ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ: ಗೃಹ ಸಚಿವ ಪರಮೇಶ್ವರ ಸ್ಪಷ್ಟನೆ

ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ‌ ತಪ್ಪೇನಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.

Written by - Prashobh Devanahalli | Last Updated : Jan 9, 2025, 01:46 PM IST
    • ನಕ್ಸಲ್ ಚಟುವಟಿಕೆಗೆ ಬರಬಾರದು‌ ಎಂಬ ಸಂದೇಶ ಇಡೀ ಸಮಾಜಕ್ಕೆ ತಲುಪಬೇಕು
    • ನಕ್ಸಲರ‌ ಪರಿವರ್ತನೆಗೆ ಸರ್ಕಾರ ಅವಕಾಶ ಕೊಟ್ಟಿದೆ.
    • ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿಕೆ
ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ: ಗೃಹ ಸಚಿವ ಪರಮೇಶ್ವರ ಸ್ಪಷ್ಟನೆ title=
Home Minister Parameshwara

ಬೆಂಗಳೂರು: ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ‌ ತಪ್ಪೇನಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕ್ಸಲ್ ಚಟುವಟಿಕೆಗೆ ಬರಬಾರದು‌ ಎಂಬ ಸಂದೇಶ ಇಡೀ ಸಮಾಜಕ್ಕೆ ತಲುಪಬೇಕು. ಮುಖ್ಯಮಂತ್ರಿಯವರ ಮುಂದೆ ಶರಣಾದಾಗ ರಾಜ್ಯದಲ್ಲಿ ಎಲ್ಲರಿಗೂ ಗೊತ್ತಾಗುತ್ತದೆ. ನಕ್ಸಲರ‌ ಪರಿವರ್ತನೆಗೆ ಸರ್ಕಾರ ಅವಕಾಶ ಕೊಟ್ಟಿದೆ. ಅದರಲ್ಲಿ ತಪ್ಪೇನಿದೆ‌. ಬಿಜೆಪಿ ಶಾಸಕ‌ ಸುನೀಲ್ ಕ್ಷೇತ್ರದಲ್ಲಿ ನಕ್ಸಲ್ ಚಟುವಟಿಕೆ ಜಾಸ್ತಿ ಇದೆ. ಎಎನ್ಎಫ್ ಕಾರ್ಕಳದಲ್ಲಿ ಇದೆಯಲ್ಲವೇ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ದರ್ಶನ್ ಹೆಸರು ಹೇಳಿಕೊಂಡು ಪಬ್ಲಿಸಿಟಿ ತಗೊಳ್ಳೋ ಅವಶ್ಯಕತೆ ನಂಗಿಲ್ಲ: ನಟಿ ರಚಿತಾ ರಾಮ್‌

ನಕ್ಸಲರು ಶರಣಾದಾಗ ಶಸ್ತ್ರಾಸ್ತ್ರಗಳು ಇರಲಿಲ್ಲ. ಶಸ್ತ್ರಾಸ್ತ್ರಗಳನ್ನು ಬಿಟ್ಟು ಬಂದಿದ್ದಾರೆ. ಎಲ್ಲಿ ಎಸೆದು ಬಂದಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ. ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಶೇ. 99ರಷ್ಟು ಕೊನೆಯಾಗಿದೆ‌. ಶರಣಾಗತರಾದ ನಕ್ಸಲರಲ್ಲಿ ತಮಿಳುನಾಡು, ಕೇರಳ ರಾಜ್ಯದವರು ಇದ್ದಾರೆ. ನಮ್ಮ‌ ಮುಖ್ಯಮಂತ್ರಿಯವರು ಸಂಬಂಧಪಟ್ಟ ರಾಜ್ಯಗಳ ಮುಖ್ಯಮಂತ್ರಿಯವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ಶರಣಾದ ನಕ್ಸಲಿಗರ ಮೇಲೆ ಬೇರೆ ರಾಜ್ಯಗಳಲ್ಲಿ ಪ್ರಕರಣಗಳಿವೆ. ಆ ರಾಜ್ಯದ ಸರ್ಕಾರಗಳು ಸಹ ತೀರ್ಮಾನ ಕೈಗೊಳ್ಳಬೇಕು ಎಂದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಜೆಂಡ ಏನಿದೆ ಎಂಬುದು ಗೊತ್ತಿಲ್ಲ. ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ. ಎಸ್‌ಸಿ, ಎಸ್‌ಟಿ ಸಮಾವೇಶದ ಕುರಿತು‌ ಕರೆದಿದ್ದ ಸಭೆ ಮುಂದೂಡಲು ಅನೇಕ ಕಾರಣಗಳಿವೆ. ಎಐಸಿಸಿ ವರಿಷ್ಟರು ಭಾಗವಹಿಸುವುದಾಗಿ ತಿಳಿಸಿದ್ದರಿಂದ ಮುಂದೂಡಲಾಗಿದೆ.  ಎಐಸಿಸಿ ನಮ್ಮ ಮೇಲೆ ನಂಬಿಕೆ ಇಟ್ಟಿಲ್ಲ ಎಂಬ ಪ್ರಶ್ನೆ ಈಗ ಬರುವುದಿಲ್ಲ. ನೀವೆ ಬೆಳಗ್ಗೆ ಒಂದು, ಸಂಜೆ ಒಂದು ನಂಬಿಕೆಯ ಪ್ರಶ್ನೆ ಹುಟ್ಟು ಹಾಕುತ್ತಿದ್ದೀರಿ ಎಂದು ಹೇಳಿದರು.

ಪ್ರಧಾನ ಕಾರ್ಯದರ್ಶಿಗಳಾದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರು ನನ್ನ ಹತ್ತಿರ ಮಾತನಾಡಿದ್ದಾರೆ. ಗೌಪ್ಯ ಸಭೆ ಏನು ಇಲ್ಲ. ನಮ್ಮ ಸಮಸ್ಯೆಗಳನ್ನು ಚರ್ಚಿಸಬೇಕು ಅಂತ ಸಭೆ ಸೇರುತ್ತಿದ್ದೇವೆ. ಅದಕ್ಕೆ ನೀವೆ ಬನ್ನಿ ಎಂದು ಕರೆದಿದ್ದೇನೆ. ಅವರು ದಿನಾಂಕ ಸೂಚಿಸುವುದಾಗಿ ತಿಳಿಸಿದ್ದಾರೆ. ನಂತರ ಸಭೆ ಮಾಡುತ್ತೇವೆ ಎಂದರು.

ಸ್ಪಷ್ಟವಾದ ಸಭೆಯ ಬಗ್ಗೆ ಕೆಲವರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಮಾಧ್ಯಮದವರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರು ಆತಂಕಕ್ಕೆ ಒಳಗಾಗಿದ್ದಾರೆ? ನನಗೆ ಗೊತ್ತಿರುವ ಹಾಗೇ ಯಾವ ಆತಂಕನೂ ಇಲ್ಲ. ಯಾರು ಆತಂಕ ಪಡುವ ಅಗತ್ಯತೆಯು ಇಲ್ಲ ಎಂದು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇನೆ. ಪಕ್ಷದಿಂದ ಹೊರತಾಗಿ ಸಮಾವೇಶ ಮಾಡುತ್ತೇವೆ ಎಂದು ನಾನು ಎಲ್ಲೂ ಹೇಳಿಲ್ಲ. ನಾನಾ ವಿಶ್ಲೇಷಣೆಗಳಿಗೆ ಉತ್ತರಿಸಲು ಆಗುತ್ತದೆಯೇ? ಒಬ್ಬೊಬ್ಬರು ಒಂದೊಂದು ರೀತಿಯ ವಿಶ್ಲೇಷಣೆ ಮಾಡುವುದು ಸಹಜ. ಡಿ.ಕೆ.ಶಿವಕುಮಾರ್ ಅವರು ನನಗೆ ಆತಂಕವಿದೆ ಎಂದು ಎಲ್ಲಾದರು ಹೇಳಿದ್ದಾರೆಯೇ? ಸುಮ್ಮನೆ ಹೇಳುವುದು ಬೇಡ. ನಿನ್ನೆ ಇಡೀ ದಿನ ಅವರೊಂದಿಗೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಪತ್ರಿಕಾಗೋಷ್ಟಿಯನ್ನು ನಡೆಸಿದ್ದೇವೆ. ನನಗೆ ನಿಮ್ಮ ಆತಂಕ ಇದೆ ಅಂತ ಅವರು ಹೇಳೇ ಇಲ್ಲ ಎಂದು ಪ್ರತಿಕ್ರಿಯಿಸಿದರು.

ದೆಹಲಿಯಲ್ಲಿ ಎಐಸಿಸಿ ಕಚೇರಿ ನಿರ್ಮಾಣಕ್ಕೆ 2009ರಲ್ಲಿ ಅಡಿಗಲ್ಲು ಹಾಕಲಾಗಿತ್ತು. ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಈಗ ಉದ್ಘಾಟನೆಗೆ ಸಿದ್ಧವಾಗಿದ್ದು,‌‌ ಜನವರಿ 15ರಂದು ನಡೆಯುವ ಉದ್ಘಾಟನಾ‌ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಾಗಿ ತಿಳಿಸಿದರು.

ಇದನ್ನೂ ಓದಿ: ಈ ರಾಶಿಯವರಿಗೆ ಶುಕ್ರ ದೆಸೆ ಆರಂಭ :ಕಷ್ಟ ಕಳೆದು ಸಿರಿ ಸಂಪತ್ತು ಒಲಿದು ಬರುವ ಪರ್ವ ಕಾಲ ! ಸ್ವಂತ ಮನೆ, ವಾಹನ ಖರೀದಿ ನನಸಾಗುವ ಸಮಯ

ತಿರುಪತಿಯಲ್ಲಿ ಕಾಲ್ತುಳಿತದಿಂದ ಭಕ್ತರು ಸಾವನ್ನಪ್ಪಿರುವುದು ದುರದೃಷ್ಟಕರ. ಈ ರೀತಿ ಆಗಬಾರದಿತ್ತು. ಮೃತರ ಕುಟುಂಬದವರಿಗೆ ಭಗವಂತನು ದುಃಖ ಭರಿಸುವ ಶಕ್ತಿ ಕರುಣಿಸಲಿ. ಈವರೆಗಿನ ಮಾಹಿತಿ ಪ್ರಕಾರ, ಘಟನೆಯಲ್ಲಿ ರಾಜ್ಯದವರು ಇದ್ದರು ಎಂಬುದು ಗೊತ್ತಾಗಿಲ್ಲ ಎಂದು ಹೇಳಿದರು.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News