ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅನುಮತಿ ನೀಡಿರುವ ಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು 'ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಮೇಲೆ ರಾಜಕೀಯ ದ್ವೇಷದಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ರಾಜಭವನವನ್ನು ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ' ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ @siddaramaiah ನವರ ಮೇಲೆ ರಾಜಕೀಯ ದ್ವೇಷದಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ರಾಜಭವನವನ್ನು ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ.
ಜನರಿಂದ ಆಯ್ಕೆಯಾದ ಸರ್ಕಾರಗಳನ್ನು ಹಾಗೂ ಮುಖ್ಯಮಂತ್ರಿಗಳನ್ನು ಅಸ್ಥಿರಗೊಳಿಸುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ದ್ವೇಷಕ್ಕೆ ಜನರೇ ಕಳೆದ ಲೋಕಸಭೆಯಲ್ಲಿ ಉತ್ತರ…
— Hariprasad.B.K. (@HariprasadBK2) August 17, 2024
ಜನರಿಂದ ಆಯ್ಕೆಯಾದ ಸರ್ಕಾರಗಳನ್ನು ಹಾಗೂ ಮುಖ್ಯಮಂತ್ರಿಗಳನ್ನು ಅಸ್ಥಿರಗೊಳಿಸುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ದ್ವೇಷಕ್ಕೆ ಜನರೇ ಕಳೆದ ಲೋಕಸಭೆಯಲ್ಲಿ ಉತ್ತರ ಕೊಟ್ಟಾಗಿದೆ. ಆದರೂ ಕೂಡ ಬಿಜೆಪಿ ಮತ್ತು ಮೋದಿ ಸರ್ಕಾರ ಬುದ್ಧಿ ಕಲಿಯುವ ಲಕ್ಷಣಗಳಿಲ್ಲ ಎಂದು ಅವರು ಕಿಡಿ ಕಾರಿದ್ದಾರೆ.
ದಲಿತ-ಹಿಂದುಳಿದವರ ಹಾಗೂ ಬಡವರ ಪರವಾಗಿ ಕಾರ್ಯಕ್ರಮಗಳನ್ನು ನೀಡುವ ವಿಪಕ್ಷದ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ನಡೆಯ ವಿರುದ್ಧ ಜನರು ತಕ್ಕ ಉತ್ತರ ನೀಡಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲಿನ ದ್ವೇಷದ ಪ್ರಕರಣವನ್ನು ಕಾನೂನು ವ್ಯವಸ್ಥೆಯ ಮೂಲಕವೇ ಉತ್ತರ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.