ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ವಿಸ್ತರಣೆಗೆ ರಾಜ್ಯ ಸರ್ಕಾರ ನಿರ್ಧಾರ

ಎಲ್ಲಾ ಜಿಲ್ಲಾ ಕೇಂದ್ರ ಹಾಗೂ ತಾಲೂಕುಗಳಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ. 

Last Updated : Oct 11, 2017, 03:16 PM IST
ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ವಿಸ್ತರಣೆಗೆ ರಾಜ್ಯ ಸರ್ಕಾರ ನಿರ್ಧಾರ title=
Pic: India.com

ಬೆಂಗಳೂರು: ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 

ಒಂದು ಲಕ್ಷ ಜನಕ್ಕೆ ಒಂದು ಇಂದಿರಾ ಕ್ಯಾಂಟೀನ್ ತೆರೆಯಲು ಸರ್ಕಾರ ತೀರ್ಮಾನಿಸಿದೆ. ಇಂತಹ ಒಂದು 
ಮಹತ್ವದ ನಿರ್ಧಾರವನ್ನು ಇಂದು ನಡೆದ ಸಚಿವ ಸಂಪುಟದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಟಿ.ಬಿ. ಜಯಚಂದ್ರ ಹೇಳಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಟಿ.ಬಿ. ಜಯಚಂದ್ರ, ಎಲ್ಲಾ ಜಿಲ್ಲಾ ಕೇಂದ್ರ ಹಾಗೂ ತಾಲೂಕುಗಳಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. 171ಕಡೆ 246 ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲು ಸ್ಥಳ ಗುರುತಿಸಲು ನ.17 ವರೆಗೆ ಗಡುವು ನೀಡಲಾಗಿದೆ. ಡಿಸೆಂಬರ್ ಒಳಗೆ ಈ ಯೋಜನೆ ಪೂರ್ಣಗೊಳ್ಳಲಿದೆ. ಜನವರಿ 1, 2018 ಕ್ಕೆ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆಗೊಳ್ಳಲಿದೆ. ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ 185ಕೋಟಿ ರೂ. ತಗುಲಲಿದೆ. ಪ್ರತಿ ತಿಂಗಳಿಗೆ ರೂ.8.98 ಕೋಟಿ ರೂ.‌ವೆಚ್ಚವಾಗುತ್ತದೆ ಎಂದು ಜಯಚಂದ್ರ ತಿಳಿಸಿದರು.

Trending News