ಪಾಟ್ನಾ : ಬಿಹಾರದ ಭಾಗಲ್ಪುರದಲ್ಲಿ ನಿರ್ಮಾಣ ಹಂತದಲ್ಲಿರುವ ಆಗುವನಿ-ಸುಲ್ತಂಗಂಜ್ ಸೇತುವೆ ಇಂದು ಗಂಗಾ ನದಿಗೆ ಕುಸಿದಿದೆ. ವರದಿಗಳ ಪ್ರಕಾರ, ಖಗಾರಿಯಾ ಮತ್ತು ಭಾಗಲ್ಪುರ ಜಿಲ್ಲೆಗಳನ್ನು ಸಂಪರ್ಕಿಸಲು ನಿರ್ಮಿಸಲಾಗಿದ್ದ ಸೇತುವೆಯ ಸುಮಾರು 100 ಅಡಿಗಳು ಎರಡನೇ ಬಾರಿಗೆ ನದಿಗೆ ಕುಸಿದಿದೆ.
ಇದನ್ನೂ ಓದಿ: Odisha Train Tragedy: ಎರಡು ವಿಮಾನಗಳಲ್ಲಿ 80 ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮನ
#Bihar a portion of under construction bridge over Ganga river collapsed today. The Aguanhighat Sultanganj bridge will connect Khagaria and Bhagalpur districts. pic.twitter.com/7DLTQszso7
— All India Radio News (@airnewsalerts) June 4, 2023
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಕನಸಿನ ಯೋಜನೆಯಾಗಿದ್ದು, 1750 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಈ ಸೇತುವೆಯ ಒಂದು ಭಾಗವು ಕಳೆದ ವರ್ಷ ಏಪ್ರಿಲ್‌ನಲ್ಲಿ ಕುಸಿದಿದೆ. ಗಂಗಾ ನದಿಯಲ್ಲಿ ಸೇತುವೆ ಕುಸಿದು ಬಿಳುತ್ತಿರುವುದನ್ನು ಜನರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಈಗ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
ಲೈವ್ ಹಿಂದೂಸ್ತಾನ್ ವರದಿಯ ಪ್ರಕಾರ, ಸೇತುವೆಗೆ ಉಂಟಾದ ಹಾನಿಯ ಪ್ರಮಾಣವನ್ನು ಅಧಿಕಾರಿಗಳು ವಿಶ್ಲೇಷಿಸುತ್ತಿದ್ದಾರೆ. " ಸೇತುವೆ ಭಾಗದ ಕುಸಿತದ ಬಗ್ಗೆ ನಮಗೆ ಮಾಹಿತಿ ಬಂದಿದೆ.ನಾವು ಸೇತುವೆಯ ನಿರ್ಮಾಣದಲ್ಲಿ ತೊಡಗಿರುವ ಎಂಜಿನಿಯರ್‌ಗಳೊಂದಿಗೆ ಮಾತನಾಡಿದ್ದೇವೆ. ಸದ್ಯಕ್ಕೆ ಯಾವುದೇ ಜೀವ ಮತ್ತು ಆಸ್ತಿ ನಷ್ಟದ ವರದಿಯಾಗಿಲ್ಲ," ಎಂದು ಭಾಗಲ್ಪುರ ಎಸ್ ಡಿಒ ಧನಂಜಯ್ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: ಬಜರಂಗ ದಳ ಬ್ಯಾನ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆಗೆ ಟಾಂಗ್ ನೀಡಿದ ಕೋಟಾ ಶ್ರೀನಿವಾಸ್ ಪೂಜಾರಿ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ