ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ- ಬಿಜೆಪಿ ರಾಜ್ಯಾಧ್ಯಕ್ಷರ ಸ್ಪಷ್ಟನೆ

ರಾಜ್ಯಕ್ಕೆ ಬಿಜೆಪಿಯ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್‌ನ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಮಾತನಾಡಿದ ಅವರು,  ಮುಂದಿನ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ, ಹಿರಿಯರಾದ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಎದುರಿಸುತ್ತೇವೆ ಎಂದಿದ್ದಾರೆ.

Written by - Yashaswini V | Last Updated : Aug 10, 2022, 09:59 AM IST
  • ರಾಜ್ಯಕ್ಕೆ ಬಿಜೆಪಿಯ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್
  • ಟ್ವೀಟ್‌ನ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು

    ಬೊಮ್ಮಾಯಿಯವರೇ ಪೂರ್ಣವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದ ನಳೀನ್ ಕುಮಾರ್ ಕಟೀಲು
ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ-  ಬಿಜೆಪಿ ರಾಜ್ಯಾಧ್ಯಕ್ಷರ ಸ್ಪಷ್ಟನೆ  title=
Nalin Kumar Katil

ಮಂಗಳೂರು:  ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಬಸವರಾಜ ಬೊಮ್ಮಾಯಿಯವರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯಕ್ಕೆ ಬಿಜೆಪಿಯ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್‌ನ ಹಿನ್ನೆಲೆಯಲ್ಲಿ  ಮಂಗಳೂರಲ್ಲಿ ಮಾತನಾಡಿದ ಅವರು,  ಮುಂದಿನ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ, ಹಿರಿಯರಾದ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಎದುರಿಸುತ್ತೇವೆ ಎಂದಿದ್ದಾರೆ. 

ಇದನ್ನೂ ಓದಿ- ವಿಶೇಷ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಬಿಎಂಟಿಸಿ ಸಿದ್ಧತೆ

ಸಿದ್ದರಾಮಯ್ಯ ಉತ್ಸವದ ಬಳಿಕ ಕಾಂಗ್ರೆಸ್‌ನಲ್ಲಿ ಒಳ ಜಗಳ, ಬೀದಿ ಜಗಳ ಹೆಚ್ಚಾಗಿದೆ. ಕೋಳಿವಾಡರಂತಹ ಹಿರಿಯ ನಾಯಕರು ಸಿದ್ದರಾಮಯ್ಯರನ್ನು ಬಯ್ಯುವಂತಾಗಿದೆ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹೋರಾಟ ಹೆಚ್ಚಾಗಿದೆ. ಅವರ ಒಳ ಜಗಳ, ಬೀದಿ ಜಗಳ, ಗೊಂದಲ, ಆಂತರಿಕ ಕಚ್ಛಾಟವನ್ನು ಮುಚ್ಚಿಡಲು ಕಾಂಗ್ರೆಸ್ ಈ ರೀತಿ ಟ್ವೀಟ್ ಮಾಡಿದೆ ಎಂದು ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ- ರಾಜ್ಯದಲ್ಲಿ ಮುಂದುವರೆಯಲಿದೆ ವರುಣಾರ್ಭಟ, ಕರಾವಳಿಯಲ್ಲಿ ಭಾರೀ ಬಿರುಗಾಳಿ ಸಾಧ್ಯತೆ

ಕಾಂಗ್ರೆಸ್ ಹಗರಣಗಳು ಬಯಲಿಗೆ ಬಂದಿದೆ. ಸೋನಿಯಾ, ರಾಹುಲ್ ಗಾಂಧೀಜಿ ಇಡಿ ತನಿಖೆ, ಡಿಕೆಶಿಯವರಿಗೆ ಜಾಮೀನು, ಮುಖ್ಯಮಂತ್ರಿ ಗೊಂದಲ, ದಲಿತ ಮುಖ್ಯಮಂತ್ರಿ ಚರ್ಚೆ ಇವೆಲ್ಲಾ ಗೊಂದಲಗಳನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಇಂತಹ ಟ್ವೀಟ್ ಮಾಡುತ್ತಿದೆ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯ ಇಲ್ಲ ಎಂದು  ನಳಿನ್ ಕುಮಾರ್ ಕಟೀಲು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News