ಬೆಂಗಳೂರು: ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಮಗು ಮೃತಪಟ್ಟಂತಹ ಪ್ರಕರಣ ಇದೀಗ ಕೊನೆಗು ಅಂತ್ಯಕ್ಕೆ ಬಂದು ನಿಂತಿದೆ.. ಸಾಕಷ್ಟು ವಿವಾಧಕ್ಕೆ ಎಡೆ ಮಾಡಿಕೊಟ್ಟಿದ್ದ ಈ ಒಂದು ಪ್ರಕರಣಕ್ಕೆ ಇದೀಗ ಪೊಲೀಸರು ಚಾರ್ಚ್ ಶೀಟ್ ನನ್ನು ಕೋರ್ಟ್ ಗೆ ಸಲ್ಲಿಸಿದ್ದಾರೆ.
ಹಾಗಾದ್ರೆ ಚಾರ್ಟ್ ಶೀಟ್ ನಲ್ಲಿ ಏನೆಲ್ಲಾ ಉಲ್ಲೇಖ ಮಾಡಲಾಗಿದೆ.. ಯಾರನ್ನೆಲ್ಲಾ ಆರೋಪಿಗಳನ್ನಾಗಿ ಮಾಡಲಾಗಿದೆ ಅನ್ನುವುದಕ್ಕೆ ಉತ್ತರ ಸಿಕ್ಕಿದೆ.. ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವನ್ನಪ್ಪಿದ್ದ ಪ್ರಕರಣದ ತನಿಖೆ ಪೂರ್ಣಗೊಳಿಸಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪ್ರಕರಣದ ತನಿಖೆ ಕೈಗೊಂಡಿದ್ದ ಗೋವಿಂದಪುರ ಠಾಣಾ ಪೊಲೀಸರು ಘಟನೆ ನಡೆದು ಐದು ತಿಂಗಳುಗಳ ಬಳಿಕ ಕನ್ಸ್ಟ್ರಕ್ಷನ್ ಕಂಪನಿ ಇಂಜಿನಿಯರ್ಸ್ ಹಾಗೂ ಬಿಎಂಆರ್ಸಿಎಲ್ ಇಂಜಿನಿಯರ್ಸ್ ಸೇರಿದಂತೆ ಹನ್ನೊಂದು ಜನರ ವಿರುದ್ಧ ನ್ಯಾಯಾಲಯಕ್ಕೆ ಬರೋಬ್ಬರಿ 1100 ಪುಟಗಳ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ..
ಇದನ್ನೂ ಓದಿ: ಸಾವಿಗೆ ನ್ಯಾಯ ಸಿಗದ ಹಿನ್ನಲೆ ದಯಾಮರಣಕ್ಕೆ ಅನುಮತಿ ನೀಡಿ ಎಂದು ರಾಷ್ಟ್ರಪತಿಗೆ ಪತ್ರ
ಘಟನಾ ಸ್ಥಳ ಪರಿಶೀಲಿಸಿದ ಐಐಟಿ ತಜ್ಞರ ವರದಿಗಳು, ಎಫ್ಎಸ್ಎಲ್ ವರದಿಯ ಆಧಾರದ ಮೇಲೆ ತನಿಖೆ ನಡೆಸಿದ್ದ ಪೊಲೀಸರು, ಆಯಾ ವರದಿಗಳ ಸಮೇತ ಚಾರ್ಜ್ಶೀಟ್ ನಲ್ಲಿ ಉಲ್ಲೇಖಿಸಿ ಕೋರ್ಟ್ ಗೆ ಸಲ್ಲಿಸಿದ್ದಾರೆ. ಅವಘಡಕ್ಕೆ ಅಧಿಕಾರಿಗಳ ಲೋಪ, ಹಾಗೂ ಪಿಲ್ಲರ್ ನಿರ್ಮಾಣ ವೇಳೆ ಕೈಗೊಂಡ ಸುರಕ್ಷತಾ ಕ್ರಮಗಳ ವೈಫಲ್ಯ ಕಾರಣವಾಗಿರುವ ಬಗ್ಗೆಯೂ ಚಾರ್ಜ್ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಅಲ್ಲದೇ ಪ್ರಾಜೆಕ್ಟ್ ಡಾಕ್ಯುಮೆಂಟ್ ಗಳನ್ನ ಪರಿಶೀಲನೆ ನಡೆಸಿರುವ ಪೊಲೀಸರು, ಪಿಲ್ಲರ್ ಡಿಸೈನ್ ಹೇಗೆ ಮಾಡಲಾಗಿತ್ತು, ಪರ್ಯಾಯವಾಗಿ ಯಾವ ಸುರಕ್ಷತಾ ಕ್ರಮಗಳನ್ನ ಕೈಗೊಳ್ಳಬೇಕಿತ್ತು, ಘಟನೆ ಬಗ್ಗೆ ಐಐಟಿ ರಿಪೋರ್ಟ್ ಮತ್ತು ಬಳಕೆಯಾದ ಮೆಟಿರಿಯಲ್ಸ್ ಬಗ್ಗೆ ಎಫ್ಎಸ್ಎಲ್ ರಿಪೋರ್ಟ್ ನಲ್ಲಿ ಏನಿದೆ ಎಂಬುದನ್ನ ಪಡೆದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.. ಜನವರಿ 10ರಂದು ಬೆಳಿಗ್ಗೆ ಎಚ್.ಆರ್.ಬಿ.ಆರ್. ಲೇಔಟಿನ ರಿಂಗ್ ರಸ್ತೆಯಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ತೇಜಸ್ವಿನಿ ಹಾಗೂ ಆಕೆಯ ಮೂರು ವರ್ಷದ ಗಂಡು ಮಗು ವಿಹಾನ್ ಸಾವನ್ನಪ್ಪಿದ್ದರು. ಬೈಕಿನಲ್ಲಿದ್ದ ತೇಜಸ್ವಿನಿ ಪತಿ ಲೋಹಿತ್ ಕುಮಾರ್ ಹಾಗೂ ಮತ್ತೊಂದು ಹೆಣ್ಣು ಮಗು ಗಂಭೀರ ಗಾಯಗಳೊಂದಿಗೆ ಪಾರಾಗಿದ್ದರು..
ಇದನ್ನೂ ಓದಿ: ಡಾ.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಡಾ. ಎಂ.ಸಿ ಸುಧಾಕರ್
ಬಳಿಕ ಮೃತಳ ಪತಿ ಲೋಹಿತ್ ಕುಮಾರ್ ನೀಡಿದ ದೂರಿನನ್ವಯ ಬಿಎಂಆರ್ಸಿಎಲ್ ಹಾಗೂ ಪಿಲ್ಲರ್ ನಿರ್ಮಾಣದ ಹೊಣೆಗಾರಿಕೆ ಹೊತ್ತಿದ್ದ ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪನಿಯ ಎಂಟು ಜನ ಅಧಿಕಾರಿಗಳ ವಿರುದ್ಧ ಗೋವಿಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ಕೈಗೊಂಡ ಪೊಲೀಸರು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ಸೇರಿದಂತೆ ಹದಿನೈದು ಅಧಿಕಾರಿಗಳನ್ನ ವಿಚಾರಣೆ ನಡೆಸಿದ್ದರು.. ನಂತರ ಐಐಟಿ ತಂಡವು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.. ಒಟ್ಟಿನಲ್ಲಿ ಯಾರೊ ಮಾಡಿದ ತಪ್ಪಿಗೆ ಯಾರೋ ಬಲಿಯಾದರು ಅನ್ನುವ ರೀತಿಯಲ್ಲಿ ಇದೀಗ ಈ ಒಂದು ಪ್ರಕರಣ ಮುಕ್ತಾಯ ಹಂತಕ್ಕೆ ಬಂದಿದೆ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.