ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೂತನ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದು, ಆರ್ಥಿಕ ವರ್ಷ 2023-24 ರ ಬಜೆಟ್ ನಲ್ಲಿ ಪಂಚ ಗ್ಯಾರೆಂಟಿ ಯೋಜನೆ ಅನುಷ್ಠಾನಕ್ಕೆ ಬೇಕಾದ ಹಣಕಾಸಿನ ಕ್ರೂಡೀಕರಣಕ್ಕೆ ವಿವಿಧ ಇಲಾಖೆಗಳ ತೆರಿಗೆ ಸಂಗ್ರಹ ಬಗ್ಗೆ ಮಾಹಿತಿ ಪಡೆದಿದ್ದಾರೆ.
ನಿರ್ಗಮಿತ ಬಿಜೆಪಿ ಸರ್ಕಾರ ಎರಡು ತಿಂಗಳ ಹಿಂದೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಯವ್ಯಾಯ ಮಂಡಿಸಿದ್ದರು. ಎರಡು ತಿಂಗಳಲ್ಲಿ ರಾಜ್ಯ ಬೊಕ್ಕಸ ಸೇರಿರುವ ಸ್ವಂತ ತೆರಿಗೆ ಏನಿದೆ ಎಂಬ ವರದಿ ಇಲ್ಲಿದೆ.
ಜುಲೈ 7ರಂದು ಸಿಎಂ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ಮಂಡಿಸಲಿದ್ದಾರೆ. ನಿರ್ಗಮಿತ ಬಿಜೆಪಿ ಸರ್ಕಾರ 2023-24 ಸಾಲಿನ ಬಜೆಟ್ ಮಂಡನೆ ಮಾಡಿತ್ತು. ಆದರೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಹಿನ್ನಲೆ ಸರ್ಕಾರ ರಚನೆ ಮಾಡಿ, ಕಾಂಗ್ರೆಸ್ ಸರ್ಕಾರ ಪೂರ್ಣ ಪ್ರಮಾಣದ ಹೊಸ ಬಜೆಟ್ ಮಂಡಿಸಲಿದೆ.
ಪಂಚ ಗ್ಯಾರಂಟಿಗಳಿಗೆ ಸುಮಾರು ₹ 60,000 ಕೋಟಿ. ಹಣ ಬೇಕಾಗಿದೆ. ಇದಕ್ಕೆ ಬೃಹತ್ ಪ್ರಮಾಣದಲ್ಲಿ ಹಣಕಾಸಿನ ಸಂಗ್ರಹ ತೆರಿಗೆ ರೂಪದಲ್ಲಿ ಆಗಬೇಕಿದೆ. ಹೀಗಾಗಿ ತೆರಿಗೆ ಸಂಗ್ರಹವನ್ನು ಹೆಚ್ಚಿಳ ಮಾಡುವ ಗುರಿಯನ್ನ ಅಧಿಕಾರಿಗಳಿಗೆ ಸರ್ಕಾರ ನೀಡಿದೆ.ಸುಮಾರು 50,000 ಕೋಟಿ ರೂ. ಹೆಚ್ಚುವರಿ ಆದಾಯ ಸಂಗ್ರಹದ ಗುರಿಯನ್ನು ಅಧಿಕಾರಿಗಳಿಗೆ ನೀಡಿದ್ದಾರೆ.
ಇದನ್ನೂ ಓದಿ: Karnataka Government Jobs: ರಾಜ್ಯದಲ್ಲಿ 2.60 ಲಕ್ಷ ಸರಕಾರಿ ಹುದ್ದೆ ಖಾಲಿ- ನೌಕರರ ಸಂಘದ ಅಧ್ಯಕ್ಷ
ಅಬಕಾರಿ ಸಂಗ್ರಹದ ಸ್ಥಿತಿಗತಿ:
ಹಿಂದಿನ ಸರ್ಕಾರ ಬಜೆಟ್ ಮಂಡಿಸಿದ್ದ ಸಂದರ್ಭದಲ್ಲಿ ಅಬಕಾರಿ ಇಲಾಖೆಗೆ ₹ 35,000 ಕೋಟಿ ಆದಾಯ ಸಂಗ್ರಹ ಗುರಿಯನ್ನ ನೀಡಲಾಗಿತ್ತು. ಕಳೆದ ಎರಡು ತಿಂಗಳಲ್ಲಿ ಸುಮಾರು ₹ 4,760 ಕೋಟಿ ಹಣಕಾಸು ತೆರಿಗೆ ರೂಪದಲ್ಲಿ ಸಂಗ್ರಹವಾಗಿದೆ.
ಏಪ್ರಿಲ್ ತಿಂಗಳಲ್ಲಿ ₹2,308.18 ಕೋಟಿ,ಮೇ ಮಾಸದಲ್ಲಿ ₹2,450 ಕೋಟಿ ಸೇರಿ ಸುಮಾರು ₹4,745 ಕೋಟಿ ಅಬಕಾರಿ ಆದಾಯ ಸಂಗ್ರಹ ಆಗಿದೆ. ಕಳೆದ ಆರ್ಥಿಕ ವರ್ಷ ಹೋಲಿಕೆಯಲ್ಲಿ ಈ ಬಾರಿ ತೆರಿಗೆ ಸಂಗ್ರಹ ಬೃಹತ್ ಮಟ್ಟದಲ್ಲಿ ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಾಣಿಜ್ಯ ತೆರಿಗೆ ಸಂಗ್ರಹ ಕುಂಟಿತ!
ಬಿಜೆಪಿ ಸರ್ಕಾರ ಮಂಡಿಸಿದ 2023-24 ಬಜೆಟ್ ನಲ್ಲಿ ಒಟ್ಟು ₹2,26,909 ಕೋಟಿ ಆದಾಯ ಸಂಗ್ರಹದ ಗುರಿ ನಿಗದಿ ಪಡಿಸಲಾಗಿತ್ತು. ಈ ಪೈಕಿ ವಾಣಿಜ್ಯ ತೆರಿಗೆ ಸಂಗ್ರಹದ ಗುರಿಯನ್ನು ₹92,000 ಕೋಟಿ ಗುರಿ ನಿಗದಿಪಡಿಸಲಾಗಿತ್ತು.ಕಳೆದ ಎರಡು ತಿಂಗಳಲ್ಲಿ ಸುಮಾರು ₹ 16,343 ಕೋಟಿ ವಾಣಿಜ್ಯ ತೆರಿಗೆ ಸಂಗ್ರಹ ಮಾಡಲಾಗಿದೆ. ಏಪ್ರಿಲ್‌ನಲ್ಲಿ ₹9,312 ಕೋಟಿ ವಾಣಿಜ್ಯ ತೆರಿಗೆ ಸಂಗ್ರಹ, ಮೇ ತಿಂಗಳಲ್ಲಿ ₹7031 ಕೋಟಿ ವಾಣಿಜ್ಯ ತೆರಿಗೆ ಸಂಗ್ರಹವಾಗಿದೆ.
ಇದನ್ನೂ ಓದಿ: Karnataka Government Jobs: ರಾಜ್ಯದಲ್ಲಿ 2.60 ಲಕ್ಷ ಸರಕಾರಿ ಹುದ್ದೆ ಖಾಲಿ- ನೌಕರರ ಸಂಘದ ಅಧ್ಯಕ್ಷ
ಕಳೆದ ಆರ್ಥಿಕ ವರ್ಷಕ್ಕೆ ಹೋಲಿಕೆಯಲ್ಲಿ ಇದೇ ಎರಡು ತಿಂಗಳ ಅವಧಿಯಲ್ಲಿ 21,528 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹಿಸಲಾಗಿತ್ತು. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮೊದಲ ಎರಡು ತಿಂಗಳಲ್ಲಿ ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ 5,185 ಕೋಟಿ ರೂ. ನಷ್ಟು ಕುಂಠಿತವಾಗಿದೆ, ಎಂದು ಇಲಾಖೆ ಮಾಹಿತಿ ವಿವರಿಸಿದ್ದಾರೆ.
ಮೋಟಾರು ವಾಹನ ತೆರಿಗೆ ಸಂಗ್ರಹ ಏನಿದೆ?:
ನಿರ್ಗಮಿತ ಬಿಜೆಪಿ ಸರ್ಕಾರ ಮಂಡಿಸಿದ್ದ ಬಜೆಟ್ ನಲ್ಲಿ ಮೋಟಾರು ವಾಹನ ತೆರಿಗೆ ರೂಪದಲ್ಲಿ ಸುಮಾರು ₹10,500 ಕೋಟಿ ರಾಜಸ್ವ ಸಂಗ್ರಹದ ಗುರಿ ನಿಗದಿ ಪಡಿಸಲಾಗಿತ್ತು. ಏಪ್ರಿಲ್ ಹಾಗೂ ಮೇ ತಿಂಗಳು ಸೇರಿ ಮೋಟಾರು ವಾಹನ ತೆರಿಗೆಯಲ್ಲಿ ಸುಮಾರು ₹1,605 ಕೋಟಿ ಆದಾಯ ಸಂಗ್ರಹ ಆಗಿದೆ.ಏಪ್ರಿಲ್ ತಿಂಗಳಲ್ಲಿ ಮೋಟಾರು ವಾಹನ ತೆರಿಗೆ ರೂಪದಲ್ಲಿ ₹795 ಕೋಟಿ, ಮೇ ತಿಂಗಳಲ್ಲಿ ಸುಮಾರು ₹810 ಕೋಟಿ ತೆರಿಗೆ ಸಂಗ್ರಹವಾಗಿದೆ.
ಮೋಟಾರು ವಾಹನ ತೆರಿಗೆಯಲ್ಲಿ,ಕಳೆದ ವರ್ಷ ಆರ್ಥಿಕ ವರ್ಷದ ಹೋಲಿಕೆಯ ಪ್ರಕಾರ,₹1,401 ಕೋಟಿ ಸಂಗ್ರವಾಗಿತ್ತು. ಈ ಬಾರಿ ಅಲ್ಪ ಚೇತರಿಕೆ ಕಂಡಿದೆ ಎಂದ ಇಲಾಖೆ ಮಾಹಿತಿ ನೀಡಿದೆ.
ನೋಂದಣಿ ಹಾಗೂ ಮುದ್ರಾಂಕ ಶುಲ್ಕ:
ಬಿಜೆಪಿ ಸರ್ಕಾರದ ಬಜೆಟ್ ನಲ್ಲಿ ನೋಂದಣಿ ಹಾಗೂ ಮುದ್ರಾಂಕ ಶುಲ್ಕ ರೂಪದಲ್ಲಿ ಸುಮಾರು ₹19,000 ಕೋಟಿ ಆದಾಯ ಸಂಗ್ರಹದ ಗುರಿ ನಿಗದಿ ಪಡಿಸಿತ್ತು. ಕಳೆದ ಎರಡು ತಿಂಗಳಲ್ಲಿ ಸುಮಾರು ₹3,430 ಕೋಟಿ ತೆರಿಗೆ ಸಂಗ್ರಹವಾಗಿದೆ ಎಂದು ಕಂದಾಯ ಇಲಾಖೆ ಮಾಹಿತಿ ನೀಡಿದೆ.
ಏಪ್ರಿಲ್ ತಿಂಗಳಲ್ಲಿ ₹ 1,273 ಕೋಟಿ, ಮೇ ತಿಂಗಳಲ್ಲಿ ಸುಮಾರು ₹1,340 ಕೋಟಿ, ಆದಾಯ ಮುದ್ರಾಂಕ ಶುಲ್ಕ ಸಂಗ್ರಹವಾಗಿದೆ. ಕಳೆದ ಆರ್ಥಿಕ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ಸುಮಾರು ₹3,221 ಕೋಟಿ ತೆರಿಗೆ ಸಂಗ್ರಹ ಮಾಡಲಾಗಿತ್ತು. ಈ ಬಾರಿ ಸುಮಾರು ₹200 ಕೋಟಿ ಅಷ್ಟು ಹೆಚ್ಚಾಗಿ ಸಂಗ್ರಹ ಆಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಒಟ್ಟಾರೆ ಪಂಚ ಗ್ಯಾರೆಂಟಿ ಅನುಷ್ಠಾನಕ್ಕೆ ಬೇಕಾದ ಹಣಕಾಸಿನ ನೆರವನ್ನು ಸಂಗ್ರಹ ಮಾಡಲು ಸರ್ಕಾರ ಸಾಹಸ ಪಡುತ್ತಿದೆ, ಈ ಬಾರಿ ಮಳೆ, ಕೃಷಿ,ವಾಣಿಜ್ಯ ಚಟುವಟಿಕೆ ಸೇರಿದಂತೆ ಇನ್ನಿತರ ಚಟುವಟಿಗೆ ಅಭಿವೃದ್ಧಿ ಆದರೆ ಸರ್ಕಾರ ನಿಗದಿ ಪಡಿಸುವ ಗುರಿ ಮುಟ್ಟಲು ಸಾಧ್ಯ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.