ಧಾರವಾಡ: ನಾಡಿನ ಹೆಸರಾಂತ ಹಿರಿಯ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಜ.14 ರಂದು ಎಸ್.ಡಿ.ಎಮ್.ಆಸ್ಪತ್ರೆಗೆ ದಾಖಲಾದ ಮಾಹಿತಿ ಬಂದ ಕೂಡಲೇ ಜಿಲ್ಲಾಡಳಿತ ಅವರ ಚಿಕಿತ್ಸೆಗೆ ಐಸಿಯು ಬೆಡ್ ಮೀಸಲಿರಿಸಿ, ಉತ್ತಮ ಚಿಕಿತ್ಸೆಗೆ ಕ್ರಮಕೈಗೊಂಡಿದೆ.
ಇದನ್ನೂ ಓದಿ: ನಾರಾಯಣ ಗುರುಗಳಿಗೆ ಮಾಡಿರುವ ಅವಮಾನಕ್ಕಾಗಿ ಕೇಂದ್ರ ಸರ್ಕಾರ ದೇಶದ ಕ್ಷಮೆ ಕೇಳಬೇಕು-ಸಿದ್ಧರಾಮಯ್ಯ
ಡಾ.ಕಣವಿ ಅವರು ಗುಣಮುಖರಾಗಿ ಮನೆಗೆ ಬರುವವರೆಗೆ ಅವರ ಎಲ್ಲ ವೈದ್ಯಕೀಯ ಚಿಕಿತ್ಸೆ ವೆಚ್ಚವನ್ನು ಸರಕಾರದಿಂದ ಭರಿಸಲು ಕ್ರಮವಹಿಸಲಾಗಿದೆ.ಈ ಕುರಿತು ಜ.15 ರಂದೆ ಎಸ್.ಡಿ.ಎಮ್. ಆಸ್ಪತ್ರೆಯ ಆಡಳಿತ ಮಂಡಳಿಗೆ ಹಾಗೂ ಡಾ.ಕಣವಿ ಅವರ ಕುಟುಂಬ ಸದಸ್ಯರಿಗೆ ತಿಳಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಈ ರೀತಿ ಬೇಜವಾಬ್ದಾರಿಯ ಹೇಳಿಕೆ ಕೊಡುವುದು ಸರಿಯಲ್ಲ: ಸಚಿವ ಅಶ್ವತ್ಥ ನಾರಾಯಣ
ಡಾ.ಚೆನ್ನವೀರ ಕಣವಿ ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಸರಕಾರದಿಂದ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಅವರ ಆರೋಗ್ಯದ ಕುರಿತು ಕಾಳಜಿ ವಹಿಸಿದ್ದು, ದಿನನಿತ್ಯ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ಅಧೀಕ್ಷಕರೊಂದಿಗೆ, ಡಾ.ಕಣವಿ ಅವರ ಕುಟುಂಬದವರೊಂದಿಗೆ ಸಂಪರ್ಕದಲ್ಲಿದ್ದು ಜಾಗೃತಿ ವಹಿಸಲಾಗಿದೆ.
ರಾಜ್ಯ ಕಸಾಪ ಅಧ್ಯಕ್ಷರು ಡಾ.ಕಣವಿ ಅವರ ವೈದ್ಯಕೀಯ ವೆಚ್ಚ ಭರಿಸುವ ಕುರಿತು ಹೇಳಿಕೆ ನೀಡಿದ್ದು, ಸರಕಾರದಿಂದಲೇ ಡಾ.ಕಣವಿ ಅವರ ಎಲ್ಲ ಚಿಕಿತ್ಸಾ ವೆಚ್ಚ ಭರಿಸಲು ಅವರು ಆಸ್ಪತ್ರೆಗೆ ದಾಖಲಾದ ದಿನದಿಂದಲೇ ಕ್ರಮವಹಿಸಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.