ಸರ್ವೋಚ್ಛ ನ್ಯಾಯಾಲಯದಿಂದ ಡಾ. ಶಿವರಾಮ ಕಾರಂತ ಬಡಾವಣೆಯ 299 ಕಟ್ಟಡಗಳು ಸಕ್ರಮ

ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ಸಲ್ಲಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಉದ್ದೇಶಿತ ಡಾ. ಶಿವರಾಮ ಕಾರಂತ ಬಡಾವಣೆಯ 15ನೆಯ ವರದಿಯನ್ನು ಅಂಗೀಕರಿಸಿ 299 ಕಟ್ಟಡಗಳನ್ನು ಸಕ್ರಮಗೊಳಿಸಿ ಸರ್ವೋಚ್ಛ ನ್ಯಾಯಾಲಯವು ಆದೇಶ ಹೊರಡಿಸಿದೆ. ಇಲ್ಲಿಯವರೆಗೆ ಒಟ್ಟು 3124 ಕಟ್ಟಡಗಳು ಸಕ್ರಮಗೊಂಡಿವೆ.

Written by - Sowmyashree Marnad | Edited by - Manjunath N | Last Updated : May 20, 2022, 05:12 PM IST
  • ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಕ್ರಮಗೊಂಡ ಕಟ್ಟಡಗಳ ಮಾಲೀಕರಿಗೆ ಸಕ್ರಮ ಪ್ರಮಾಣ ಪತ್ರವನ್ನು ಡಾ. ಶಿವರಾಮ ಕಾರಂತ ಬಡಾವಣೆ ವ್ಯಾಪ್ತಿಯ ಮೇಡಿ ಅಗ್ರಹಾರದ ಉರ್ದು ಪ್ರಾಥಮಿಕ ಶಾಲೆಯಲ್ಲಿ ಮೇ 13 ರಿಂದ ವಿತರಿಸಲು ಆರಂಭಿಸಿದೆ.
ಸರ್ವೋಚ್ಛ ನ್ಯಾಯಾಲಯದಿಂದ ಡಾ. ಶಿವರಾಮ ಕಾರಂತ ಬಡಾವಣೆಯ 299 ಕಟ್ಟಡಗಳು ಸಕ್ರಮ title=

ಬೆಂಗಳೂರು: ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ಸಲ್ಲಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಉದ್ದೇಶಿತ ಡಾ. ಶಿವರಾಮ ಕಾರಂತ ಬಡಾವಣೆಯ 15ನೆಯ ವರದಿಯನ್ನು ಅಂಗೀಕರಿಸಿ 299 ಕಟ್ಟಡಗಳನ್ನು ಸಕ್ರಮಗೊಳಿಸಿ ಸರ್ವೋಚ್ಛ ನ್ಯಾಯಾಲಯವು ಆದೇಶ ಹೊರಡಿಸಿದೆ. ಇಲ್ಲಿಯವರೆಗೆ ಒಟ್ಟು 3124 ಕಟ್ಟಡಗಳು ಸಕ್ರಮಗೊಂಡಿವೆ.

ನ್ಯಾಯಾಲಯದ ಆದೇಶದಂತೆ  ಡಾ. ಶಿವರಾಮ ಕಾರಂತ ಬಡಾವಣೆ ವ್ಯಾಪ್ತಿಯ ಕಟ್ಟಡಗಳ ಮಾಲೀಕರಿಗೆ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ನೇತೃತ್ವದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಕ್ರಮ ಪ್ರಮಾಣ ಪತ್ರವನ್ನು  ವಿತರಿಸುವಂತೆಯೂ ಹಾಗೂ ಕಾನೂನು ರೀತ್ಯ ಬೆಟರ್ ಮೆಂಟ್ ಶುಲ್ಕ ವಿಧಿಸುವಂತೆಯೂ ನ್ಯಾಯಾಲಯ ಸೂಚಿಸಿದೆ. 

ಇದನ್ನೂ ಓದಿ : IPL 2022: ಅಮೋಘ ಪ್ರದರ್ಶನ ನೀಡುತ್ತಿರುವ ಫಾಸ್ಟ್ ಬೌಲರ್ .! ಜಹೀರ್ ಖಾನ್ ಗೆ ಹೋಲಿಸುತ್ತಿರುವ ಫ್ಯಾನ್ಸ್

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಕ್ರಮಗೊಂಡ ಕಟ್ಟಡಗಳ ಮಾಲೀಕರಿಗೆ ಸಕ್ರಮ ಪ್ರಮಾಣ ಪತ್ರವನ್ನು ಡಾ. ಶಿವರಾಮ ಕಾರಂತ ಬಡಾವಣೆ ವ್ಯಾಪ್ತಿಯ ಮೇಡಿ ಅಗ್ರಹಾರದ ಉರ್ದು ಪ್ರಾಥಮಿಕ ಶಾಲೆಯಲ್ಲಿ ಮೇ 13 ರಿಂದ ವಿತರಿಸಲು ಆರಂಭಿಸಿದೆ. ಸೋಮವಾರ ದಿಂದ ಶುಕ್ರವಾರದ ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 3;00 ಗಂಟೆಯವರೆಗೆ ಸಕ್ರಮ ಪ್ರಮಾಣ ಪತ್ರ ವಿತರಣೆ ಕಾರ್ಯ ನಡೆಯುತ್ತಿದ್ದು, ಆಯಾ ದಿನಕ್ಕೆ ಹಾಗೂ ಸಮಯಕ್ಕೆ ಸಾರ್ವಜನಿಕರು ಹಾಜರಾಗುವ ಕುರಿತು ಎಸ್.ಎಮ್.ಎಸ್ ಮೂಲಕ ಮಾಹಿತಿ ನೀಡುವ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: Pension Scheme : ಸರ್ಕಾರದ ಈ ಯೋಜನೆಯಲ್ಲಿ ಪಡೆಯಿರಿ ₹60,000 ಪಿಂಚಣಿ!

ಫಲಾನುಭವಿಗಳು ಸಕ್ರಮ ಪ್ರಮಾಣ ಪತ್ರವನ್ನು ಪಡೆಯಲು ತಮ್ಮೊಂದಿಗೆ ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ  ಭಾವಚಿತ್ರ, ಆಧಾರ್‌ಕಾರ್ಡ್, ಸಮಿತಿಯಿಂದ ಸ್ವೀಕರಿಸಿರುವ ಎಸ್.ಎಂ.ಎಸ್. ಸಾಫ್ಟ್ ಕಾಪಿ ಹಾಗೂ ಸಮಿತಿಯು ನೀಡಿರುವ ರಸೀದಿಯನ್ನು ಸಲ್ಲಿಸಬೇಕು ಎಂದು ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News