"ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಂತಹವರಿಂದ ಪ್ರಧಾನಿ ಹುದ್ದೆಗೆ ಗೌರವ ಬರುವುದಿಲ್ಲ"

ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಪ್ರಧಾನಿ ನರೇಂದ್ರ ಮೋದಿ ಅವರು ಒಂದಷ್ಟು ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಂತಹವರಿಂದ ಪ್ರಧಾನಿ ಹುದ್ದೆಗೆ ಗೌರವ ಬರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

Written by - Manjunath N | Last Updated : Apr 28, 2024, 06:16 PM IST
  • ಕಿತ್ತೂರು ರಾಣಿ ಜಯಂತಿ ಆಚರಣೆಗೆ ಆದೇಶಿಸಿದ್ದು ನಾವು
  • ಇದನ್ನು ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಮಾಡಲಿಲ್ಲ
  • ನಾವು ಯಾವತ್ತೂ ಶಿವಾಜಿ ಮಹಾರಾಜರನ್ನು ಅವಮಾನಿಸಿಲ್ಲ
"ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಂತಹವರಿಂದ ಪ್ರಧಾನಿ ಹುದ್ದೆಗೆ ಗೌರವ ಬರುವುದಿಲ್ಲ" title=
file photo

ಬೆಳಗಾವಿ: ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಪ್ರಧಾನಿ ನರೇಂದ್ರ ಮೋದಿ ಅವರು ಒಂದಷ್ಟು ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಂತಹವರಿಂದ ಪ್ರಧಾನಿ ಹುದ್ದೆಗೆ ಗೌರವ ಬರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಅವರ ಪರ ಪ್ರಚಾರದ ನಿಮಿತ್ತ ಆಯೋಜಿಸಿದ್ದ "ಪ್ರಜಾಧ್ವನಿ- ಜನ ಸಮಾವೇಶ"ವನ್ನು ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ: ಉಪ್ಪಿಗೆ ಈ ಎಲೆಯ ರಸ ಮಿಕ್ಸ್ ಮಾಡಿ ಹಚ್ಚಿ: ಕ್ಷಣಾರ್ಧದಲ್ಲಿ ಕಡುಕಪ್ಪು ಬಣ್ಣಕ್ಕೆ ತಿರುಗುತ್ತೆ ಬಿಳಿಕೂದಲು! ಸೊಂಪಾಗಿ ಉದ್ದವಾಗಿ ಬೆಳೆಯುತ್ತೆ ಸಹ

ಕಿತ್ತೂರು ರಾಣಿ ಜಯಂತಿ ಆಚರಣೆಗೆ ಆದೇಶಿಸಿದ್ದು ನಾವು. ಇದನ್ನು ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಮಾಡಲಿಲ್ಲ. ನಾವು ಯಾವತ್ತೂ ಶಿವಾಜಿ ಮಹಾರಾಜರನ್ನು ಅವಮಾನಿಸಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದವರು ರಾಣಿ ಚನ್ನಮ್ಮರಿಗೆ ಮತ್ತು ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದೆ ಎಂದು ಹಸಿ ಹಸಿ ಸುಳ್ಳು ಹೇಳುತ್ತಾರೆ. ಸುಳ್ಳಿಗೆ ಒಂದು ಮಿತಿಯಾದರೂ ಬೇಡ್ವಾ? ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ:  ವೀರೆಂದ್ರ ಸೆಹ್ವಾಗ್ ಸೋದರಳಿಯ RCBಯ ಸ್ಟಾರ್ ಕ್ರಿಕೆಟಿಗ! ಫಿಟ್ನೆಸ್’ನಲ್ಲಿ ಕೊಹ್ಲಿಯನ್ನೇ ಮೀರಿಸಿರುವ ಆತ ಯಾರು ಗೊತ್ತಾ?

ಹತ್ತು ವರ್ಷ ಆಳಿದ ಪ್ರಧಾನಿಯೊಬ್ಬರು ಚುನಾವಣೆ ಗೆಲ್ಲಲು ಈ ರೀತಿ ಸುಳ್ಳಿನ ಮೊರೆ ಹೋಗಿರುವುದು ನಾಚಿಕೆಗೇಡು ಎಂದು ಅವರು ಕಿಡಿ ಕಾರಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News