ಬಿಜೆಪಿಯವರು ಮಾಡಿರುವ ಆರೋಪಗಳಿಗೆ ಇದುವರೆಗೂ ಯಾವುದೇ ದಾಖಲೆಗಳಿಲ್ಲ- ಸಚಿವ ಸಂತೋಷ್ ಲಾಡ್

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡುವಾಗ ಕೇವಲ 14 ಸೈಟ್ ಗಳ ಮೇಲೆ ಮಾತ್ರ ಏಕೆ ಅನುಮತಿ ನೀಡಿದ್ದಾರೆ. ಅಧಿಕಾರಿಗಳ ಮೇಲೆ ಏಕೆ ಕ್ರಮವಿಲ್ಲ. 125 ಸೈಟ್ ಗಳನ್ನು ಪಡೆದವರ ಮೇಲೆ ಏಕೆ ಕ್ರಮವಿಲ್ಲ ಎಂದು ಅವರು ಪ್ರಶ್ನಿಸಿದರು

Written by - Manjunath N | Last Updated : Sep 19, 2024, 07:26 PM IST
  • ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡುವಾಗ ಕೇವಲ 14 ಸೈಟ್ ಗಳ ಮೇಲೆ ಮಾತ್ರ ಏಕೆ ಅನುಮತಿ ನೀಡಿದ್ದಾರೆ. ಅಧಿಕಾರಿಗಳ ಮೇಲೆ ಏಕೆ ಕ್ರಮವಿಲ್ಲ.
  • 125 ಸೈಟ್ ಗಳನ್ನು ಪಡೆದವರ ಮೇಲೆ ಏಕೆ ಕ್ರಮವಿಲ್ಲ.
ಬಿಜೆಪಿಯವರು ಮಾಡಿರುವ ಆರೋಪಗಳಿಗೆ ಇದುವರೆಗೂ ಯಾವುದೇ ದಾಖಲೆಗಳಿಲ್ಲ- ಸಚಿವ ಸಂತೋಷ್ ಲಾಡ್  title=

ಬೆಂಗಳೂರು: ನಾವು ಮಾಡುವ ಆರೋಪಗಳು ದಾಖಲೆ ಸಮೇತ ಇವೆ. ಬಿಜೆಪಿಯವರು ಮಾಡಿರುವ ಆರೋಪಗಳಿಗೆ ಇದುವರೆಗೂ ಯಾವುದೇ ದಾಖಲೆಗಲಿಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.

ಈ ಹಗರಣದ ಮುಖ್ಯ ರೂವಾರಿ ಕುಮಾರಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಯಡಿಯೂರಪ್ಪನವರು ಉತ್ತರ ಕೊಡಬೇಕು. ಮುಖ್ಯವಾಗಿ ಬಿಜೆಪಿಯವರು ನಾವು ಬಿಡುಗಡೆ ಮಾಡುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಹೋಗಿ ರಾಜ್ಯಪಾಲರಿಗೆ ನೀಡಿ ಮತ್ತೊಮ್ಮೆ ತನಿಖೆಗೆ ಆದೇಶಿಸಿ ಎಂದು ಅವರಲ್ಲಿ ಮನವಿ ಮಾಡಬೇಕು. ರಾಷ್ಟ್ರಪತಿಗಳು ಮಧ್ಯ ಪ್ರವೇಶ ಮಾಡಿ ತನಿಖೆ ನಡೆಸಿ ಎಂದು ರಾಜ್ಯಪಾಲರಿಗೆ ಪತ್ರ ಬರೆಯಬೇಕು. 

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡುವಾಗ ಕೇವಲ 14 ಸೈಟ್ ಗಳ ಮೇಲೆ ಮಾತ್ರ ಏಕೆ ಅನುಮತಿ ನೀಡಿದ್ದಾರೆ. ಅಧಿಕಾರಿಗಳ ಮೇಲೆ ಏಕೆ ಕ್ರಮವಿಲ್ಲ. 125 ಸೈಟ್ ಗಳನ್ನು ಪಡೆದವರ ಮೇಲೆ ಏಕೆ ಕ್ರಮವಿಲ್ಲ ಎಂದು ಅವರು ಪ್ರಶ್ನಿಸಿದರು

ಮಾಧ್ಯಮಗೋಷ್ಠಿಯಲ್ಲಿ ಮಾಜಿ ಎಂಎಲ್ ಸಿ ನಾರಾಯಣ ಸ್ವಾಮಿ, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರಾದ ರಮೇಶ್ ಬಾಬು, ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರಾದ ವಿಜಯ್ ಮತ್ತಿಕಟ್ಟಿ ಹಾಗೂ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಮತ್ತು ಮಾಧ್ಯಮ ಕಾರ್ಯದರ್ಶಿಗಳಾದ ದೀಪಕ್ ತಿಮ್ಮಯ ಅವರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News