ದೇಶದ ಪ್ರಪ್ರಥಮ ಎವಿಜಿಸಿ ಉತ್ಕೃಷ್ಟತಾ ಕೇಂದ್ರಕ್ಕೆ ಬೆಂಗಳೂರಿನಲ್ಲಿ ಚಾಲನೆ

ಡಿಜಿಟಲ್ ಮನೋರಂಜನಾ ಕ್ಷೇತ್ರವು ಅಗಾಧವಾಗಿ ಬೆಳೆಯುತ್ತಿದ್ದು, ಒಂದು ವರ್ಷದಲ್ಲಿ ನೂತನ `ಅನಿಮೇಷನ್, ವಿಷುಯಲ್ ಎಫೆಕ್ಟ್ಸ, ಗೇಮಿಂಗ್ ಮತ್ತು ಕಾಮಿಕ್ಸ್ ನೀತಿ’ (ಎವಿಜಿಸಿ ಪಾಲಿಸಿ) ಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. 

Written by - Zee Kannada News Desk | Last Updated : Jan 20, 2022, 06:27 PM IST
  • ಡಿಜಿಟಲ್ ಮನೋರಂಜನಾ ಕ್ಷೇತ್ರವು ಅಗಾಧವಾಗಿ ಬೆಳೆಯುತ್ತಿದ್ದು, ಒಂದು ವರ್ಷದಲ್ಲಿ ನೂತನ `ಅನಿಮೇಷನ್, ವಿಷುಯಲ್ ಎಫೆಕ್ಟ್ಸ, ಗೇಮಿಂಗ್ ಮತ್ತು ಕಾಮಿಕ್ಸ್ ನೀತಿ’ (ಎವಿಜಿಸಿ ಪಾಲಿಸಿ) ಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
 ದೇಶದ ಪ್ರಪ್ರಥಮ ಎವಿಜಿಸಿ ಉತ್ಕೃಷ್ಟತಾ ಕೇಂದ್ರಕ್ಕೆ ಬೆಂಗಳೂರಿನಲ್ಲಿ ಚಾಲನೆ  title=

ಬೆಂಗಳೂರು: ಡಿಜಿಟಲ್ ಮನೋರಂಜನಾ ಕ್ಷೇತ್ರವು ಅಗಾಧವಾಗಿ ಬೆಳೆಯುತ್ತಿದ್ದು, ಒಂದು ವರ್ಷದಲ್ಲಿ ನೂತನ `ಅನಿಮೇಷನ್, ವಿಷುಯಲ್ ಎಫೆಕ್ಟ್ಸ, ಗೇಮಿಂಗ್ ಮತ್ತು ಕಾಮಿಕ್ಸ್ ನೀತಿ’ (ಎವಿಜಿಸಿ ಪಾಲಿಸಿ) ಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. 

ಇಲ್ಲಿನ ಮಹದೇವಪುರದಲ್ಲಿ ದೇಶದ ಪ್ರಪ್ರಥಮ ಮತ್ತು ಏಷ್ಯಾದ ಅತಿದೊಡ್ಡ `ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ಉತ್ಕೃಷ್ಟತಾ ಕೇಂದ್ರ’ಕ್ಕೆ (ಎವಿಜಿಸಿ ಸೆಂಟರ್ ಆಫ್ ಎಕ್ಸಲೆನ್ಸ್) ಗುರುವಾರದಂದು ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ `ಡಿಜಿಟಲ್ ಮಾಧ್ಯಮ ಮನೋರಂಜನಾ ಪ್ರದೇಶ’ವನ್ನು ಕೂಡ ಇನ್ನು ಒಂದು ವರ್ಷದಲ್ಲಿ ಮಹದೇವಪುರದ ಸಮೀಪವೇ ಸ್ಥಾಪಿಸಲಾಗುವುದು. ಇದಕ್ಕೆ ಅಗತ್ಯ ಭೂಮಿಯನ್ನು ಗುರುತಿಸುವಂತೆ ಕೈಗಾರಿಕಾ ಇಲಾಖೆಗೆ ಹೇಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: Pradeep Raj: 'ಕಿರಾತಕ' ಸಿನಿಮಾದಿಂದ ಖ್ಯಾತಿ ಪಡೆದಿದ್ದ ನಿರ್ದೇಶಕ ಪ್ರದೀಪ್ ರಾಜ್ ಇನ್ನಿಲ್ಲ 

ಇದರೊಂದಿಗೆ, ರಾಜ್ಯವು ಎವಿಜಿಸಿ ವಲಯದಲ್ಲಿ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಿದ ಮೊಟ್ಟಮೊದಲ ರಾಜ್ಯವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ರಾಜ್ಯವು 2012ರಲ್ಲೇ ಎವಿಜಿಸಿ ನೀತಿಯನ್ನು ಜಾರಿಗೆ ತಂದ ಹಿರಿಮೆಯನ್ನು ಕೂಡ ಹೊಂದಿರುವುದನ್ನು ಇಲ್ಲಿ ನೆನೆಯಬಹುದು.ಈ ಉತ್ಕೃಷ್ಟತಾ ಕೇಂದ್ರವನ್ನು`ಅಭಯ್’ ಸಂಸ್ಥೆಯು (ಹಿಂದಿನ `ಅಸೋಸಿಯೇಶನ್ ಆಫ್ ಬೆಂಗಳೂರು ಅನಿಮೇಷನ್ ಇಂಡಸ್ಟ್ರಿ’) ನಿರ್ವಹಿಸಲಿದೆ.

ಈ ಉತ್ಕೃಷ್ಟತಾ ಕೇಂದ್ರದೊಂದಿಗೆ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳೆಲ್ಲವೂ ಒಡಂಬಡಿಕೆ ಮಾಡಿಕೊಳ್ಳುವಂತೆ ಮಾಡಲಾಗುವುದು.ಇದರ ಜೊತೆಗೆ ರಾಜ್ಯದ ವಿ.ವಿ.ಗಳಲ್ಲಿ ಸಣ್ಣ ಪ್ರಮಾಣದ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.ಇದರಿಂದ ವಿದ್ಯಾರ್ಥಿಗಳ ಕಲಿಕೆಯನ್ನು ಹೆಚ್ಚು ಆಸಕ್ತಿಕರಗೊಳಿಸಿ, ಹೆಚ್ಚುಹೆಚ್ಚು ವಿದ್ಯಾರ್ಥಿಗಳಿಗೆ ಜಾಗತಿಕ ಗುಣಮಟ್ಟದ ಶಿಕ್ಷಣ ಒದಗಿಸಬಹುದು ಎಂದು ಸಚಿವರು ನುಡಿದರು.

ದಕ್ಷಿಣ ಏಷ್ಯಾದ ಅತ್ಯಾಧುನಿಕ ಡಿಜಿಟಲ್ ಮಾಧ್ಯಮ ತಾಣವಾಗಿರುವ ಈ ಎವಿಜಿಸಿ ಉತ್ಕೃಷ್ಟತಾ ಕೇಂದ್ರಕ್ಕೆ ರಾಜ್ಯ ವಿದ್ಯುನ್ಮಾನ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯು ಇನ್ನೋವೇಟ್ ಕರ್ನಾಟಕ’ ಉಪಕ್ರಮದಡಿ ಅಗತ್ಯ ಹಣಕಾಸು ನೆರವು ನೀಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Budget 2022 : ಕೇಂದ್ರ ಬಜೆಟ್ 2022 ರಲ್ಲಿ ಸಂಬಳ ಪಡೆಯುವ ವೃತ್ತಿಪರರಿಗೆ ಭರ್ಜರಿ ಸಿಹಿ ಸುದ್ದಿ! 

ದಕ್ಷಿಣ ಕೊರಿಯಾದಂತಹ ಸಣ್ಣ ದೇಶ ಇಂದು ಟ್ರಿಲಿಯನ್ ಮೌಲ್ಯದ ಆರ್ಥಿಕ ಶಕ್ತಿಯಾಗಿ ಬೆಳೆದಿದೆ.ಮನೋರಂಜನೆ ಮತ್ತು ಅದಕ್ಕೆ ಪೂರಕವಾಗಿರುವ ಇತರ ಕ್ಷೇತ್ರಗಳನ್ನು ನಮ್ಮ ಚಿತ್ರೋದ್ಯಮ, ಫೋಟೋಗ್ರಫಿ ಜಾಹೀರಾತು, ಮಾಧ್ಯಮಲೋಕ, ಅನಿಮೇಷನ್ ಮತ್ತು ಗ್ರಾಫಿಕ್ಸ್ ವಲಯಗಳು ಸಹ ಗರಿಷ್ಠ ಮಟ್ಟದಲ್ಲಿ ಬೆಳೆಸಿಕೊಳ್ಳಬೇಕು.ಹೀಗಾದರೆ, 2030 ರ ಹೊತ್ತಿಗೆ ಕರ್ನಾಟಕ ಕೂಡ ಟ್ರಿಲಿಯನ್ ಆರ್ಥಿಕತೆಯಾಗಿ ಬೆಳೆಯಬಹುದು’ ಎಂದು ಅವರು ಸೂಚಿಸಿದರು.

ಇಲ್ಲಿರುವ`ಫಿನಿಶಿಂಗ್ ಸ್ಕೂಲ್’ನಲ್ಲಿ ಭವಿಷ್ಯದ ತಂತ್ರಜ್ಞಾನಗಳಾದ ವರ್ಚುಯಲ್ ರಿಯಾಲಿಟಿ, ಡಿಜಿಟಲ್ ಕಂಪ್ರೆಷನ್, ಫೋಟೋಗ್ರಾಮಿಟ್ರಿ, ಶೈಕ್ಷಣಿಕ ಗೇಮಿಫಿಕೇಶನ್ ಮುಂತಾದವುಗಳಲ್ಲಿ ವಿಶಿಷ್ಟ ಕೋರ್ಸುಗಳನ್ನು ಕಲಿಸಲಾಗುವುದು ಎಂದು ಸಚಿವರು ನುಡಿದರು.

ಇದನ್ನೂ ಓದಿ: ಅಪ್ಪ-ಅಮ್ಮ, ಅಪ್ಪುವನ್ನು ಕಳೆದುಕೊಂಡ ದುಃಖದಲ್ಲಿ ದುನಿಯಾ ವಿಜಯ್, ಹುಟ್ಟುಹಬ್ಬಕ್ಕೆ ಬ್ರೇಕ್!

ಎವಿಜಿಸಿ ಉತ್ಕೃಷ್ಟತಾ ಕೇಂದ್ರವು ಜಾಗತಿಕ ಮಟ್ಟದ ಅತ್ಯಾಧುನಿಕ ಮೂಲಸೌಲಭ್ಯಗಳನ್ನು ಹೊಂದಿದೆ.ವೈಯಕ್ತಿಕ ಮಟ್ಟದಲ್ಲಿ ಇದು ಸಾಧ್ಯವಿಲ್ಲ.ಆದ್ದರಿಂದ, ಎವಿಜಿಸಿ ವೃತ್ತಿಪರರಿಗೆ ಒಂದೇ ಕಡೆ ಅಗತ್ಯ ಸೌಲಭ್ಯಗಳು ಸಿಗಬೇಕೆನ್ನುವ ದೃಷ್ಟಿಯಿಂದ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಅವರು ವಿವರಿಸಿದರು.ವಿದ್ಯುನ್ಮಾನ. ಐಟಿ ಮತ್ತು ಬಿಟಿ ಇಲಾಖೆಯ ನಿರ್ದೇಶಕಿ ಸಿ.ಎನ್. ಮೀನಾ ನಾಗರಾಜ್, ಬೆಂಗಳೂರು ಅನಿಮೇಷನ್ ಉದ್ಯಮ ಒಕ್ಕೂಟದ ಅಧ್ಯಕ್ಷ ಬೀರೇನ್ ಘೋಷ್, ಕಾರ್ಯದರ್ಶಿ ಬಿ.ಎಸ್. ಶ್ರೀನಿವಾಸ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಸಿಎಂ ಯೋಗಿ ಭದ್ರಕೋಟೆ ಗೋರಖ್ ಪುರ್ ಗೆ ಲಗ್ಗೆ ಇಡಲಿರುವ ಅಭ್ಯರ್ಥಿ ಯಾರು ಗೊತ್ತೇ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News