ಅಡ್ಡದಾರೀಲಿ‌ ಸಾಗೋದು ಬಿಜೆಪಿಗೆ ಕರಗತ: ತಂಗಡಗಿ

ಬಿಜೆಪಿ ಶಾಸಕ‌ ಬಸನಗೌಡ ಯತ್ನಾಳ್ ಕನಸು ಕಾಣುತ್ತಿದ್ದು, ನಮ್ಮ ಬಗ್ಗೆ ಮಾತನಾಡಲು ಅವರಿಗೆ ಯೋಗ್ಯತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಯತ್ನಾಳ್ ವಿರುದ್ಧ ಕಿಡಿಕಾರಿದ್ದಾರೆ.

Written by - Prashobh Devanahalli | Edited by - Manjunath N | Last Updated : Aug 15, 2023, 09:25 PM IST
  • ಅಡ್ಡ ದಾರಿಯಲ್ಲಿ ನಡೆಯುವುದು ಬಿಜೆಪಿಗೆ ಅಭ್ಯಾಸವಾಗಿದೆ.
  • ಹೀಗಾಗಿ ಅಡ್ಡದಾರಿ ಹಿಡಿಯುವ ಬಗ್ಗೆ ಬಿಜೆಪಿ ನಾಯಕರು ಮಾತನಾಡುತ್ತಾರೆ.
  • ಕಾಂಗ್ರೆಸ್ ಪಕ್ಷಕ್ಕೆ ಜನ ದೊಡ್ಡ ಮಟ್ಟದ ಬೆಂಬಲ ವ್ಯಕ್ತಪಡಿಸಿದ್ದಾರೆ.
 ಅಡ್ಡದಾರೀಲಿ‌ ಸಾಗೋದು ಬಿಜೆಪಿಗೆ ಕರಗತ: ತಂಗಡಗಿ title=
file photo

ಕೊಪ್ಪಳ: ಬಿಜೆಪಿ ಶಾಸಕ‌ ಬಸನಗೌಡ ಯತ್ನಾಳ್ ಕನಸು ಕಾಣುತ್ತಿದ್ದು, ನಮ್ಮ ಬಗ್ಗೆ ಮಾತನಾಡಲು ಅವರಿಗೆ ಯೋಗ್ಯತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಯತ್ನಾಳ್ ವಿರುದ್ಧ ಕಿಡಿಕಾರಿದ್ದಾರೆ.

ಆರು ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂಬ ಯತ್ನಾಳ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಮೊದಲು ಬಿಜೆಪಿ ನಾಯಕರು ವಿಪಕ್ಷ ನಾಯಕನ್ನು ಆಯ್ಕೆ ಮಾಡಿಕೊಳ್ಳಲಿ. ನಾಯಕನನ್ನು ಆಯ್ಕೆ ಮಾಡಿಕೊಳ್ಳಲಾಗದ ಬಿಜೆಪಿ‌ ನಾಯಕರು ನಮ್ಮ ಬಗ್ಗೆ ಮಾತನಾಡುತ್ತಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ವಿಪಕ್ಷ ನಾಯಕನಿಲ್ಲದೆ, ವಿಧಾನಾಭೆ ಅಧಿವೇಶನ ನಡೆದಿರುವುದು ಬಿಜೆಪಿಗೆ ನಾಚಿಗೇಡು ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಡಿಪ್ಲೋಮಾ ಕೃಷಿ ಮಹಾವಿದ್ಯಾಲಯದಲ್ಲಿ ಟೆಕ್ನಿಕಲ್ ಅಸಿಸ್ಟಂಟ್ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ಅಡ್ಡ ದಾರಿಯಲ್ಲಿ ನಡೆಯುವುದು ಬಿಜೆಪಿಗೆ ಅಭ್ಯಾಸವಾಗಿದೆ. ಹೀಗಾಗಿ ಅಡ್ಡದಾರಿ ಹಿಡಿಯುವ ಬಗ್ಗೆ ಬಿಜೆಪಿ ನಾಯಕರು ಮಾತನಾಡುತ್ತಾರೆ. ಕಾಂಗ್ರೆಸ್ ಪಕ್ಷಕ್ಕೆ ಜನ ದೊಡ್ಡ ಮಟ್ಟದ ಬೆಂಬಲ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ‌ ಶಾಸಕ ಸಿ.ಟಿ ರವಿ ಅವರ ಹಾದಿಯಾಗಿ ಬಿಜೆಪಿಗರು ನಮ್ಮ ಸರ್ಕಾರದ ಬಗ್ಗೆ ಚಿಂತಿಸುವ ಬದಲು, ಮೊದಲಿಗೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಿ ಎಂದು ಮಾರ್ಮಿಕವಾಗಿ ಹೇಳಿದರು.‌ 

ಕಾಂಗ್ರೆಸ್ ಯಾರೊಬ್ಬರ ತುಷ್ಟೀಕರಣ ಮಾಡುತ್ತಿಲ್ಲ. ಬಿಜೆಪಿಯವರಿಗೆ ದೇಶ ನೆಮ್ಮದಿಯಿಂದ ಇರುವುದು ಇಷ್ಟವಿಲ್ಲ. ಅಭಿವೃದ್ಧಿ ಬಗ್ಗೆ ಅವರಿಗೆ ಯಾವುದೇ ಕಾಳಜಿ ಇಲ್ಲ. ನಮ್ಮ ಸರ್ಕಾರದ ಐದು ಗ್ಯಾರಂಟಿಗಳಿಗೆ ಬಿಜೆಪಿ ನಾಯಕರು ಹೆದರಿದ್ದು, ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಛೇಡಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News