ಸಚಿವ ಈಶ್ವರಪ್ಪ ಸಭೆಯಲ್ಲಿ ಬಾಷಣ ಮಾಡುವಾಗ ಆಜಾನ್ ಕುರಿತು ವ್ಯಂಗ್ಯವಾಗಿ ಮಾತನಾಡಿದ್ದು ಟೀಕೆಗೆ ಗುರಿಯಾಗಿತ್ತು. ಇದೇ ವಿಚಾರವಾಗಿ ಇದೀಗ ಒಬ್ಬ ಯುವಕ ಜಿಲ್ಲಾಧಿಕಾರಿ ಕಚೇರಿ ಮೇಲೆ ಹತ್ತಿ ಆಜಾನ್ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದು, ಆಜಾನ್ ಹಾಗು ಅಲ್ಲಾಹು ಬಗ್ಗೆ ಮಾಜಿ ಸಚಿವ ಈಶ್ವರಪ್ಪ ಅವಹೇಳನವಾಗಿ ಮಾತನಾಡಿದ್ದರ ಕುರಿತಾಗಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ್ದರು.
ಇದನ್ನೂ ಓದಿ-ಸಿದ್ದರಾಮಯ್ಯನವರು ಒಳ್ಳೆಯ ಕೆಲಸ ಮಾಡಿದಿದ್ರೆ ಕ್ಷೇತ್ರಕ್ಕಾಗಿ ಅಲೆದಾಡುತ್ತಿರಲಿಲ್ಲ-ಮುರುಗೇಶ್ ನಿರಾಣಿ ಟೀಕೆ
ಈಶ್ವರಪ್ಪ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹಾಕಿದ್ದರು, ಆಜಾನ್ ಬಗ್ಗೆ ಮಾತನಾಡುವುದಕ್ಕೆ ಈಶ್ವರಪ್ಪ ಯಾರು, ಇವತ್ತು ಇಲ್ಲಿ ಕೂಗಿದ್ದೇವೆ ನಾಳೆ ವಿಧಾನಸೌಧ ಕೂಗುತ್ತೇವೆ, ಇದು ತಾಯಿ ಬಗ್ಗೆ ಮಾತನಾಡಿದ್ದಲ್ಲ ಅಲ್ಲ ಬಗ್ಗೆ ಮಾತನಾಡಿದ್ದು ಎಂದು ಆಕ್ರೋಶ ವ್ಯಕ್ತ ಪಡಿಸಿದ್ದರು. ಇದಲ್ಲದೇ ಪ್ರತಿಭಟನೆ ವೇಳೆ ಯುವಕ ಉದ್ದಡ್ಡತನದಿಂದ ವರ್ತಿಸಿ ಜಿಲ್ಲಾಧಿಕಾರಿ ಕಛೇರಿಯ ಮೇಲೆ ನಿಂತೂ ಆಜಾನ್ ಕೂಗಿದ್ದಾನೆ.
ಅಲ್ಲದೇ ಈ ವೇಳೆ ಪೊಲೀಸರು ಹಾಗು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಖಿ ನಡೆದಿದ್ದು, ಈ ಸಮಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಮೇಲೆ ಆಜಾನ್ ಕೂಗದಂತೆ ಪೊಲೀಸರು ತಾಕೀತು ಮಾಡಿ, ಮುಖಂಡರು ಯುವಕನಿಗೆ ಬುದ್ಧಿ ಹೇಳಿ, ನಂತರ ಪ್ರತಿಭಟನಾಕಾರರನ್ನು ಸ್ಥಳದಿಂದ ವಾಪಸ್ ಕಳುಹಿಸಿದ್ದಾರೆ.
ಇದನ್ನೂ ಓದಿ-Today Vegetable Price: ಇಂದು ತರಕಾರಿ ದರದಲ್ಲಿ ಏರಿಕೆ.. ಯಾವುದಕ್ಕೆ ಎಷ್ಟು ಬೆಲೆ ಇಲ್ಲಿ ತಿಳಿಯಿರಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.