ಮುಂಗಾರಿನ ಪ್ರಾಕೃತಿಕ ವಿಕೋಪ ಎದುರಿಸಲು ಅಗತ್ಯ ಮುಂಜಾಗ್ರತೆ ವಹಿಸಿ: ಸಿಎಂ ಸಿದ್ದರಾಮಯ್ಯ

ವಿದ್ಯುಚ್ಚಕ್ತಿ ಕಂಬಗಳು ಬಿದ್ದು ಹೋದರೆ, ಟ್ರಾನ್‌ಫಾರ್ಮರ್‌ ಹಾಳಾಗಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Written by - Puttaraj K Alur | Last Updated : May 23, 2023, 04:49 PM IST
  • ಮಳೆ ಬಂದು ಮರಗಳು ಬಿದ್ದುಹೋದರೆ, ಕೂಡಲೇ ತೆರವುಗೊಳಿಸಬೇಕು
  • ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕ ಒದಗಿಸಬೇಕು
  • ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು ಎಂದ ಸಿಎಂ ಸಿದ್ದರಾಮಯ್ಯ
ಮುಂಗಾರಿನ ಪ್ರಾಕೃತಿಕ ವಿಕೋಪ ಎದುರಿಸಲು ಅಗತ್ಯ ಮುಂಜಾಗ್ರತೆ ವಹಿಸಿ: ಸಿಎಂ ಸಿದ್ದರಾಮಯ್ಯ  title=
ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ!

ಬೆಂಗಳೂರು: ಶೀಘ್ರವೇ ಮುಂಗಾರು ಆರಂಭವಾಗಲಿದ್ದು, ಪ್ರಾಕೃತಿಕ ವಿಕೋಪ ಪರಿಸ್ಥಿತಿ ಎದುರಿಸಲು ಮುಂಜಾಗ್ರತಾ ಕ್ರಮವಹಿಸಿ ಎಂದು ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು ಮತ್ತು ಜಿಪಂ CEOಗಳಿಗೆ ಸೂಚಿಸಿದ್ದಾರೆ. ನಾನು ಕೇವಲ ಸೂಚನೆ ಕೊಡೋದಿಲ್ಲ, ಎಚ್ಚರಿಕೆ ಕೊಡ್ತಾ ಇದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿದ್ಧರಾಗಿ ಎಂದು ವಿಡಿಯೋ ಸಂವಾದಲ್ಲಿ ಅವರು ಎಚ್ಚರಿಕೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಸೂಚನೆಗಳು ಹೀಗಿವೆ

1) ರಾಜ್ಯದ ಕೆಲವು ಭಾಗದಲ್ಲಿ ಮಳೆ ಪ್ರಾರಂಭ, ಬಿತ್ತನೆ ಪ್ರಾರಂಭ. ಜೂನ್‌ ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ. ಏಪ್ರಿಲ್‌ ತಿಂಗಳಿನಲ್ಲಿಯೇ ಪ್ರಿ-ಮಾನ್ಸೂನ್‌ ಮಳೆ ಪ್ರಾರಂಭವಾಗಿದೆ. ಭಾರೀ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ, ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.

2) ನಿಮ್ಮ ಬಳಿ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು.

3) ಮಳೆ ಬಂದು ಮರಗಳು ಬಿದ್ದುಹೋದರೆ, ಕೂಡಲೇ ತೆರವುಗೊಳಿಸಬೇಕು. ವಿದ್ಯುಚ್ಚಕ್ತಿ ಕಂಬಗಳು ಬಿದ್ದು ಹೋದರೆ, ಟ್ರಾನ್‌ಫಾರ್ಮರ್‌ ಹಾಳಾಗಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ.

4) ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್‌ ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ.

ಇದನ್ನೂ ಓದಿ: ರಾಜ್ಯದ ನೂತನ ಸ್ಪೀಕರ್ ಆಗಿ ಯುಟಿ ಖಾದರ್ ಆಯ್ಕೆ

5) ಯಾವುದೇ ಕಾರಣಕ್ಕೆ ಕರ್ತವ್ಯ ಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತದೆ. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೆ ಲೋಪ ಆಗಬಾರದು.

6) ಲೋಪ ಎಸಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನರು ಸರ್ಕಾರದಿಂದ ಬದಲಾವಣೆ ಬಯಸಿದ್ದಾರೆ. ಸರ್ಕಾರಕ್ಕೆ ಹೊಸ ಇಮೇಜ್‌ ಕೊಡಲೇಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬಂದಿದೆ ಎಂಬ ಸಂದೇಶ ಹೋಗಬೇಕು.

7) ಜಿಲ್ಲಾಧಿಕಾರಿಗಳು, ಸಿಇಓಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೊಲೀಸ್‌ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಬೇಕು. ಬಹಳ ಜನ ಜಿಲ್ಲಾಧಿಕಾರಿಗಳು ತಾಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರಗಳಿಗೆ ಭೇಟಿ ಮಾಡಬೇಕು.

8) ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ-ಮುನ್ಸೂಚನೆ ಅರಿತು ಕೆಲಸ ಮಾಡಬೇಕು. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯರೇ 5 ವರ್ಷ ಪೂರ್ಣಾವಧಿ ಸಿಎಂ, ಅಧಿಕಾರ ಹಂಚಿಕೆ ಇಲ್ಲ..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News