ಬೆಂಗಳೂರು : ತೌಕ್ತೆ ಚಂಡಮಾರುತ ಕರ್ನಾಟಕ ಮತ್ತು ಕೇರಳದ ಕರಾವಳಿ ಪ್ರದೇಶದಿಂದ ಗುಜರಾತ್ ಕಡಲ ತೀರದತ್ತ ಪಯಣ ಬಳಿಸಿದೆ. ಉತ್ತರ ವಾಯವ್ಯ ಭಾಗದತ್ತ ಹೊರಟಿರುವ ಚಂಡಮಾರುತ ಇಂದು ಸಾಯಂಕಾಲ ಗುಜರಾತ್ ತೀರಕ್ಕೆ ತಲುಪಿ ಪೋರಬಂದರ್ ಮತ್ತು ಭಾವನಗರ್ ಮಧ್ಯೆ ನಾಳೆ ಮುಂಜಾನೆ ದಾಟಲಿದೆ. ಗುಜರಾತ್ ತೀರದ ತಗ್ಗು ಪ್ರದೇಶಗಳಿಂದ ಸುಮಾರು 1 ಲಕ್ಷದ 50 ಸಾವಿರ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ(NDRF Team) ಈಗಾಗಲೇ ತುರ್ತು ಕೆಲಸಗಳಿಗೆ 100 ತಂಡಗಳನ್ನು ಕೇರಳ, ಕರ್ನಾಟಕ, ತಮಿಳು ನಾಡು, ಗುಜರಾತ್, ಗೋವಾ ಮತ್ತು ಮಹಾರಾಷ್ಟ್ರ ಭಾಗಗಳಲ್ಲಿ ನಿಯೋಜಿಸಿದೆ.
ಇದನ್ನೂ ಓದಿ : Cyclone Tauktae : ತೌಕ್ತೆ ಚಂಡಮಾರುತದ ಅಬ್ಬರಕ್ಕೆ ರಾಜ್ಯದಲ್ಲಿ 4 ಜನ ಬಲಿ..!
ಭಾರತದ ಪಶ್ಚಿಮ ಕರಾವಳಿಯಲ್ಲಿ ಹಗುರ ಗಾಳಿಯಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸೌರಾಷ್ಟ್ರ ಮತ್ತು ಕಚ್ ಒಳನಾಡು ಪ್ರದೇಶದ ಹಲವೆಡೆ ಭಾರೀ ಮಳೆ(Heavy Rains)ಯಾಗಲಿದೆ.
ಇದನ್ನೂ ಓದಿ : Rainfall Alert : ತೌಕ್ತೆ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ..!
ರಾಜ್ಯದಲ್ಲಿ ಮೇ 20ರವರೆಗೆ ಭಾರೀ ಮಳೆ ಸುರಿಯಬಹುದು ಎಂದು ತಿಳಿಸಿರುವ ಹವಾಮಾನ ಇಲಾಖೆ(Meteorological Department) ಆರೆಂಜ್ ಮತ್ತು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ : Tauktae Cyclone : ತೌಕ್ತೆ ಚಂಡಮಾರುತಕ್ಕೆ ತತ್ತರಿಸಿದ ರಾಜ್ಯ ಕರಾವಳಿ ಪ್ರದೇಶ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.