ಅನ್ನಭಾಗ್ಯ ಯೋಜನೆಗೆ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ

ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಒದಗಿಸಲು 1.35 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ನೀಡಲು ನಾವು ವಿನಂತಿಸಿದ್ದೇವೆ, ಆದರೆ ಕೇಂದ್ರ ಆಹಾರ ಸಚಿವರು ಅಕ್ಕಿಯನ್ನು ನೀಡಲು ನಿರಾಕರಿಸಿರುತ್ತಾರೆ ಎಂದು ರಾಜ್ಯ ಆಹಾರ ಸಚಿವರಾದ ಕೆ ಎಚ್ ಮುನಿಯಪ್ಪ ರವರು ದೆಹಲಿಯಲ್ಲಿ ಇಂದು ತಿಳಿಸಿದರು.

Written by - Prashobh Devanahalli | Edited by - Manjunath N | Last Updated : Jun 23, 2023, 04:51 PM IST
  • ನಮ್ಮ ಸರ್ಕಾರ ಹಣವನ್ನು ನೀಡಲು ತಯಾರಿದ್ದು ನಮಗೆ ಅಕ್ಕಿಯನ್ನು ನೀಡಬೇಕೆಂದು ಮನವಿ ಮಾಡಲಾಯಿತು.
  • ಆದರೆ ಕೇಂದ್ರ ಸಚಿವರು 300 ಲಕ್ಷ ಟನ್ ಅಕ್ಕಿಯನ್ನು ಇತರೆ ವಿವಿಧ ಯೋಜನೆಗಳಿಗೆ ಮೀಸಲಿಡಲಾಗಿದೆ,
  • ಆದರೆ ರಾಜ್ಯ ಸರ್ಕಾರವು ಅನ್ನಭಾಗ್ಯದ ಯೋಜನೆಯನ್ನು ಅನುಷ್ಠಾನಕ್ಕೆ ತರುತ್ತದೆ ಎಂದು ಕೆ ಎಚ್ ಮುನಿಯಪ್ಪ ರವರು ಸ್ಪಷ್ಟಪಡಿಸಿದ್ದಾರೆ.
 ಅನ್ನಭಾಗ್ಯ ಯೋಜನೆಗೆ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ title=

ನವದೆಹಲಿ: ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಒದಗಿಸಲು 1.35 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ನೀಡಲು ನಾವು ವಿನಂತಿಸಿದ್ದೇವೆ, ಆದರೆ ಕೇಂದ್ರ ಆಹಾರ ಸಚಿವರು ಅಕ್ಕಿಯನ್ನು ನೀಡಲು ನಿರಾಕರಿಸಿರುತ್ತಾರೆ ಎಂದು ರಾಜ್ಯ ಆಹಾರ ಸಚಿವರಾದ ಕೆ ಎಚ್ ಮುನಿಯಪ್ಪ ರವರು ದೆಹಲಿಯಲ್ಲಿ ಇಂದು ತಿಳಿಸಿದರು.

ಇಂದು ದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವರಾದ Piyush Goyal ರವರನ್ನು ಭೇಟಿ ಮಾಡಿ ಕರ್ನಾಟಕ ರಾಜ್ಯದ ಅನ್ನಭಾಗ್ಯ ಯೋಜನೆಯ ಕುರಿತು ವಿವರಿಸಲಾಯಿತು, ಹಠಾತ್ತನೆ ಭಾರತ ಒಕ್ಕೂಟ ವ್ಯವಸ್ತೆಯ ಕೇಂದ್ರ ಸರ್ಕಾರ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯನ್ನ (OMSS) ಸ್ಥಗಿತ ಗೊಳಿಸಿದ್ದರಿಂದ ಬಡವರಿಗೆ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಅನುಷ್ಠಾನಕ್ಕೆ ಭಾರಿ ಹೊಡೆತ ಬೀಳಲಿದೆ ಹಾಗೂ ಈ ಹಿಂದೆ ಇದ್ದ ಯೋಜನೆಯನ್ನು ಮುಂದುವರೆಸಬೇಕು ಎಂದು ಮನವಿ ಮಾಡಿಕೊಳ್ಳಲಾಯಿತು ನಮ್ಮ ಸರ್ಕಾರ ಹಣವನ್ನು ನೀಡಲು ತಯಾರಿದ್ದು ನಮಗೆ ಅಕ್ಕಿಯನ್ನು ನೀಡಬೇಕೆಂದು ಮನವಿ ಮಾಡಲಾಯಿತು. ಆದರೆ ಕೇಂದ್ರ ಸಚಿವರು 300 ಲಕ್ಷ ಟನ್  ಅಕ್ಕಿಯನ್ನು ಇತರೆ ವಿವಿಧ ಯೋಜನೆಗಳಿಗೆ ಮೀಸಲಿಡಲಾಗಿದೆ, ಆದ್ದರಿಂದ ರಾಜ್ಯಕ್ಕೆ ಅಕ್ಕಿ ನೀಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿರುತ್ತಾರೆ.ಆದರೆ ರಾಜ್ಯ ಸರ್ಕಾರವು ಅನ್ನಭಾಗ್ಯದ ಯೋಜನೆಯನ್ನು ಅನುಷ್ಠಾನಕ್ಕೆ ತರುತ್ತದೆ ಎಂದು ಕೆ ಎಚ್ ಮುನಿಯಪ್ಪ ರವರು ಸ್ಪಷ್ಟಪಡಿಸಿದ್ದಾರೆ.

ಇನ್ನೂ ಮುಂದುವರೆದು ಮಾತನಾಡಿದ ಅವರು ಈ ನಿಲುವು ಬಡವರ ವಿರೋಧಿಯಾಗಿದೆ ಹಾಗೂ ರಾಜಕೀಯ ಪ್ರೇರಿತವಾಗಿದೆ ಎಂದು ಖಂಡಿಸುತ್ತೇನೆ.ಎಷ್ಟೇ ಅಡೆ ತಡೆಗಳಾದರು ನಾವು ಅನ್ನಭಾಗ್ಯ ಯೋಜನೆಯನ್ನು ಅನುಷ್ಠಾನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

 

No description available.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News