ಕನ್ನಡ ಪುಸ್ತಕ ನೀತಿ ಪುನರ್ ರಚನೆಗೆ ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯ ಆಹ್ವಾನ

ಕನ್ನಡ ಪುಸ್ತಕ ಲೋಕವು ಆಧುನಿಕ ಮಾಧ್ಯಮಗಳ ನೂತನ ಆವಿಷ್ಕಾರಗಳ ಫಲವಾಗಿ ವಿಸ್ತಾರಗೊಳ್ಳುತ್ತಿದೆ. ಹೀಗಾಗಿ, ಪುಸ್ತಕೋದ್ಯಮದ ಎಲ್ಲಾ ಸಾಧ್ಯತೆ ಮತ್ತು ಸವಾಲುಗಳನ್ನು ಹೊಸ ದೃಷ್ಠಿಕೋನದಿಂದ ನೋಡುವ ಅಗತ್ಯತೆ ಇದೆ. ಆದ್ದರಿಂದ ಕನ್ನಡ ಪುಸ್ತಕ ನೀತಿಯನ್ನು ಪುನರ್ ರಚಿಸಲು ನಿರ್ಧರಿಸಲಾಗಿದೆ.

Written by - Zee Kannada News Desk | Last Updated : Feb 1, 2023, 12:45 AM IST
  • ಕನ್ನಡ ಪುಸ್ತಕ ಲೋಕವು ಆಧುನಿಕ ಮಾಧ್ಯಮಗಳ ನೂತನ ಆವಿಷ್ಕಾರಗಳ ಫಲವಾಗಿ ವಿಸ್ತಾರಗೊಳ್ಳುತ್ತಿದೆ.
  • ಹೀಗಾಗಿ, ಪುಸ್ತಕೋದ್ಯಮದ ಎಲ್ಲಾ ಸಾಧ್ಯತೆ ಮತ್ತು ಸವಾಲುಗಳನ್ನು ಹೊಸ ದೃಷ್ಠಿಕೋನದಿಂದ ನೋಡುವ ಅಗತ್ಯತೆ ಇದೆ.
  • ಆದ್ದರಿಂದ ಕನ್ನಡ ಪುಸ್ತಕ ನೀತಿಯನ್ನು ಪುನರ್ ರಚಿಸಲು ನಿರ್ಧರಿಸಲಾಗಿದೆ.
ಕನ್ನಡ ಪುಸ್ತಕ ನೀತಿ ಪುನರ್ ರಚನೆಗೆ ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯ ಆಹ್ವಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಪುಸ್ತಕ ನೀತಿ ಪುನರ್ ರಚನೆಗೆ ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ.

ಕನ್ನಡ ಪುಸ್ತಕ ಲೋಕವು ಆಧುನಿಕ ಮಾಧ್ಯಮಗಳ ನೂತನ ಆವಿಷ್ಕಾರಗಳ ಫಲವಾಗಿ ವಿಸ್ತಾರಗೊಳ್ಳುತ್ತಿದೆ.ಹೀಗಾಗಿ, ಪುಸ್ತಕೋದ್ಯಮದ ಎಲ್ಲಾ ಸಾಧ್ಯತೆ ಮತ್ತು ಸವಾಲುಗಳನ್ನು ಹೊಸ ದೃಷ್ಠಿಕೋನದಿಂದ ನೋಡುವ ಅಗತ್ಯತೆ ಇದೆ. ಆದ್ದರಿಂದ ಕನ್ನಡ ಪುಸ್ತಕ ನೀತಿಯನ್ನು ಪುನರ್ ರಚಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಟೋಲ್ ಸಿಬ್ಬಂದಿಯಿಂದ ಕಾರು ಚಾಲಕನ ಮೇಲೆ ಹಲ್ಲೆ

ಇ-ಪುಸ್ತಕ, ಆಡಿಯೋ ಪುಸ್ತಕ ಒಳಗೊಂಡಂತೆ ಆಧುನಿಕ ಪುಸ್ತಕೋದ್ಯಮದ ಸಾಧಕ-ಬಾಧಕಗಳು ಹಾಗೂ ಕನ್ನಡ ಪುಸ್ತಕ ಲೋಕದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಈ ಪುಸ್ತಕ ನೀತಿ ರಚನೆ ಆಗಬೇಕಿದೆ. ಇದಕ್ಕಾಗಿ ಕನ್ನಡ ಪುಸ್ತಕ ಪ್ರಾಧಿಕಾರವು ಹಿರಿಯ ಚಿಂತಕ, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಇವರ ಅಧ್ಯಕ್ಷತೆಯಲ್ಲಿ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿಯು ಅಂತಿಮ ಹಂತದ ಕರಡನ್ನು ಸಿದ್ಧಪಡಿಸುತ್ತಿದೆ. ನಾಡಿನ ಬರಹಗಾರರು, ಚಿಂತಕರು, ಓದುಗರು, ಪ್ರಕಾಶಕರು ಹಾಗೂ ಆಸಕ್ತ ಸಾರ್ವಜನಿಕರಿಂದ ಪುಸ್ತಕ ಲೋಕಕ್ಕೆ ಸಂಬಂಧಿಸಿದಂತೆ ಅನುಷ್ಠಾನ ಮಾಡಬಹುದಾದ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳನ್ನು ಪಡೆಯಲು ಈ ಸಮಿತಿಯು ನಿರ್ಧರಿಸಿದೆ.

ಇದನ್ನೂ ಓದಿ: “ಕೃಷಿ ಮತ್ತು ಕೃಷಿಕರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ; ಬಜೆಟ್ನಲ್ಲಿ ರೈತರಿಗೆ ವಿಶೇಷ ಆಧ್ಯತೆ”

ಆದ್ದರಿಂದ ನಾಡಿನ ಬರಹಗಾರರು, ಚಿಂತಕರು, ಓದುಗರು, ಪ್ರಕಾಶಕರು ಹಾಗೂ ಆಸಕ್ತ ಸಾರ್ವಜನಿಕರು ಪುಸ್ತಕ ನೀತಿಯಲ್ಲಿ ಅಳವಡಿಸಬೇಕಾದ ಅಂಶಗಳ ಬಗ್ಗೆ ತಮ್ಮ ಸಲಹೆ ಸೂಚನೆ ಮತ್ತು ಅಭಿಪ್ರಾಯಗಳನ್ನು ಫೆ.10 ರೊಳಗೆ ಅಂಚೆ ಮೂಲಕ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, 1ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ಈ ವಿಳಾಸಕ್ಕೆ ಕಳುಹಿಸಬೇಕು. ಅಥವಾ ಪ್ರಾಧಿಕಾರದ ಇ-ಮೇಲ್ ವಿಳಾಸ kannadappradhikara@gmail.com ಮೂಲಕವೂ ಕಳುಹಿಸಬಹುದೆಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್‍ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

 

Trending News