ಬೆಳಗಾವಿ: ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶೇ. 40 ರಷ್ಟು ಕಮೀಷನ್ ಆರೋಪ ಮಾಡಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಉಡುಪಿ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಪೂರಿ-ಬಾಜಿಯಲ್ಲಿ ಬೆಂದ ಹಲ್ಲಿ! ಗ್ರಾಹಕರಿಗೆ 90 ಸಾವಿರ ಪರಿಹಾರ ನೀಡುವಂತೆ ಆದೇಶ
ಬೆಳಗಾವಿ ತಾಲೂಕಿನ ಬಡಸ್ ಗ್ರಾಮದ ಸಂತೋಷ ಪಾಟೀಲ ಪ್ರಸ್ತುತ ವಿಜಯನಗರದಲ್ಲಿ ವಾಸವಾಗಿದ್ದರು. ಬಿಜೆಪಿ ಸದಸ್ಯರೂ ಆಗಿರುವ ಇವರು ಸಚಿವ ಕೆ.ಎಸ್.ಈಶ್ವರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಈಶ್ವರಪ್ಪನವರ ಮೌಖಿಕ ಆದೇಶದ ಮೇರಗೆ ಸಂತೋಷ ಹಿಂಡಲಗಾ ಗ್ರಾಮದಲ್ಲಿ 4 ಕೋಟಿ ವೆಚ್ಚದಲ್ಲಿ 108 ಕಾಮಗಾರಿ ನೆರವೇರಿಸಿದ್ದರು. ಇದರ ಬಿಲ್ ಪಡೆಯಲು ಈಶ್ವರಪ್ಪ ಶೇ. 40 ಕಮೀಷನ್ ಕೇಳುತ್ತಿರುವ ಬಗ್ಗೆ ಸಂತೋಷ ಆರೋಪ ಮಾಡಿದ್ದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿಗೂ ದೂರು ಸಲ್ಲಿಸಿದ್ದರು. ಬಳಿಕ ಈಶ್ವರಪ್ಪನವರು ಸಂತೋಷ ವಿರುದ್ಧವೇ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಡೆತ್‌ನೋಟ್‌ನಲ್ಲಿ ಏನಿದೆ?
"ನನ್ನ ಸಾವಿಗೆ ನೇರ ಕಾರಣ ಕೆ.ಎಸ್.ಈಶ್ವರಪ್ಪ, ಸಚಿವರು ಗ್ರಾಮೀಣಾಭಿವೃದ್ಧಿ ಇಲಾಖೆ ಕರ್ನಾಟಕ ಸರ್ಕಾರ ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ-ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನ ಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್.ಯಡಿಯೂರಪ್ಪನವರು ಸಹಾಯಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೋಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು. ನನ್ನ ಗೆಳಯರಾದ ಸಂತೋಷ ಮತ್ತು ಪ್ರಶಾಂತಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕರೆದುಕೊಂಡು ಬಂದಿರುತ್ತೇನೆ. ಅವರಿಗೂ ನನ್ನ ಸಾವಿಗೂ ಯಾವುದೇ ಸಂಬಂಧ ಇರುವುದಿಲ್ಲ." ಹೀಗೆ ಡೆತ್‌ನೋಟ್ ಬರೆದು ಸಂತೋಷ ಕೆಲ ಮಾಧ್ಯಮ ಮಿತ್ರರಿಗೆ ವಾಟ್ಸಪ್ ನಲ್ಲಿ ಸಂದೇಶ ಕಳುಹಿಸಿದ್ದರು. ಬಳಿಕ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಆಸ್ಟ್ರೇಲಿಯಾ-ದಕ್ಷಿಣ ಭಾರತ ನಡುವೆ ಮೊದಲ ನೇರ ಮಾರ್ಗಗಳಿಗೆ ಚಾಲನೆ: ಇಂಡಿಗೊ ಜೊತೆ ಸಹಯೋಗ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.