ಶಿರಸಿ: ತಾಲೂಕು ಪಂಚಾಯತ್ ರದ್ಧತಿ ಕೇವಲ ಊಹಾಪೋಹ. ಅದನ್ನು ರದ್ದು ಮಾಡಲು ರಾಜ್ಯ ಸರ್ಕಾರದಿಂದ ಸಾಧ್ಯವಿಲ್ಲ. ಆದ ಕಾರಣ ಈ ಬಾರಿಯೂ ಮೂರು ವಿಭಾಗದ ಪಂಚಾಯತ್ ರಾಜ್ ವ್ಯವಸ್ಥೆಯಡಿಯಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಕಾರ್ಮಿಕ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಶಿವರಾಮ ಹೆಬ್ಬಾರ್, ತಾಲೂಕು ಪಂಚಾಯತ್(Taluk Panchayat) ರದ್ಧತಿಗೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ. ಇದನ್ನು ಗ್ರಾಮೀಣಾಭಿವೃದ್ಧಿ ಸಚಿವರೂ ತಿಳಿಸಿದ್ದಾರೆ ಎಂದರು.
Ram Mandir: ರಾಮ ಮಂದಿರ ನಿರ್ಮಾಣಕ್ಕೆ ಕ್ರೈಸ್ತ ಸಮುದಾಯದಿಂದ '₹ 1 ಕೋಟಿ' ಹೆಚ್ಚು ದೇಣಿಗೆ..!
ಈಗಾಗಲೇ ತಾಲೂಕು ಪಂಚಾಯತ್ ರದ್ಧತಿ ಬಗ್ಗೆ ಮಾತುಗಳು ಕೇಳಿ ಬಂದಿದ್ದು ಈ ನಿಟ್ಟಿನಲ್ಲಿ, ಆದರೆ ಇದ್ಯಾವ ಚಿಂತನೆಯೂ ಇಲ್ಲ ಎಂದರು. ಅಲ್ಲದೇ ಮುಂದಿನ ಚುನಾವಣೆ(Election)ಯಲ್ಲಿ ತಾಲೂಕ್ ಪಂಚಾಯತ್, ಜಿಲ್ಲಾ ಪಂಚಾಯತ್‌ಗೆ ಚುನಾವಣೆ ನಡೆಯಲಿದೆ ಎಂದರು.
Scholarship Application: ಹಿಂದುಳಿದ ವರ್ಗದ 'ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ' ನೀಡಿದ ರಾಜ್ಯ ಸರ್ಕಾರ
ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಒಂದು ವರ್ಷವಾದ ಕುರಿತು ಮಾತನಾಡಿದ ಅವರು, ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ಇನ್ನೂ ಹಲವು ಕೆಲಸಗಳನ್ನು ಮಾಡಬೇಕಾಗಿದೆ. ಜನ ನಮ್ಮಿಂದ ಬಹಳ ಅಪೇಕ್ಷೆ ಇಟ್ಟುಕೊಂಡಿದ್ದು, ಅದಕ್ಕೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದರು.
Umesh Katti: ಪಡಿತರ ಚೀಟಿದಾರರಿಗೆ 'ಭರ್ಜರಿ ಗುಡ್ ನ್ಯೂಸ್' ನೀಡಿದ ಸಚಿವ ಉಮೇಶ್ ಕತ್ತಿ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.