ಸಂಡೂರು: ಸಂಡೂರು ವಿಧಾನಸಭಾ ಕ್ಷೇತ್ರದ ತೋರಣಗಲ್ ನಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಮುಸ್ಲಿಂ ತುಷ್ಟೀಕರಣದ ರಾಜಕರಣ ಮಾಡುತ್ತಿದೆ ಎಂದು ಹರಿ ಹಾಯ್ಡರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಹಳೇ ಹುಬ್ಬಳ್ಳಿ ಗಳಭೆಕೋರರ ಮೇಲಿನ ಕೇಸ್ ರದ್ದುಪಡಿಸಿತು. ಇದೀಗ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲೂ ಮುಸ್ಲಿಮರ ಮೇಲಿನ ಕೇಸ್ ಹಿಂಪಡೆಯಲು ತಯಾರಿ ನಡೆಸಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ ಹಿಂಪಡೆಯಲು ಎಲ್ಲಾ ತಯಾರಿ ನಡೆಸಿರುವ ಬಗ್ಗೆ ತಮಗೆ ಪಕ್ಕಾ ಮಾಹಿತಿ ಬಂದಿದೆ. ತನ್ನದೇ ಪಕ್ಷದ ಒಬ್ಬ ದಲಿತ ಶಾಸಕನ ಮನೆ ಸುಟ್ಟು ಹಾಕಿದ್ದಾರೂ ಕಾಂಗ್ರೆಸ್ ಗೆ ತುಷ್ಟೀಕರಣ ರಾಜಕಾರಣವೇ ಪ್ರಮುಖವಾಗಿದೆ ಎಂದು ಪ್ರಲ್ಹಾದ ಜೋಶಿ ಕಿಡಿ ಕಾರಿದರು.
ಹಿಂದೂ ಸಂಘಟನೆ, ಹಿಂದೂಗಳು ಮತ್ತು ದೇವಸ್ಥಾನಗಳ ಮೇಲೆ ದಾಳಿ ನಡೆದರೂ ಕಾಂಗ್ರೆಸ್ ಸರ್ಕಾರ ಹಿಂದೂಯೇತರ ಆರೋಪಿಗಳನ್ನೇ ರಕ್ಷಿಸಲು ಕ್ರಮ ಕೈಗೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಖಾಲಿ ಹಾಳೆ ಸಂವಿಧಾನ ಪ್ರತಿ ಹಂಚಿಕೆ; ಬುದ್ಧಿ ಭ್ರಮಣೆ ಆಗಿದೆಯೇ?: ಕಾಂಗ್ರೆಸ್ಸಿಗರು ಮಹಾರಾಷ್ಟ್ರದಲ್ಲಿ ಖಾಲಿ ಹಾಳೆಯ ಸಂವಿಧಾನ ಪ್ರತಿ ಹಂಚಿದ್ದು, ಬುದ್ಧಿ ಭ್ರಮಣೆ ಆಗಿದೆಯೇ? ಇವರಿಗೆ ಎಂದು ಲೇವಡಿ ಮಾಡಿದರು.
ಮಾತೆತ್ತಿದರೆ ಸಂವಿಧಾನ, ದಲಿತರ ಪರ ಎನ್ನುವ ಕಾಂಗ್ರೆಸ್ ನಾಯಕರು ಸಂವಿಧಾನಕ್ಕೆ, ದಲಿತರಿಗೆ ಕೊಡುವ ಗೌರವ ಇದೇನಾ? ಎಂದು ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದರು.
ನಾಗ್ಪುರದಲ್ಲಿ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಇದ್ದ ಕಾರ್ಯಕ್ರಮದಲ್ಲಿ ಮೊದಲ ಪುಟ ಸಂವಿಧಾನ ಗ್ರಂಥದ ಚಿತ್ರ, ಒಳಗೆಲ್ಲ ಖಾಲಿ ಪುಟಗಳಿರುವ ಪ್ರತಿಗಳನ್ನು ಹಂಚಿದೆ. ಇದು ಸಂವಿಧಾನದ ಮೇಲೆ ಹಾಗೂ ಅಂಬೇಡ್ಕರ್, ದಲಿತರ ಮೇಲೆ ಕಾಂಗ್ರೆಸ್ಸಿಗರಿಗೆ ಇರೋ ಭಾವನೆ, ಕಿಮ್ಮತ್ತು ಎಂಥದ್ದು ಎಂಬುದನ್ನು ತೋರಿಸುತ್ತದೆ ಎಂದು ವಾಗ್ದಾಳಿ ಮಾಡಿದರು.
ತುಷ್ಟೀಕರಣದ ರಾಜಕಾರಣ: ಕಾಂಗ್ರೆಸ್ ಮುಸ್ಲಿಂ ತುಷ್ಟೀಕರಣದ ಪರಾಕಾಷ್ಟೆ ತಲುಪಿದೆ. ಪರಿಣಾಮ ಮತ್ತೆ ಬಾಂಬ್ ಬೆದರಿಕೆ, ಭಯೋತ್ಪಾದಕ ಚಟುವಟಿಕೆಗಳಿಗೆ ಕುಮ್ಮಕ್ಕು ಸಿಗುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ನಿರ್ಬಂಧಿತ ಸೆಮಿ(ಸ್ಟೂಡೆಂಟ್ ಇಸ್ಲಾಮಿಕ್ ಮೂಮೆಂಟ್ ಆಫ್ ಇಂಡಿಯಾ)ದ ಅವತಾರಗಳು ಮತ್ತೆ ಮರುಕಳಿಸುತ್ತಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅದರ 175 ಕೇಸ್ ಗಳನ್ನು ಪಡೆದಿತ್ತು ಎಂದು ಆರೋಪಿಸಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ 2013-18ರ ಅವಧಿಯಲ್ಲಿ ಕೋರ್ಟ್ ಸಹ ಸೆಮಿಗೆ ನಿರ್ಬಂಧ ಹೇರಿತು. ಆದರೆ, SDPI, PFI ಕಾರ್ಯಚಟುವಟಿಕೆಗಳು ಸೆಮಿಯ ಅವತಾರ ಎಂಬಂತೆ ನಡೆಯುತ್ತಿದ್ದು, ಈಗ ಮತ್ತೆ ಚುರುಕಾಗಿದೆ. ಕಾಂಗ್ರೆಸ್ ಸರ್ಕಾರ ಇದಕ್ಕೆ ಕುಮ್ಮಕ್ಕು ಕೊಡುತ್ತಿದೆ ಎಂದು ಪ್ರಲ್ಹಾದ ಜೋಶಿ ಕಿಡಿ ಕಾರಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.