ಸುಳ್ವಾಡಿ ದುರಂತದ ಹಿಂದೆ ಮಹಿಳೆ: ಪ್ರಕರಣಕ್ಕೆ ಹೊಸ ತಿರುವು

ಸುಳ್ವಾಡಿ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ 15 ಜನರು ಮೃತಪಟ್ಟಿದ್ದಾರೆ.

Last Updated : Dec 19, 2018, 08:53 AM IST
ಸುಳ್ವಾಡಿ ದುರಂತದ ಹಿಂದೆ ಮಹಿಳೆ: ಪ್ರಕರಣಕ್ಕೆ ಹೊಸ ತಿರುವು title=

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ 15 ಜನರು ಮೃತಪಟ್ಟಿದ್ದು, ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಿದೆ. ಪ್ರಸಾದಕ್ಕೆ ವಿಷ ಬೆರೆಸಿದ್ದು ನಾನೇ ಎಂದು ಮಹಿಳೆಯೊಬ್ಬಳು ಪೊಲೀಸರ ಮುಂದೆ ತಪ್ಪೋಪ್ಪಿಕೊಂಡಿರುವ ಬಗ್ಗೆ ಮಾಹಿತಿ ಲಭಿಸಿದೆ.

ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದರು. ಈ ವೇಳೆ ದೇವಸ್ಥಾನದ ವ್ಯವಸ್ಥಾಪಕ ಮಾದೇಶ್ ಪತ್ನಿ ಅಂಬಿಕಾ ಅವರೇ ಪ್ರಸಾದಕ್ಕೆ ವಿಷ ಬೆರೆಸಿದ್ದು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ನಾನೇ ಪ್ರಸಾದಕ್ಕೆ ವಿಷ ಹಾಕಿದ್ದು ಎಂದು ಅಂಬಿಕಾ ತಪ್ಪೊಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಇಮ್ಮಡಿ ಮಹದೇವಸ್ವಾಮಿ ಸೂಚನೆ ಮೇರೆಗೆ ನಾನೇ ಪ್ರಸಾದದಲ್ಲಿ ವಿಷ ಹಾಕಿದ್ದು ಎಂದು ಅಂಬಿಕಾ ನೀಡಿರುವ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಪ್ರಕರಣ ಸಂಬಂಧ ಇಮ್ಮಡಿ ಮಹದೇವಸ್ವಾಮಿ ಸೇರಿದಂತೆ ಮತ್ತಿತರರನ್ನು ಬಂಧಿಸುವ ಸಾಧ್ಯತೆ ಇದೆ.
 

Trending News