189 ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹10 ಕೋಟಿ ಅನುದಾನ ಮಂಜೂರು ಮಾಡಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರದ ಶಾಸಕಾಂಗ ಸಭೆಯಲ್ಲಿ ಎಲ್ಲ ಪಕ್ಷಗಳ ಶಾಸಕರಿಗೆ ಸಮಾನ ಅನುದಾನ ಹಂಚಿಕೆಗೆ ಭರವಸೆ ನೀಡಲಾಗಿತ್ತು. 

Written by - Prashobh Devanahalli | Edited by - Chetana Devarmani | Last Updated : Jan 18, 2025, 08:48 AM IST
  • ರಾಜ್ಯ ಸರ್ಕಾರದ ಶಾಸಕಾಂಗ ಸಭೆ
  • ಎಲ್ಲ ಪಕ್ಷಗಳ ಶಾಸಕರಿಗೆ ಸಮಾನ ಅನುದಾನ ಹಂಚಿಕೆ
  • 189 ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಮಂಜೂರು
189 ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹10 ಕೋಟಿ  ಅನುದಾನ ಮಂಜೂರು ಮಾಡಿದ ರಾಜ್ಯ ಸರ್ಕಾರ   title=

ಬೆಂಗಳೂರು: ರಾಜ್ಯ ಸರ್ಕಾರದ ಶಾಸಕಾಂಗ ಸಭೆಯಲ್ಲಿ ಎಲ್ಲ ಪಕ್ಷಗಳ ಶಾಸಕರಿಗೆ ಸಮಾನ ಅನುದಾನ ಹಂಚಿಕೆಗೆ ಭರವಸೆ ನೀಡಲಾಗಿತ್ತು. ಈ ಭರವಸೆ ಅನುಸರಿಸಿ, 189 ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹10 ಕೋಟಿ ರೂ.ನಂತೆ ಅನುದಾನ ನೀಡಲಾಗಿದೆ. ಇದು ಎಲ್ಲ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಪೂರಕವಾಗಲಿದೆ.

ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯವನ್ನು ಸುಧಾರಿಸಲು ಕರ್ನಾಟಕ ಸರ್ಕಾರವು ಮಹತ್ವದ ತೀರ್ಮಾನ ಕೈಗೊಂಡಿದ್ದು, 2024-25ನೇ ಸಾಲಿನಲ್ಲಿ ₹1890 ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ಆದೇಶ ನೀಡಲಾಗಿದೆ. ಈ ಮೊತ್ತವನ್ನು 189 ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹10 ಕೋಟಿ ರೂ.ನಂತೆ ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಮಹಾ ಕುಂಭಮೇಳ 2025 - ಕೋಟ್ಯಂತರ ಜನರ ನಡುವೆ ಚಿತ್ರವಿಚಿತ್ರ ಸನ್ನಿವೇಶಗಳು.... !

ಅನುದಾನದ ವಿಶೇಷ ಹಂಚಿಕೆ:
ಸರ್ಕಾರದ ಆದೇಶದ ಪ್ರಕಾರ, ಈ ಅನುದಾನವನ್ನು ಗ್ರಾಮೀಣ ರಸ್ತೆ, ಚರಂಡಿ, ಹಾಗೂ ಸೇತುವೆ ನಿರ್ಮಾಣಕ್ಕಾಗಿ ವಿಶೇಷವಾಗಿ ಮೀಸಲು ಮಾಡಲಾಗಿದೆ. ಗ್ರಾಮೀಣಾಭಿವೃದ್ದಿ ಇಲಾಖೆಯಡಿ ಈ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಅನುಮೋದನೆ ನೀಡಲಾಗಿದ್ದು, ಸ್ಥಳೀಯ ಮಟ್ಟದ ಬೇಡಿಕೆಗಳ ಪ್ರಕಾರ ಯೋಜನೆಗಳನ್ನು ಕೈಗೊಳ್ಳಲಾಗುವುದು.

ಅನುದಾನದ ಪ್ರಮುಖ ಉಪಯೋಗಗಳು:

1. ಗ್ರಾಮೀಣ ರಸ್ತೆ ಅಭಿವೃದ್ಧಿ: ದೀರ್ಘಕಾಲಿಕ ಪರಿಸರಕ್ಕಾಗಿ ಹೊಸ ತಂತ್ರಜ್ಞಾನಗಳ ಬಳಕೆಯೊಂದಿಗೆ ಸಮರ್ಥ ರಸ್ತೆಗಳ ನಿರ್ಮಾಣ.

2. ಚರಂಡಿ ವ್ಯವಸ್ಥೆ: ಮಳೆಗಾಲದಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಗದಂತೆ ಚರಂಡಿ ವ್ಯವಸ್ಥೆ ಬಲಪಡಿಸಲು ಪ್ರತ್ಯೇಕ ಯೋಜನೆಗಳು.

3. ಸೇತುವೆ ನಿರ್ಮಾಣ: ನದೀ ಪ್ರದೇಶಗಳಲ್ಲಿ ನೂತನ ಸೇತುವೆಗಳ ನಿರ್ಮಾಣದಿಂದ ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ.

4. ಪರಿಸರ ಕಾಳಜಿ: ರಸ್ತೆ ಬದಿಯಲ್ಲಿ ಹಸಿರು ವಲಯದ ರಚನೆ ಹಾಗೂ ಪರಿಸರ ಸ್ನೇಹಿ ಕ್ರಮಗಳು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಅತೀ ಶೀಘ್ರದಲ್ಲಿ ಅಮೆರಿಕ ರಾಯಭಾರಿ ಕಚೇರಿ; ಇದು ಜನರಿಗೆ ಹೇಗೆ ಸಹಕಾರಿ ಆಗಲಿದೆ ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News