ಕೋಲಾರ: ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಸದ ಮುನಿಸ್ವಾಮಿ ಹಾಗೂ ಅವರ ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಇದೆ ವೇಳೆ ತೆರವು ಮಾಡುತ್ತಿದ್ದ ಜೆಸಿಬಿ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ನಾರಮಾಕಲಪಲ್ಲಿ ಗ್ರಾಮದ ಬಳಿ ನಡೆದಿದೆ.ಕಲ್ಲು ತೂರಾಟದಿಂದಾಗಿ ಜಿಸಿಬಿ ಗಾಜು ಪುಡಿ ಪುಡಿಯಾಗಿವೆ.
ಇದನ್ನೂ ಓದಿ: ಮೋದಿ ಕೆಲಸಗಳನ್ನು ಒಪ್ಪಿಕೊಳ್ಳದವರು ಹಾದರಕ್ಕೆ ಹುಟ್ಟಿದಂಗೆ : ಎಸ್.ಕೆ. ಬೆಳ್ಳುಬ್ಬಿ
ಕಳೆದ ಹದಿನೈದು ದಿನಗಳಿಂದ ಅರಣ್ಯ ಒತ್ತುವರಿ ಕಾರ್ಯಾಚರಣೆ ನಡೆಯುತ್ತಿದ್ದು, ಬಹುತೇಕ ಪ್ರಭಾವಿಗಳೇ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಸಣ್ಣ ರೈತರು ಬೆಳೆದಿದ್ದ ಟೊಮ್ಯಾಟೊ, ಕ್ಯಾಪ್ಸಿಕಂ ಬೆಳೆಗಳನ್ನು ನಾಶಪಡಿಸಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ: ಚುನಾವಣೆ ಮುಗಿದರೂ ನಾಯಕ ನಿಲ್ಲದೆ ಬಿಜೆಪಿ ಹತಾಶೆ ಸ್ಥಿತಿಗೆ ತಲುಪಿದೆ: ಎಂಬಿ ಪಾಟೀಲ್
ಇದೆ ವೇಳೆ ರೈತರ ಬೆಂಬಲಕ್ಕೆ ಧಾವಿಸಿದ ಸಂಸದ ಮುನಿಸ್ವಾಮಿ ಅವರಿಗೆ ಸಮಯಕೊಡಬೇಕಿತ್ತೆಂದು ಆಗ್ರಹಿಸಿದ್ದಾರೆ.ಈಗ ನ್ಯಾಯಾಲಯ ಆದೇಶದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿದೆ ಎನ್ನಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.