ಸಂಸತ್ ಭವನದ ಎದುರು ಫೋಟೋ ತೆಗೆಸಿಕೊಂಡ ಸುಮಲತಾ ಏನ್ ಹೇಳಿದರೆ ಗೊತ್ತಾ...!

ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರವಾಗಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ವಿರುದ್ಧ ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಸಾಧಿಸಿದ್ದರು.  

Last Updated : Jun 6, 2019, 04:19 PM IST
ಸಂಸತ್ ಭವನದ ಎದುರು ಫೋಟೋ ತೆಗೆಸಿಕೊಂಡ ಸುಮಲತಾ ಏನ್ ಹೇಳಿದರೆ ಗೊತ್ತಾ...! title=
Pic Courtesy: Facebook

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರವಾಗಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ವಿರುದ್ಧ ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಸಾಧಿಸಿದ್ದರು. ಸಂಸದರಾಗಿ ಇದೇ ಮೊದಲ ಬಾರಿಗೆ ಲೋಕಸಭೆಗೆ ತೆರಳಿರುವ ಅವರು ಸಂಸತ್ ಭವನದ ಎದುರು ಫೋಟೋ ತೆಗೆಸಿಕೊಂಡು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.

ಫೇಸ್ ಬುಕ್ ನಲ್ಲಿ ಸಂಸತ್ ಭವನದ ಎದುರು ತೆಗೆಸಿಕೊಂಡಿರುವ ಪೋಟೋ ಶೇರ್ ಮಾಡಿರುವ ಸುಮಲತಾ ಅಂಬರೀಶ್, ದೀರ್ಘ ಪ್ರಯಾಣ .. ಪ್ರಜಾಪ್ರಭುತ್ವದ ಪವಿತ್ರ ದೇವಸ್ಥಾನಕ್ಕೆ... ಜೈ ಹಿಂದ್... ಜೈ ಕರ್ನಾಟಕ... ಎಂದು ಬರೆದುಕೊಂಡಿದ್ದಾರೆ. ಇದರೊಂದಿಗೆ ಗೌರವ ಮತ್ತು ಹೆಮ್ಮೆಯಾಗುತ್ತಿದೆ ಎಂದೂ ಕೂಡ ಬರೆದುಕೊಂಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿ ಸ್ವತಂತ್ರ್ಯವಾಗಿ ಸ್ಪರ್ಧಿಸಿ ಗೆದ್ದ ಇತಿಹಾಸವೇ ಇಲ್ಲ. ಆದರೆ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದ ಮೊದಲ ಅಭ್ಯರ್ಥಿ ಎಂಬ ಕೀರ್ತಿಗೂ ಸುಮಲತಾ ಪಾತ್ರರಾಗಿದ್ದಾರೆ.
 

Trending News