಗೆ ಒಂದು ರಾಜ್ಯಕ್ಕೆ ಅಕ್ಕಿ ಕೊಡುವ ಅಧಿಕಾರ ಇಲ್ಲ. ನೀವು ಕೇಂದ್ರ ಸರ್ಕಾರದ ಜೊತೆ ಮಾತಾಡಬೇಕಿತ್ತು, ಅಷ್ಟಕ್ಕೂ ಕೇಂದ್ರ ಸರ್ಕಾರ ನಿಮ್ಮ ಅನ್ನ ಭಾಗ್ಯಕ್ಕೆ ಅಕ್ಕಿ ಕೊಡ್ತೀವಿ ಅಂತಾ ಹೇಳಿತ್ತಾ ? ಕೇಂದ್ರದ ಜೊತೆಗೆ ಇದರ ಬಗ್ಗೆ ಚರ್ಚೆ ಮಾಡಿದ್ದಿರಾ?’ ಎಂದು ಪ್ರಶ್ನಿಸಿದರು.

ಮುಂಗಾರಿನ ಕಾರಣದಿಂದ ಅಕ್ಕಿ ಅಲಭ್ಯತೆ ಇದೆ, ಹೀಗಾಗಿ ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಕ್ಕಾಗಿಲ್ಲ ಪಂಜಾಬ್‌ ಸರ್ಕಾರ ಅಕ್ಕಿ ಕೊಡಲು ತಯಾರಾಗಿದ್ದರು, ಆಂಧ್ರಪ್ರದೇಶ, ಛತ್ತೀಸ್‌ಗಡ ಸರ್ಕಾರಗಳು ಸಹಾಯ ಮಾಡಲು ಮುಂದಾಗಿದ್ದವು. ತೆಲಂಗಾಣ ಸರ್ಕಾರ ಭತ್ತ ಕೊಡಲು ಸಿದ್ಧರಿದ್ದರು. ನಿಮಗೆ ಜನರಿಗೆ ಅಕ್ಕಿ ಕೊಡುವ ಇಚ್ಛಾಶಕ್ತಿ ಇಲ್ಲ. ಈಗ ದುಡ್ಡು ಕೊಡಲು ಮುಂದಾಗಿದ್ದೀರಾ? ಜನರು ಹಣ ತಿಂತಾರಾ ಅಂತಾ ಸಿಎಂ ಕೇಳಿದ್ದಾರೆ. ಸರ್ಕಾರ 5 ಕೆಜಿ ಅಕ್ಕಿ ಬದಲು 170 ರೂ. ನೀಡುವುದು ಒಬ್ಬ ಬಡ ಮಹಿಳೆಯ ಅರ್ಧ ದಿನದ ಕೂಲಿಗೆ ಸಮವಾಗಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ: Kasturi Rangan: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್​ಗೆ ಲಘು ಹೃದಯಾಘಾತ!

ಅಕ್ಕಿ ಕೊಡುವುದು ಹೊಸತೇನಲ್ಲ: ಪಡಿತರ ವ್ಯವಸ್ಥೆ ಸ್ವಾತಂತ್ರ್ಯ ಬಂದಾಗಿನಿಂದಲೂ‌ ಇದೆ. ಇಂಗ್ಲೆಂಡಿನ ಆಡಳಿತದ ಕಾಲದಿಂದಲೇ ಪಡಿತರ ಕೊಡುವ ವ್ಯವಸ್ಥೆ ಇತ್ತು. ಆಗ ದುಡ್ಡು ತೆಗೆದುಕೊಂಡು ಪಡಿತರ ಕೊಡುತ್ತಿದ್ದರು. ಅಕ್ಕಿ, ಸಕ್ಕರೆ, ಗೊಧಿ ಕೊಡುತ್ತಿದ್ದರು. ಆ ಮೇಲೆ ಆಹಾರ ಭದ್ರತಾ ಕಾಯ್ದೆ ಬಂದ ನಂತರ ಪಡಿತರ ವ್ಯವಸ್ಥೆಯನ್ನು ಕಾನೂನು ವ್ಯಾಪ್ತಿಗೆ ತರಲಾಯಿತು. ಮೊದಲು ಕೇಂದ್ರ ಸರ್ಕಾರ ಕೆಜಿಗೆ 3 ರೂ. ಗೆ ಕೊಡಲಾಗುತ್ತಿತ್ತು. ಕೊರೊನಾ ಸಂದರ್ಭದಲ್ಲಿ ಕೇಂದ್ರ ಸರ್ಕಾರ 5 ಕೆಜಿ ಉಚಿತವಾಗಿ ಕೊಡುತ್ತಿದೆ. ಈಗ ಹೆಚ್ಚಿಗೆ ಕೊಡಲು ರಾಜ್ಯ ಸರ್ಕಾರ ಕೊಡಬೇಕಿದೆ. ನಮ್ಮ ಸರ್ಕಾರದ ಅವಧಿಯಲ್ಲೂ 10 ಕೆಜಿ ಕೊಡುತ್ತಿದ್ದೇವು. ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ನಿರಂತರವಾಗಿ ಮಾರಾಟವಾಗುತ್ತಿವೆ ಎಂದು ಹೇಳಿದರು.

ಹೆಚ್ಚು ಅಕ್ಕಿ ಕೊಟ್ಟಷ್ಟೂ ಕಾಳ ಸಂತೆಕೋರರಿಗೆ ಉತ್ತೇಜನ ನೀಡಿದಂತಾಗಬಾರದು. ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟಾವಾಗುತ್ತಿರುವುದಕ್ಕೆ ಕಾಲಕಾಲಕ್ಕೆ ಪ್ರಕರಣಗಳು ದಾಖಲಾಗುತ್ತಿರುವುದೇ ಸಾಕ್ಷಿ. ಅದರಿಂದ ಒಬ್ಬ ಐಎಎಸ್ ಅಧಿಕಾರಿ ಸಾವಿಗೀಡಾಗಿದ್ದಾರೆ. ಅಷ್ಟೊಂದು ಅಕ್ಕಿ ಕೊಡುವ ಬದಲು ರಾಗಿ‌ಜೋಳ ನೀಡಿದರೆ ನಮ್ಮ ರೈತರಿಗೆ ಅನುಕೂಲವಾಗುತ್ತದೆ. ಆರೋಗ್ಯಕ್ಕೂ ಒಳ್ಳೆಯದಾಗುತ್ತದೆ ಎಂದು ಬೊಮ್ಮಾಯಿ ಸಲಹೆ ನೀಡಿದರು. ಜಾರಿಯಾಗದ ಯುವನಿಧಿ: ಯುವನಿಧಿ ಯೋಜನೆ ಪದವಿ ಮುಗಿಸಿ 6 ತಿಂಗಳು ಉದ್ಯೋಗ ಸಿಗದವರಿಗೆ ನೀಡುವುದಾಗಿ ಹೇಳುತ್ತಾರೆ. ಪದವಿ ‌ಮುಗಿಸಿ 2-3 ವರ್ಷ ಕಳೆದರೂ ಉದ್ಯೋಗ ಸಿಗದವರಿಗೆ ಯುವನಿಧಿ ನೀಡಿದ್ದರೆ ಅನುಕೂಲ ಆಗುತ್ತಿತ್ತು. ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡಿದ್ದಿರಿ’ ಎಂದು ಕಿಡಿಕಾರಿದರು.

ಗೃಹ ಜ್ಯೋತಿ ಯೋಜನೆಯಡಿ 200 ಯುನಿಟ್ ವಿದ್ಯುತ್ ಉಚಿತ ಕೊಡುವುದಾಗಿ ಹೇಳಿ, ಈಗ ವಾರ್ಷಿಕ ಬಳಕೆಯ ಸರಾಸರಿ ಮೇಲೆ ಶೇ.10ರಷ್ಟು ಹೆಚ್ಚಿಗೆ ನೀಡುವುದಾಗಿ‌ ಹೇಳುತ್ತಿದ್ದೀರಿ. ಗ್ರಾಮೀಣ ಮಹಿಳೆಯರಿಗೆ ಉತ್ತಮ ಜೀವನ ನಡೆಸಲು ಅವಕಾಶ ಕಲ್ಪಿಸಬಾರದೇ ಅವರಿಗೆ ಉಚಿತ ವಿದ್ಯುತ್‍ನಿಂದ ಬೇರೆ ಬೇರೆ ಕೆಲಸಗಳಿಗೆ ಅನೂಕೂಲ ಆಗುತ್ತಿರಲಿಲ್ಲವೇ? ನಗರದ ಮಹಿಳೆಯರೂ ಮಾತ್ರ ಉತ್ತಮ ಜೀವನ ನಡೆಸಬೇಕಾ? ಹಳ್ಳಿ ಮಹಿಳೆಯರು ಹೊಗೆ ಕುಡಿತಾ ಇರಬೇಕಾ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Jain Muni murder case: ಜೈನ ಮುನಿ ಹತ್ಯೆ ಪ್ರಕರಣ ಸಿಬಿಐ ತನಿಖೆಗೆ ಬೊಮ್ಮಾಯಿ ಆಗ್ರಹ

ಈ ಮಧ್ಯೆ ಕರೆಂಟ್ ದರ ಹೆಚ್ಚಳ ಮಾಡಿ ಜನರಿಗೆ ಭಾರ ಹಾಕಿದ್ದಾರೆ. ಗೃಹಜ್ಯೋತಿ ಯೋಜನೆ ಅನಷ್ಠಾನದಲ್ಲಿ ನುಡಿದಂತೆ ನಡೆದಿಲ್ಲ. ಗೃಹಲಕ್ಷ್ಮೀ ಯೋಜನೆಯಲ್ಲಿ ಅತ್ತೆ-ಸೊಸೆಗೆ ಜಗಳ ಹಚ್ಚುವ ಕೆಲಸ ಮಾಡಿದ್ದಾರೆ. ಗೃಹಲಕ್ಷ್ಮೀಗೆ ಗೃಹಣ‌ ಹಿಡಿದಿದೆ. ಹೆಣ್ಣು ಮಕ್ಕಳಿಗೆ ಬಸ್ ಪಾಸ್ ವ್ಯವಸ್ಥೆ ಮಾಡಿದ್ದಾರೆ. ಅದರ ಆವಾಂತರ ಎಲ್ಲರೂ ನೋಡಿದ್ದೇವೆ. ಪುರುಷರಿಗೂ ಮಹಿಳೆಯರ ಟಿಕೆಟ್ ಕೊಟ್ಟು ಕಾರ್ಪೊರೇಷನ್ ಹೆಚ್ಚಿನ ಹಣ ಪಡೆಯಲು ಪ್ರಯತ್ನ ನಡೆದಿದೆ. ಈ ಮಿಸ್ ಯೂಸ್ ತಪ್ಪಿಸಲು ಏನು ಕ್ರಮ ಕೈಗೊಂಡಿದ್ದೀರಿ? ಎಂದು ಪ್ರಶ್ನಿಸಿದರು.

ಹಳ್ಳಿಗಳಲ್ಲಿ ಶಾಲೆ, ಆರೋಗ್ಯ ಸೇವೆ ಅಗತ್ಯವಿದೆ. ಉದ್ಯೋಗ ಸೃಷ್ಟಿ ಮಾಡಬೇಕು. ನಮ್ಮ ಅವಧಿಯಲ್ಲಿ ವಾರ್ಷಿಕ 6 ಲಕ್ಷ‌ 36 ಸಾವಿರ ಉದ್ಯೊಗ ಸೃಷ್ಟಿಯಾಗಿದೆ. ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 52 ಸಾವಿರ ಕೋಟಿ ಹೆಚ್ಚುವರಿ ಹಣ ಸಂಗ್ರಹ ಮಾಡಬೇಕು. ಇದು ಪ್ರತಿ ವರ್ಷ 52 ಸಾವಿರ ಕೋಟಿ ಹಣ ಸಂಗ್ರಹ ಮಾಡಬೇಕು. ಈ ಹಿನ್ನೆಲೆ ಕೃಷ್ಣಾ, ಕಾವೇರಿ, ಮೇಕೆದಾಟು ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಆಗುವುದಿಲ್ಲ. ನೀರಾವರಿ ಯೋಜನೆಗಳಿಗೆ ಇದರಿಂದ ದೊಡ್ಡ ಹೊಡೆತ ಬೀಳುತ್ತದೆ ಎಂದು ಹೇಳಿದರು.

ನಮ್ಮ ಯೋಜನೆಗಳ ಬದಲಾವಣೆ: ಶಿಕ್ಷಣದ ಬಗ್ಗೆ ಬಹಳ ಮಾತನಾಡುತ್ತಾರೆ. ನಾವು ಒಂದೇ ವರ್ಷ 8 ಸಾವಿರ ಶಾಲೆಗಳ ನಿರ್ಮಾಣಕ್ಕೆ ಆದೇಶ ಮಾಡಿದ್ದೇವೆ. 3 ವರ್ಷದಲ್ಲಿ 24 ಸಾವಿರ ಶಾಲಾ‌ ಕಟ್ಟಡ ನಿರ್ಮಾಣ ಮಾಡುವ ಗುರಿ‌ ಇತ್ತು. ನೀವು ನಮ್ಮ ಕಾರ್ಯಕ್ರಮದ ಬಗ್ಗೆ ಮಾತನಾಡಿದ್ದೀರಿ, ಹೊಸದಾಗಿ ಶಾಲಾ ಕಟ್ಟಡ‌ ನಿರ್ಮಾಣ ಮಾಡುವ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಇನ್ನು ಶಿಕ್ಷಣದಲ್ಲೂ ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಲು ಐಟಿಐಗಳನ್ನು ಮೇಲ್ದರ್ಜೆಗೆ ಏರಿಸಿದ್ದೇವು. ನೀವು ಅವುಗಳನ್ನು ಕೈ ಬಿಟ್ಟೀದ್ದೀರಿ ಎಂದು ಟೀಕಿಸಿದರು.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್ ಬಗ್ಗೆ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಹೇಳಿದ್ದೇನು?

ಮಕ್ಕಳು ಮುಕ್ತವಾಗಿ ಅಧ್ಯಯನ ಮಾಡಲು ಎನ್‍ಇಪಿ ಜಾರಿ ಮಾಡಿದ್ದೇವು. ನೀವು ಅದನ್ನು ಬದಲಾವಣೆ ಮಾಡಿದ್ದೀರಿ, ನಾವು ಮಾಡಿದ್ದನ್ನೆಲ್ಲ ಬದಲಾವಣೆ ಮಾಡಲಿಕ್ಕೆ ನೀವು ಬಂದಿದ್ದರೆ ಮಾಡಿ. ಆದರೆ ನೀತಿಗಳನ್ನು ಮುಂದುವರೆಸಿಕೊಂಡು ಹೋಗಬೇಕಾಗುತ್ತದೆ ಎಂದು ಹೇಳಿದರು. ರಾಜ್ಯಪಾಲಯ ಭಾಷಣ ನೋಡಿದರೆ ಸರ್ಕಾರ‌ ಕವಲು ದಾರಿಯಲ್ಲಿದೆ ಅನಿಸುತ್ತಿದೆ. ವಿದ್ಯಾನಿಧಿ ಯೋಜನೆಯಿಂದ ಸುಮಾರು 8 ಲಕ್ಷ ರೈತರ ಮಕ್ಕಳಿಗೆ ಅನುಕೂಲವಾಗುತ್ತಿತ್ತು. ರೈತರಿಗೆ ಬಿತ್ತನೆಗೆ ಅನುಕೂಲವಾಗಲು 10 ಸಾವಿರ ರೂ. ನೀಡುವ ಭೂಸಿರಿ ಯೋಜನೆ‌ ಇತ್ತು, ಅದನ್ನು ಕೈ ಬಿಟ್ಟಿದ್ದೀರಿ. ರೈತರಿಗೆ ಅನ್ಯಾಯ ಮಾಡುವುದು ನಿಮ್ಮದು ಯಾವ ರೀತಿಯ ರೈತಪರ ಸರ್ಕಾರ ಎಂದು ಪ್ರಶ್ನಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News