“ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬೊಮ್ಮಾಯಿ ಸರ್ಕಾರ ಕೇವಲ ಆಸೆ ತೋರಿಸುತ್ತಿದೆ”

ಈಗ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬೊಮ್ಮಾಯಿ ಅವರ ಸರ್ಕಾರ ಕೇವಲ ಆಸೆ ತೋರಿಸುತ್ತಿದೆ. ಈ ವಿಚಾರವಾಗಿ ಬೊಮ್ಮಾಯಿ ಅವರ ಸರ್ಕಾರದ ಪ್ರಸ್ತಾವನೆಯನ್ನು ಮೋದಿ ಸರ್ಕಾರ ಕಸದ ಬುಟ್ಟಿಗೆ ಎಸೆದಿದೆ. ಹೀಗಾಗಿ ಪರಿಶಿಷ್ಟರ ಮೀಸಲಾತಿ ಹೆಚ್ಚಳ ಬಿಜೆಪಿಯಿಂದ ಅಸಾಧ್ಯ. ಇದು ಕೇವಲ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ನಾವು ಅದನ್ನು ಮಾಡಲು ಕಟಿಬದ್ಧರಾಗಿದ್ದೇವೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.

Written by - Zee Kannada News Desk | Last Updated : Dec 2, 2022, 12:31 AM IST
  • ಈಗ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬೊಮ್ಮಾಯಿ ಅವರ ಸರ್ಕಾರ ಕೇವಲ ಆಸೆ ತೋರಿಸುತ್ತಿದೆ.
  • ಈ ವಿಚಾರವಾಗಿ ಬೊಮ್ಮಾಯಿ ಅವರ ಸರ್ಕಾರದ ಪ್ರಸ್ತಾವನೆಯನ್ನು ಮೋದಿ ಸರ್ಕಾರ ಕಸದ ಬುಟ್ಟಿಗೆ ಎಸೆದಿದೆ.
  • ಹೀಗಾಗಿ ಪರಿಶಿಷ್ಟರ ಮೀಸಲಾತಿ ಹೆಚ್ಚಳ ಬಿಜೆಪಿಯಿಂದ ಅಸಾಧ್ಯ.
“ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬೊಮ್ಮಾಯಿ ಸರ್ಕಾರ ಕೇವಲ ಆಸೆ ತೋರಿಸುತ್ತಿದೆ” title=
file photo

ಕಲಬುರ್ಗಿ: ಈಗ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬೊಮ್ಮಾಯಿ ಅವರ ಸರ್ಕಾರ ಕೇವಲ ಆಸೆ ತೋರಿಸುತ್ತಿದೆ. ಈ ವಿಚಾರವಾಗಿ ಬೊಮ್ಮಾಯಿ ಅವರ ಸರ್ಕಾರದ ಪ್ರಸ್ತಾವನೆಯನ್ನು ಮೋದಿ ಸರ್ಕಾರ ಕಸದ ಬುಟ್ಟಿಗೆ ಎಸೆದಿದೆ. ಹೀಗಾಗಿ ಪರಿಶಿಷ್ಟರ ಮೀಸಲಾತಿ ಹೆಚ್ಚಳ ಬಿಜೆಪಿಯಿಂದ ಅಸಾಧ್ಯ. ಇದು ಕೇವಲ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ನಾವು ಅದನ್ನು ಮಾಡಲು ಕಟಿಬದ್ಧರಾಗಿದ್ದೇವೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕದ ಜನರ ಮೇಲೆ ಬೊಮ್ಮಾಯಿ ಅವರ ಸರ್ಕಾರ ದ್ವೇಷ ಸಾಧಿಸುತ್ತಿದೆ. ದ್ವೇಷ, ಬೇಧ ಭಾವದ ಮೂಲಕ, ಈ ಭಾಗದ ಜನರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ. ಈ ಮಹತ್ವದ ಪ್ರದೇಶಕ್ಕೆ ಸಂವಿಧಾನಬದ್ಧವಾಗಿ ವಿಶೇಷ ಸ್ಥಾನಮಾನ ನೀಡಲು ಸಂಸತ್ತಿನಲ್ಲಿ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು.

ಬಿಜೆಪಿ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವುದರ ವಿರುದ್ಧ ನಿಂತಿತ್ತು. ಬಿಜೆಪಿಯ ಆಗಿನ ಅಧ್ಯಕ್ಷರು ಹಾಗೂ ಉಪಪ್ರಧಾನಿಯಾಗಿದ್ದ ಲಾಲ್ ಕೃಷ್ಣ ಅಡ್ವಾಣಿ ಅವರು ಕಲ್ಬುರ್ಗಿಯಿಂದ ವಿಜಯಪುರದವರೆಗೂ ವಿಶೇಷ ಸ್ಥಾನಮಾನ ನೀಡಲು ಸಾಧ್ಯವಿಲ್ಲ ಎಂದು ವಿರೋಧ ವ್ಯಕ್ತಪಡಿಸಿದ್ದರು.

ಆದರೆ ಕಾಂಗ್ರೆಸ್ ಪಕ್ಷ ಈ ಭಾಗದ ಜನರಿಗೆ ವಿಶೇಷ ಸ್ಥಾನಮಾನ ನೀಡಲು ಸಂಕಲ್ಪ ಮಾಡಿ, 2013 ರಲ್ಲಿ ಇದನ್ನು ಮಾಡಿ ತೋರಿಸಿತು. ನಾವು ದೇಶದ ಎಲ್ಲ ಪಕ್ಷಗಳನ್ನು ಒಗ್ಗೂಡಿಸಿ ಬಿಜೆಪಿ ಹೊರತು ಉಳಿದ ಎಲ್ಲಾ ಪಕ್ಷಗಳ ಒಪ್ಪಿಗೆ ಪಡೆದು 371ಜೆ ವಿಶೇಷ ಸ್ಥಾನಮಾನ ನೀಡುವಲ್ಲಿ ಯಶಸ್ವಿಯಾದೆವು.

ಈ ದೇಶದ ಎರಡು ಕಡೆ ಅತಿಹೆಚ್ಚು ಒಣ ಪ್ರದೇಶಗಳಿವೆ. ಒಂದು ರಾಜಸ್ಥಾನ ಮತ್ತೊಂದು ಕಲ್ಯಾಣ ಕರ್ನಾಟಕ. ಇಲ್ಲಿನ ಜನರು ಶ್ರಮಜೀವಿಗಳು, ಧೈರ್ಯಶಾಲಿಗಳಾದರೂ ಪ್ರಾಕೃತಿಕ ಅನಾನುಕೂಲ ಹಾಗೂ ನೀರಿನ ಕೊರತೆ ಹೆಚ್ಚಾಗಿದೆ.

ಇದನ್ನೂ ಓದಿ : Bedroom Vastu Tips : ವೈವಾಹಿಕ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಬೆಡ್ ರೂಮ್ ಅಲ್ಲಿರುವ ಈ ವಸ್ತುಗಳು 

ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಹಾಗೂ ದಿವಂಗತ ಧರಂಸಿಂಗ್ ಅವರು ಒಟ್ಟಾಗಿ ವಿಶೇಷ ಸ್ಥಾನಮಾನಕ್ಕಾಗಿ ಹೋರಾಟ ಆರಂಭಿಸಿದರು. ಸ್ವಾತಂತ್ರ್ಯ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದ ದೊಡ್ಡ ಯೋಜನೆಗಳನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಈ ಭಾಗದಲ್ಲಿ ತುಂಗಭದ್ರಾ ಆಣೆಕಟ್ಟು, ರಾಯಚೂರಿನಲ್ಲಿ ರಾಜೀವ್ ಗಾಂಧಿ ಥರ್ಮಲ್ ಕೇಂದ್ರ, ರೈಲ್ವೆ ಬೋಗಿ ತಯಾರಿಕಾ ಕಾರ್ಖಾನೆ, ಇಎಸ್ಐ ಆಸ್ಪತ್ರೆ ನಿರ್ಮಾಣ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆ, ವಿಶೇಷ ಸ್ಥಾನಮಾನ ನೀಡುವುದರವರೆಗೂ ಎಲ್ಲವನ್ನೂ ಕಾಂಗ್ರೆಸ್ ಪಕ್ಷ ಮಾಡಿದೆ.

ಈ ವಿಶೇಷ ಸ್ಥಾನಮಾನದ ಪರಿಣಾಮ ಈ ಭಾಗದ ಸುಮಾರು 40 ಸಾವಿರ ಮಕ್ಕಳಿಗೆ ವೈದ್ಯಕೀಯ ಸೀಟು ಲಭಿಸಿದೆ. ಕಾಂಗ್ರೆಸ್ ಸರ್ಕಾರದ 5 ವರ್ಷಗಳ ಅವಧಿಯಲ್ಲಿ 30 ಸಾವಿರ ಯುವಕರಿಗೆ ಸರ್ಕಾರಿ ನೌಕರಿ ನೀಡಲಾಗಿದೆ. ಈಗ ಈ ಎಲ್ಲಾ ಕಾರ್ಯಗಳನ್ನು ಪ್ರಶ್ನೆ ಮಾಡಲಾಗುತ್ತಿದೆ.

ಈಗ ಈ ಭಾಗದ ಅಭಿವೃದ್ಧಿಗೆ ಹೊಸ ಯಜ್ಞ ಆರಂಭವಾಗಬೇಕಿದೆ. ಇದರಿಂದ ಈ ಭಾಗದ ಜನರಿಗೆ ಉದ್ಯೋಗ, ಶಿಕ್ಷಣ ಸಿಗುವಂತೆ ಆಗಬೇಕು. ಈಗ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಸಿದ್ದರಾಮಯ್ಯ, ಎಂ.ಬಿ. ಪಾಟೀಲ್, ಈಶ್ವರ್ ಖಂಡ್ರೆ ಹಾಗೂ ಎಲ್ಲಾ ನಾಯಕರ ನೇತೃತ್ವದಲ್ಲಿ  ಡಿ.10 ರಂದು ಹೊಸ ಸಂಕಲ್ಪದಿಂದ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಯಜ್ಞ ಆರಂಭಿಸಬೇಕಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಸೇರಿದ 40 ಸಾವಿರ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಆರೋಗ್ಯ, ಶಿಕ್ಷಣ, ಉದ್ಯೋಗ, ವಿದ್ಯುತ್, ನೀರಿನ ವಿಚಾರವಾಗಿ ಹಲವು ಭಾಗಗಳಲ್ಲಿ ಸಮಸ್ಯೆ ಇವೆ.

ಈ ಭಾಗದಲ್ಲಿ ಬಡವರು, ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಒಂದನೇ ತರಗತಿಯಿಂದ 8 ನೇ ತರಗತಿವರೆಗಿನ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ದಶಕಗಳಿಂದ ಕಾಂಗ್ರೆಸ್ ಸರ್ಕಾರ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನವನ್ನು ಮೋದಿ ಸರ್ಕಾರ ನಿಲ್ಲಿಸಿದೆ. ಆಮೂಲಕ ಬಡವರಿಂದ ಶಿಕ್ಷಣದ ಹಕ್ಕು ಕಸಿಯಲಾಗಿದೆ.

ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ಸರ್ಕಾರ ನಿರ್ಲಕ್ಷ ವಹಿಸಿದೆ. ಕಾಗದದ ಮೇಲೆ ಮೀಸಲಾತಿ ಹೆಚ್ಚಳ ಮಾಡಿದರೆ ಸಾಲದು. ಅದನ್ನು ಸಂವಿಧಾನದಲ್ಲಿ ಸೇರಿಸಬೇಕು. ಈ ಭಾಗದ ರಕ್ಷಣೆಗಾಗಿ ನಾವು ಸಂವಿಧಾನದಲ್ಲಿ ಬದಲಾವಣೆ ತಂದಿದ್ದೇವೆ. ನಾವು ಕೂಡ ವಿಶೇಷ ಸ್ಥಾನಮಾನ ಅಸಾಧ್ಯ ಎಂದು ಭಾವಿಸಿದ್ದರೆ ಇದು ಸಾಧ್ಯವಾಗುತ್ತಿತ್ತೆ?

ಈಗ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬೊಮ್ಮಾಯಿ ಅವರ ಸರ್ಕಾರ ಕೇವಲ ಆಸೆ ತೋರಿಸುತ್ತಿದೆ. ಈ ವಿಚಾರವಾಗಿ ಬೊಮ್ಮಾಯಿ ಅವರ ಸರ್ಕಾರದ ಪ್ರಸ್ತಾವನೆಯನ್ನು ಮೋದಿ ಸರ್ಕಾರ ಕಸದ ಬುಟ್ಟಿಗೆ ಎಸೆದಿದೆ. ಹೀಗಾಗಿ ಪರಿಶಿಷ್ಟರ ಮೀಸಲಾತಿ ಹೆಚ್ಚಳ ಬಿಜೆಪಿಯಿಂದ ಅಸಾಧ್ಯ. ಇದು ಕೇವಲ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ನಾವು ಅದನ್ನು ಮಾಡಲು ಕಟಿಬದ್ಧರಾಗಿದ್ದೇವೆ.

ಬಡವರು, ರೈತರು, ಯುವಕರು, ಮಹಿಳೆಯರ ಮೇಲೆ ಆಗುತ್ತಿರುವ ಪ್ರಹಾರದ ವಿರುದ್ಧ ನಾವು ಜನಾಂದೋಲನ ರೂಪಿಸುತ್ತಿದ್ದು, ಮುಂದಿನ 10 ರಂದು ಸಮಾವೇಶ ಮಾಡಲಾಗುತ್ತಿದೆ. ಪ್ರತಿ ವಿಧಾನಸಭಾ ಕ್ಷೇತ್ರದಿಂದ ಈ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಅಧ್ಯಕ್ಷರು ಸೂಚನೆ ನೀಡಲಿದ್ದಾರೆ.

ಇದನ್ನೂ ಓದಿ : Vastu Tips For Success : ಉದ್ಯೋಗದಲ್ಲಿ ತ್ವರಿತ ಬೆಳವಣಿಗೆಗೆ 8 ವಾಸ್ತು ಸಲಹೆಗಳು!

ಜನರ ಬದುಕಿನ ಜತೆ ಚೆಲ್ಲಾಟ ಆಡುವುದು ಬಿಜೆಪಿ ಕೆಲಸ. ಆದರೆ ಕಾಂಗ್ರೆಸ್ ದು ಜನರ ಬದುಕು ಕಟ್ಟುವ ಕೆಲಸವಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಜನರ ಜತೆ ಬಿಜೆಪಿ ಸರ್ಕಾರ ಆಡುತ್ತಿರುವ ಆಟವನ್ನು ನಿಲ್ಲಿಸಬೇಕಿದೆ. ಬಿಜೆಪಿ ಸಮಾಜ ಒಡೆದರೆ, ನಾವು ಸಮಾಜ ಒಂದುಗೂಡಿಸುತ್ತೇವೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ  ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕಲ್ಬುರ್ಗಿಯಲ್ಲಿ ಗುರುವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News