ಪರೀಕ್ಷೆಗೆ ಹಾಜರಾಲು ಹಿಜಾಬ್ ಧರಿಸಲು ಅನುಮತಿ ಕೋರಿ ಮತ್ತೆ ಕೋರ್ಟ್ ಮೊರೆ

Karnataka hijab Row : ಮಾರ್ಚ್ 9 ರ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶವಾಗುವಂತೆ ವಿದ್ಯಾರ್ಥಿಗಳು ಪರಿಹಾರವನ್ನು ಕೋರುತ್ತಿದ್ದಾರೆ ಎಂದು ವಿದ್ಯಾರ್ಥಿಗಳ ಪರ ವಕೀಲ  ಶಾದನ್ ಫರಾಸತ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. 

Written by - Ranjitha R K | Last Updated : Feb 23, 2023, 10:22 AM IST
  • ಮತ್ತೆ ಸದ್ದು ಮಾಡಿದ ಹಿಜಾಬ್
  • ಕೋರ್ಟ್ ಮುಂದೆ ವಿದ್ಯಾರ್ಥಿನಿಯರ ಅಳಲು
  • ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೋರಿ ಅರ್ಜಿ
ಪರೀಕ್ಷೆಗೆ ಹಾಜರಾಲು ಹಿಜಾಬ್ ಧರಿಸಲು ಅನುಮತಿ ಕೋರಿ ಮತ್ತೆ ಕೋರ್ಟ್ ಮೊರೆ  title=

ನವದೆಹಲಿ : ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಪರೀಕ್ಷೆ ಬರೆಯಲು ಮಧ್ಯಂತರ ಪರಿಹಾರ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. 

ಮಾರ್ಚ್ 9 ರ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶವಾಗುವಂತೆ ವಿದ್ಯಾರ್ಥಿಗಳು ಪರಿಹಾರವನ್ನು ಕೋರುತ್ತಿದ್ದಾರೆ ಎಂದು ವಿದ್ಯಾರ್ಥಿಗಳ ಪರ ವಕೀಲ ಶಾದನ್ ಫರಾಸತ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗದಂತೆ ಯಾಕೆ ತಡೆಯಲಾಗಿದೆ ಎಂದು ಕೋರ್ಟ್ ಪ್ರಶ್ನಿಸಿದೆ. ಇದಕ್ಕೆ ಉತ್ತರಿಸಿದ ವಕೀಲ  ಶಾದನ್ ಫರಾಸತ್  ವಿದ್ಯಾರ್ಥಿಗಳು ಹೆಡ್ ಸ್ಕಾರ್ಫ್ ಧರಿಸುವುದರಿಂದ ಪರೀಕ್ಷೆಗೆ ಕುಳಿತುಕೊಳ್ಳುವುದು ಸಾಧ್ಯವಾಗುತ್ತಿಲ್ಲ. ಅಲ್ಲದೆ, ವಿದ್ಯಾರ್ಥಿಗಳು ಈಗಾಗಲೇ ಒಂದು ವರ್ಷವನ್ನು ಕಳೆದುಕೊಂಡಿದ್ದಾರೆ.   ಮತ್ತೊಂದು ವರ್ಷವನ್ನು ಕಳೆದುಕೊಳ್ಳಲು ವಿದ್ಯಾರ್ಥಿಗಳಿಗೆ ಇಷ್ಟವಿಲ್ಲ ಎನ್ನುವ ಅಂಶವನ್ನು ಕೂಡಾ ವಿದ್ಯಾರ್ಥಿಗಳ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ : ಪಿಂಚಣಿ ಹೋರಾಟಕ್ಕೆ ಬಂದು ರೈಲಿಗೆ ತಲೆಕೊಟ್ಟ ಅನುದಾನಿತ ಶಾಲಾ ಶಿಕ್ಷಕ..!

ಜನವರಿ 2022 ರಲ್ಲಿ, ಕರ್ನಾಟಕದ ಉಡುಪಿಯ ಸರ್ಕಾರಿ ಮಹಿಳಾ ಪಿಯು ಕಾಲೇಜಿನ ಆರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಬೇಕೆಂದು ಪ್ರತಿಭಟನೆ ಆರಂಭಿಸಿದ್ದರು. ನಂತರ ಈ ಪ್ರತಿಭಟನೆ ದೇಶವ್ಯಾಪಿ ಹರಡಿತ್ತು. ಇದಾದ ಬಳಿಕ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದು, ಕಳೆದ ವರ್ಷ ಮಾರ್ಚ್‌ನಲ್ಲಿ ಕರ್ನಾಟಕ ಹೈಕೋರ್ಟ್ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿತ್ತು. ಧಾರ್ಮಿಕ ಉಡುಪುಗಳಿಗೆ ತರಗತಿಯಲ್ಲಿ ಅವಕಾಶವಿಲ್ಲ ಎಂದು ಹೇಳಿತ್ತು.  

ನಂತರ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲೆ ಸುಪ್ರೀಂ ಕೋರ್ಟ್ ಭಿನ್ನ ತೀರ್ಪು ನೀಡಿತ್ತು.  ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹೈಕೋರ್ಟ್ ತೀರ್ಪಿನ ವಿರುದ್ಧದ ಅರ್ಜಿಗಳನ್ನು ವಜಾಗೊಳಿಸಿದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವುಗಳನ್ನು ಅನುಮತಿಸಿದ್ದರು. ಹೀಗಾಗಿ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸುವ ಈ ಅರ್ಜಿಗಳನ್ನು ಸೂಕ್ತ ದೊಡ್ಡ ಪೀಠದ ರಚನೆಗಾಗಿ ಮುಖ್ಯ ನ್ಯಾಯಾಧೀಶರ ಮುಂದೆ ಇಡುವಂತೆ ಸೂಚಿಸಲಾಗಿತ್ತು.  

ಇದನ್ನೂ ಓದಿ : ವಿದ್ಯಾರ್ಥಿನಿಯರ ಮೊಬೈಲ್‌ಗೆ ಅಸಭ್ಯ ಸಂದೇಶ ಕಳಿಸುತ್ತಿದ್ದ ಶಿಕ್ಷಕ ಅಮಾನತು

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News