ಕನ್ನಡಪರ ಹೋರಾಟಗಾರರ ಬಗ್ಗೆ ಗೌರವವಿದೆ, ಆದರೆ ಕಾನೂನು ಕೈಗೆತ್ತಿಕೊಂಡು ಆಸ್ತಿಪಾಸ್ತಿ ಹಾನಿ ಸಹಿಸಲ್ಲ: ಡಿಸಿಎಂ

ಈ ಹಿಂದೆ ಯಾರೋ ಒಬ್ಬರು ದೂರು ನೀಡಿದರು ಎಂದು ನಾರಾಯಣಗೌಡರ ಮೇಲೆ ಕೇಸ್ ದಾಖಲಾದಾಗ, ಅವರ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಪೊಲೀಸ್ ಅಧಿಕಾರಿಗಳ ಜತೆ ನಾನೇ ಮಾತನಾಡಿದ್ದೆ. ಕನ್ನಡ ಕಡ್ಡಾಯ ಮಾಡಲು ನೋಟೀಸ್ ನೀಡೋಣ. ಆದರೆ ಕಾನೂನು ಕೈಗೆತ್ತಿಕೊಳ್ಳಬಾರದು. ನಾರಾಯಣಗೌಡರಿಗೆ ಈ ಮಾತನ್ನು ಇವತ್ತೂ ಹೇಳುತ್ತೇನೆ, ಮುಂದೆಯೂ ಹೇಳುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. 

Written by - Yashaswini V | Last Updated : Dec 28, 2023, 02:05 PM IST
  • ಕನ್ನಡ ಉಳಿಸಿ, ಬೆಳೆಸುವ ಹೋರಾಟಕ್ಕೆ ನಮ್ಮ ಅಭ್ಯಂತರವಿಲ್ಲ.
  • ಹೋರಾಟದ ಹೆಸರಿನಲ್ಲಿ ಆಸ್ತಿಪಾಸ್ತಿ ಹಾನಿ ಮಾಡುವುದನ್ನು ನಾವು ಒಪ್ಪುವುದಿಲ್ಲ, ಸಹಿಸುವುದೂ ಇಲ್ಲ.
  • ಇದರಿಂದ ಕರ್ನಾಟಕದ ಗೌರವ, ಘನತೆಗೆ ಧಕ್ಕೆಯಾಗುತ್ತದೆ. ಕಾನೂನು ಪಾಲನೆ ಎಲ್ಲರ ಕರ್ತವ್ಯ.- ಡಿಸಿಎಂ ಡಿಕೆ ಶಿವಕುಮಾರ್
ಕನ್ನಡಪರ ಹೋರಾಟಗಾರರ ಬಗ್ಗೆ ಗೌರವವಿದೆ, ಆದರೆ ಕಾನೂನು ಕೈಗೆತ್ತಿಕೊಂಡು ಆಸ್ತಿಪಾಸ್ತಿ ಹಾನಿ ಸಹಿಸಲ್ಲ: ಡಿಸಿಎಂ  title=

ಬೆಂಗಳೂರು: "ನಾವೆಲ್ಲರೂ ಕನ್ನಡ ಉಳಿಸಬೇಕು. ಕನ್ನಡಪರ ಹೋರಾಟಗಾರರ ಮೇಲೆ ನಮಗೆ ಗೌರವವಿದೆ. ಹಾಗಂತ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ. ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಸದಾಶಿವನಗರ ನಿವಾಸ ಹಾಗೂ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಕನ್ನಡ ನಾಮಫಲಕ ಕುರಿತ ಹೋರಾಟದ ವಿಚಾರವಾಗಿ ಕೇಳಿದ ಪ್ರಶ್ನೆಗಳಿಗೆ  ಉತ್ತರಿಸಿದ್ದು ಹೀಗೆ:

ಕನ್ನಡ ಉಳಿಸಿ, ಬೆಳೆಸುವ ಹೋರಾಟಕ್ಕೆ ನಮ್ಮ ಅಭ್ಯಂತರವಿಲ್ಲ.  ಹೋರಾಟದ ಹೆಸರಿನಲ್ಲಿ ಆಸ್ತಿಪಾಸ್ತಿ ಹಾನಿ ಮಾಡುವುದನ್ನು ನಾವು ಒಪ್ಪುವುದಿಲ್ಲ, ಸಹಿಸುವುದೂ ಇಲ್ಲ. ಇದರಿಂದ ಕರ್ನಾಟಕದ ಗೌರವ, ಘನತೆಗೆ ಧಕ್ಕೆಯಾಗುತ್ತದೆ. ಕಾನೂನು ಪಾಲನೆ ಎಲ್ಲರ ಕರ್ತವ್ಯ. ನೀವು ಹೋರಾಟ ಮಾಡುವುದಾದರೆ ಮಾಡಿ, 60% ನಾಮಫಲಕ ಹಾಕಬೇಕು ಎನ್ನುವುದನ್ನು ಕೇಳಲು ಒಂದು ಇತಿಮಿತಿ ಇದೆ ಎಂದರು. 

ಇದನ್ನೂ ಓದಿ- ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ ಕಾನೂನು ಬರಲಿದೆ

ಈ ಹಿಂದೆ ಯಾರೋ ಒಬ್ಬರು ದೂರು ನೀಡಿದರು ಎಂದು ನಾರಾಯಣಗೌಡರ ಮೇಲೆ ಕೇಸ್ ದಾಖಲಾದಾಗ, ಅವರ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಪೊಲೀಸ್ ಅಧಿಕಾರಿಗಳ ಜತೆ ನಾನೇ ಮಾತನಾಡಿದ್ದೆ. ಕನ್ನಡ ಕಡ್ಡಾಯ ಮಾಡಲು ನೋಟೀಸ್ ನೀಡೋಣ. ಆದರೆ ಕಾನೂನು ಕೈಗೆತ್ತಿಕೊಳ್ಳಬಾರದು. ನಾರಾಯಣಗೌಡರಿಗೆ ಈ ಮಾತನ್ನು ಇವತ್ತೂ ಹೇಳುತ್ತೇನೆ, ಮುಂದೆಯೂ ಹೇಳುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. 

ಪ್ರತಿಭಟನೆ ಮಾಡಲಿ, ಧಿಕ್ಕಾರ ಕೂಗಲಿ. ನಾವು ತಪ್ಪು ಮಾಡಿದರೆ ನಮ್ಮ ಮನೆ ಮುಂದೆಯೂ ಬಂದು ಪ್ರತಿಭಟನೆ ಮಾಡಲಿ. ನಾವೂ ಕನ್ನಡಿಗರೇ. ಕನ್ನಡದ ಬಗ್ಗೆ ನಮಗೂ ಬದ್ಧತೆ ಇದೆ. ಸಚಿವ ಸಂಪುಟದಲ್ಲಿ ನಿಮ್ಮ ಟಿಪ್ಪಣಿಗಳೇನೆ ಇದ್ದರೂ ಕನ್ನಡದಲ್ಲೇ ಇರಬೇಕು ಎಂದು ಮುಖ್ಯಮಂತ್ರಿಗಳು ಸಚಿವರುಗಳಿಗೆ ಸ್ಪಷ್ಟವಾಗಿ ಹೇಳಿದ್ದಾರೆ. ಕನ್ನಡ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದವರು ಭರವಸೆಯನ್ನೂ ನೀಡಿದ್ದಾರೆ. 

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪಾಠ ಕಲಿಸುತ್ತೇವೆ ಎಂಬ ನಾರಾಯಣಗೌಡರ ಎಚ್ಚರಿಕೆ ವಿಚಾರವಾಗಿ ಕೇಳಿದಾಗ, "ನಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಕನ್ನಡಪರ ಹೋರಾಟಗಾರರ ಸಹಕಾರ ಇಲ್ಲ ಎಂದು ನಾನು ಹೇಳುವುದಿಲ್ಲ. ಹಾಗೆಂದು ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರು ಏನು ಬೇಕಾದರೂ ಮಾಡಲಿ. ಅವರು ತಪ್ಪು ಮಾಡಿದ್ದಾರೆ. ಕಾನೂನು ಕೈಗೆತ್ತಿಕೊಳ್ಳಲು ನಾವು ಬಿಡುವುದಿಲ್ಲ. ಅನೇಕರು ಇಲ್ಲಿ ಬಂದು ಬಂಡವಾಳ ಹೂಡಿಕೆ ಮಾಡಿದ್ದಾರೆ. ಹೊರಗಡೆಯಿಂದ ಬಂದವರು ಇಲ್ಲಿ ಬದುಕುತ್ತಿದ್ದಾರೆ. ಅವರಿಗೆ ಕನ್ನಡ ಬಳಕೆ ಬಗ್ಗೆ ಹೇಳೋಣ. ಹಾಗೆಂದು ಅವರನ್ನು ಬೆದರಿಸಲು ಅವಕಾಶವಿಲ್ಲ" ಎಂದು ತಿಳಿಸಿದರು. 

ಇದನ್ನೂ ಓದಿ- ಕನ್ನಡವನ್ನು ಕಡೆಗಣಿಸಿದ್ದ ಪರಭಾಷಿಕರ ಮೊಂಡುತನಕ್ಕೆ ಪಾಠ

ಅನೇಕರು ಕನ್ನಡ ನಾಮಫಲಕ ಹಾಕದಿರುವ ಬಗ್ಗೆ ಕೇಳಿದಾಗ,  "ಯಾರೆಲ್ಲಾ ಕನ್ನಡ ನಾಮಫಲಕ ಹಾಕಿಲ್ಲ ಅವರಿಗೆ ನಾವು ನೊಟೀಸ್ ಜಾರಿ ಮಾಡುತ್ತೇವೆ" ಎಂದು ತಿಳಿಸಿದರು. 

ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರ ಅಕ್ರಮ ಮಾಡಿತ್ತು ಎಂಬ ಯತ್ನಾಳ್ ಅವರ ಹೇಳಿಕೆ ವಿಚಾರವಾಗಿ ಕೇಳಿದಾಗ, "ಇಲ್ಲಿ ಆ ವಿಚಾರ ಮಾತನಾಡುವುದು ಬೇಡ. ನಾವು ಅದೇ ವಿಚಾರವಾಗಿ ಜನರ ಗಮನ ಸೆಳೆದಿದ್ದೆವು. ಈಗ ಅವರು ಸೆಳೆಯುತ್ತಿದ್ದಾರೆ. ಬಹಳ ಸಂತೋಷ. ಮುಂದೆ ಅದರ ಬಗ್ಗೆ ಚರ್ಚೆ ಮಾಡೋಣ" ಎಂದರು.

ಅನೇಕ ಅಂಗಡಿ ಮುಂಗಟ್ಟುಗಳು ಮುಚ್ಚಿರುವ ವಿಚಾರವಾಗಿ ಕೇಳಿದಾಗ,  "ಎಲ್ಲಾ ವ್ಯಾಪಾರಿಗಳು ಸರ್ಕಾರದ ಆದೇಶ ಪಾಲನೆ ಮಾಡಬೇಕು. ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಕಡ್ಡಾಯವಾಗಿ ಬಳಸಬೇಕು. ಸರ್ಕಾರ ನಿಮ್ಮ ಹಾಗೂ ನಿಮ್ಮ ಹಿತಾಸಕ್ತಿ ಕಾಯಲು ಬದ್ಧವಾಗಿದೆ" ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News