ಶಾಸಕ ಷಡಕ್ಷರಿಗೆ ತಪ್ಪಿದ 'ಕೈ' ಟಿಕೆಟ್; ಇಂದು ತಿಪಟೂರು ಬಂದ್

ತಿಪಟೂರು ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿಗೆ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಇಂದು ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದರಲ್ಲದೆ ತಿಪಟೂರು ಬಂದ್ ಘೋಷಣೆ ಮಾಡಿದ್ದಾರೆ.

Last Updated : Apr 16, 2018, 01:25 PM IST
ಶಾಸಕ ಷಡಕ್ಷರಿಗೆ ತಪ್ಪಿದ 'ಕೈ' ಟಿಕೆಟ್; ಇಂದು ತಿಪಟೂರು ಬಂದ್ title=

ತುಮಕೂರು : ತಿಪಟೂರು ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿಗೆ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಇಂದು ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದರಲ್ಲದೆ ತಿಪಟೂರು ಬಂದ್ ಘೋಷಣೆ ಮಾಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರವಷ್ಟೇ ಕಾಂಗ್ರೆಸ್ 218 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ತಿಪಟೂರು ಕ್ಷೇತ್ರದ ಶಾಸಕ ಕೆ.ಷಡಕ್ಷರಿಗೆ ಟಿಕೇಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ನಗರದ ಪೈ ಹೋಟೆಲ್ ವೃತ್ತದಲ್ಲಿ ನೂರಾರು ಬೆಂಬಲಿಗರು ಜಮಾಯಿಸಿ ಪ್ರತಿಭಟನೆ ನಡೆಸಿದರು.

ಇದೇ ಸಂದರ್ಭದಲ್ಲಿ ಟೈರ್'ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಷಡಕ್ಷರಿ ಬೆಂಬಲಿಗರು, ಸೀಮೆಎಣ್ಣೆ ಸುರಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದರು. ಕೆ.ಷಡಕ್ಷರಿ ಅವರಿಗೆ ಟಿಕೆಟ್ ಕೊಡದೆ ಕಾಂಗ್ರೆಸ್ ಅನ್ಯಾಯ ಮಾಡಿದೆ ಎಂದು ಅಸಮಾಧಾನ ಹೊರಹಾಕಿದ ಕಾರ್ಯಕರ್ತರು ಕಾಂಗ್ರೆಸ್ ಹೈಕಮಾಂಡ್ ಹಾಗೂ ನಾಯಕರ ವಿರುದ್ಧ ಧಿಕ್ಕಾರ ಕೂಗಿದರು. 

ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸುವಲ್ಲಿ ಹರಸಾಹಸ ಪಡಬೇಕಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಗಟ್ಟಲು ನಗರಾದ್ಯಂತ ಬಿಗಿ ಪೋಲಿಸ್ ಭದ್ರತೆ ಏರ್ಪಡಿಸಲಾಗಿದೆ. 

Trending News